ETV Bharat / state

ತಾಯಿ ಹಸುಗೂಸುಗಳ ಸಾವು ನಿಮ್ಮ ಆತಃಕರಣ ಕಲಕಿಲ್ಲವೇ?... ಸಚಿವ ಸುಧಾಕರ್ ವಿರುದ್ಧ ಹರಿಹಾಯ್ದ ಹೆಚ್​ಡಿಕೆ - ತುಮಕೂರು ಆಸ್ಪತ್ರೆ ಪ್ರಕರಣ

ತುಮಕೂರಿನ ತಾಯಿ ಮತ್ತು ಎರಡು ಕಂದಮ್ಮಗಳ ಅಮಾನುಷ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಸುಧಾಕರ ಅವರು ನೈತಿಕ ಹೊಣೆ ಹೊತ್ತು ಆರೋಗ್ಯ ಸಚಿವರು ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ಟ್ವೀಟ್​ನಲ್ಲಿ ಒತ್ತಾಯಿಸಿದ್ದಾರೆ.

Former CM Kumaraswamy, Health Minister Dr Sudhakar
ಮಾಜಿ ಸಿಎಂ ಕುಮಾರ ಸ್ವಾಮಿ , ಆರೋಗ್ಯ ಸಚಿವ ಡಾ.ಸುಧಾಕರ
author img

By

Published : Nov 5, 2022, 11:05 AM IST

ಬೆಂಗಳೂರು: ತುಮಕೂರಿನ ಮೂರು ಅಮಾನುಷ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಆರೋಗ್ಯ ಸಚಿವರು ರಾಜೀನಾಮೆ ನೀಡಬೇಕು. ನೈತಿಕತೆ ಪ್ರದರ್ಶಿಸುವುದು ನಿಮಗೆ ಗೊತ್ತಿಲ್ಲದಿದ್ದರೆ, ಅದನ್ನು ಕೊನೆಪಕ್ಷ ನಿಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಾದರೂ ಪ್ರದರ್ಶಿಸಬೇಕು. ಇಲ್ಲವೇ ಈ ಘಟನೆಗೆ ಕಾರಣರಾದ ನಿಮ್ಮನ್ನು ಸಂಪುಟದಿಂದ ಕೈಬಿಡಬೇಕು. ಅಂಥ ನೈತಿಕತೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಇದೆಯಾ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ಟ್ವೀಟ್​​ನಲ್ಲಿ ಪ್ರಶ್ನಿಸಿದ್ದಾರೆ.

