ಬೆಂಗಳೂರು : ಹೆರಿಗೆಗಾಗಿ ಆಸ್ಪತ್ರೆಗೆ ಅಲೆದು ಕೊನೆಗೆ ಆಟೋದಲ್ಲೇ ಮಗುವಿಗೆ ಜನ್ಮ ನೀಡಿ, ಮಗುವನ್ನು ಕಳೆದುಕೊಂಡ ತಾಯಿಯ ಪರ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಧ್ವನಿ ಎತ್ತಿದ್ದಾರೆ.
ಟ್ವೀಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, ಹೆರಿಗೆಗಾಗಿ ಬೆಂಗಳೂರಿನ ಎಲ್ಲ ಆಸ್ಪತ್ರೆಗಳನ್ನು ಗರ್ಭಿಣಿಯೊಬ್ಬರು ಸುತ್ತಾಡಿದ್ದು, ಕೊನೆಗೆ ಎಲ್ಲಿಯೂ ಸೇರಿಸಿಕೊಳ್ಳದೆ ಇದ್ದಾಗ ಆಟೋದಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ಆ ತಾಯಿ ಹಸುಗೂಸನ್ನು ಕಳೆದುಕೊಳ್ಳಬೇಕಾಯಿತು. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಮೊದಲು ಈ ನತದೃಷ್ಟ ತಾಯಿಯ ಮಗುವಿನ ಕೊಲೆಗಡುಕ ಆಸ್ಪತ್ರೆಗಳ ಮೇಲೆ ಕ್ರಮಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.
-
ರಾಜ್ಯದಲ್ಲಿ ಕೊರೊನಾ ಸೋಂಕಿತರಿಗಿಂತ ಹೆಚ್ಚು, ಬೇರೆ ಕಾಯಿಲೆಯ ರೋಗಿಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಸಾಯುತ್ತಿದ್ದಾರೆ.
— Siddaramaiah (@siddaramaiah) July 20, 2020 " class="align-text-top noRightClick twitterSection" data="
@CMofKarnataka ಅವರೇ,
ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಪರವಾನಿಗೆಯನ್ನು ರದ್ದುಮಾಡುವ ಕಠಿಣ ಕ್ರಮಕೈಗೊಳ್ಳಿ.
ನಿಮ್ಮ ಹುಸಿಬೆದರಿಕೆಗೆ ಅವರು ಜಗ್ಗುವವರಲ್ಲ.
2/2
">ರಾಜ್ಯದಲ್ಲಿ ಕೊರೊನಾ ಸೋಂಕಿತರಿಗಿಂತ ಹೆಚ್ಚು, ಬೇರೆ ಕಾಯಿಲೆಯ ರೋಗಿಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಸಾಯುತ್ತಿದ್ದಾರೆ.
— Siddaramaiah (@siddaramaiah) July 20, 2020
@CMofKarnataka ಅವರೇ,
ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಪರವಾನಿಗೆಯನ್ನು ರದ್ದುಮಾಡುವ ಕಠಿಣ ಕ್ರಮಕೈಗೊಳ್ಳಿ.
ನಿಮ್ಮ ಹುಸಿಬೆದರಿಕೆಗೆ ಅವರು ಜಗ್ಗುವವರಲ್ಲ.
2/2ರಾಜ್ಯದಲ್ಲಿ ಕೊರೊನಾ ಸೋಂಕಿತರಿಗಿಂತ ಹೆಚ್ಚು, ಬೇರೆ ಕಾಯಿಲೆಯ ರೋಗಿಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಸಾಯುತ್ತಿದ್ದಾರೆ.
— Siddaramaiah (@siddaramaiah) July 20, 2020
@CMofKarnataka ಅವರೇ,
ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಪರವಾನಿಗೆಯನ್ನು ರದ್ದುಮಾಡುವ ಕಠಿಣ ಕ್ರಮಕೈಗೊಳ್ಳಿ.
ನಿಮ್ಮ ಹುಸಿಬೆದರಿಕೆಗೆ ಅವರು ಜಗ್ಗುವವರಲ್ಲ.
2/2
ರಾಜ್ಯದಲ್ಲಿ ಕೊರೊನಾ ಸೋಂಕಿತರಿಗಿಂತ ಹೆಚ್ಚು, ಬೇರೆ ಕಾಯಿಲೆಯ ರೋಗಿಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಸಾಯುತ್ತಿದ್ದಾರೆ. ಮುಖ್ಯಮಂತ್ರಿಗಳೇ, ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಪರವಾನಿಗೆಯನ್ನು ರದ್ದುಮಾಡಿ, ಕಠಿಣ ಕ್ರಮಕೈಗೊಳ್ಳಿ. ನಿಮ್ಮ ಹುಸಿ ಬೆದರಿಕೆಗೆ ಅವರು ಜಗ್ಗುವವರಲ್ಲ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಕೋವಿಡ್ ಜತೆ ಕೋವಿಡ್‌ಯೇತರ ಸಮಸ್ಯೆಗಳಿಗೂ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಖಾಸಗಿ ಆಸ್ಪತ್ರೆಗಳಿಗೆ ಈ ಬಗ್ಗೆ ನಿರ್ದೇಶನ ನೀಡಬೇಕು ಎಂದು ಅವರು ಟ್ವಿಟರ್ನಲ್ಲಿ ಆಗ್ರಹಿಸಿದ್ದಾರೆ.