ಸಾವು, ಕ್ರೌರ್ಯ ಸಂಭ್ರಮಿಸುವ ಸರ್ಕಾರ: ಸಾವು, ಕ್ರೌರ್ಯ ಸಂಭ್ರಮಿಸುವ ʼಸಾವುಗೇಡಿ ಸರ್ಕಾರʼದ ಆಡಳಿತದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಸಾವಿನಕೂಪಗಳನ್ನಾಗಿ ಪರಿವರ್ತಿಸಿದ ಕೀರ್ತಿ ನಿಮ್ಮದಾಗಿದೆ. ಆರೋಗ್ಯ ಸಚಿವ ಸುಧಾಕರ್ ಅವರೇ, ನಿಮಗೆ ಸ್ವಲ್ಪದಾರೂ ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಈ 3 ಅಮಾನುಷ ಸಾವುಗಳ ಬಗ್ಗೆ ಪಶ್ಚಾತ್ತಾಪ ಬೇಡವೆ, ಇಲ್ಲವೇ ಪಾಪಪ್ರಜ್ಞೆ ಇರಬೇಡವೇ? ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಆಸ್ಪತ್ರೆಗೆ ಕರೆತಂದ ಮಹಿಳೆಗೆ ಬೆದರಿಕೆ: ತುಮಕೂರು ಆಸ್ಪತ್ರೆಯಲ್ಲಿ ನಡೆದಿದ್ದೇನು? ಆ ವೈದ್ಯೆ ಮತ್ತು ಸಿಬ್ಬಂದಿಯ ನಿರ್ದಯ, ಕ್ರೌರ್ಯದ ವರ್ತನೆ, ಆಸ್ಪತ್ರೆಗೆ ಕರೆತಂದ ಮಹಿಳೆಗೆ ಈಗ ಪೊಲೀಸ್​​ರಿಂದ ಬೆದರಿಕೆ ಹಾಕುತ್ತಿರುವುದು ನನಗೆ ಮಾಹಿತಿ ಇದೆ. ಅಧಿಕಾರ ಇದೆಯೆಂದು ಏನು ಬೇಕಾದರೂ ಮಾಡಬಹುದಾ? ಇನ್ನು ಆರೇ ತಿಂಗಳು ತಡೆಯಿರಿ, ನಿಮ್ಮ ಅಧಿಕಾರದ ಅಮಲು ಇಳಿಯುತ್ತದೆ ಎಂದು ಕಿಡಿಕಾರಿದ್ದಾರೆ. ಇಂತಹ ದಾರುಣ ಸಾವುಗಳಾದ ಮೇಲಾದರೂ ಹದಗೆಟ್ಟ ವ್ಯವಸ್ಥೆಯನ್ನು ಸರಿಪಡಿಸುವ ಬದಲು ಅದನ್ನೇ ಸಮರ್ಥಿಸಿಕೊಳ್ಳುವುದು ವಿಕಾರವಲ್ಲದೆ ಮತ್ತೇನು? ಜಿಲ್ಲಾಸ್ಪತ್ರೆಯಲ್ಲೇ ಇಂಥ ದುಃಸ್ಥಿತಿ ಇದ್ದರೆ, ತಾಲೂಕು, ಅದಕ್ಕೂ ಕೆಳಹಂತದ ಆರೋಗ್ಯ ಕೇಂದ್ರಗಳ ಪಾಡೇನು? ಹೇಳಿ ಸಚಿವರೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಯಿ ಹಸುಗೂಸುಗಳ ಸಾವು ಆತಃಕರಣ ಕಲಕಿಲ್ಲವೇ?: ಆಸ್ಪತ್ರೆಯಿಂದ ನಿರ್ದಯವಾಗಿ ಹೊರಹಾಕಲ್ಪಟ್ಟ ಆ ತಾಯಿ, ನಾಲ್ಕು ಗೋಡೆಗಳ ನಡುವೆ ಇಡೀ ರಾತ್ರಿಯೆಲ್ಲಾ ನರಳಿ ಜೀವ ಚೆಲ್ಲಿದ್ದಾರೆ. ಜನಿಸಿದ ತಕ್ಷಣ ಉಸಿರುಬಿಟ್ಟ ಆ ಎರಡು ಕಂದಮ್ಮಗಳ ಮರಣ ನಿಮ್ಮ ಆತಃಕರಣವನ್ನು ಕಲಕಿಲ್ಲವೇ ಸಚಿವರೇ? ಕರ್ನಾಟಕ ಕಂಡ ಅತ್ಯಂತ ಕರಾಳ ಕ್ರೌರ್ಯವಿದು. ಅದನ್ನು ನಾನು ಪ್ರಶ್ನಿಸಿದ್ದೇ ತಪ್ಪಾ? ಎಂದು ಕೇಳಿದ್ದಾರೆ.

ಹಿಂದಿನ ಘಟಗೂ ಇದಕ್ಕೂ ಏನೂ ಸಂಬಂಧ: ನನ್ನ ಸರ್ಕಾರವಿದ್ದಾಗ ಚಾಮರಾಜನಗರದ ಸುಳವಾಡಿಯ ದೇಗುಲದಲ್ಲಿ ನಡೆದ ವಿಷಪ್ರಸಾದ ಪ್ರಕರಣಕ್ಕೂ ಇದಕ್ಕೂ ಸಂಬಂಧವೇನು? ಆ ಘಟನೆ ನಡೆದಾಗ ನಾನು ಚೆನ್ನೈನಲ್ಲಿ ಅಧಿಕೃತ ಪ್ರವಾಸದಲ್ಲಿದ್ದೆ. ವಿಷಯ ಗೊತ್ತಾದ ಕೂಡಲೇ ಹಿಂದಿರುಗಿ ಸ್ಥಳಕ್ಕೆ ಭೇಟಿ ನೀಡಿದ್ದೆ. ಅದಕ್ಕೂ ಇದಕ್ಕೂ ಸಂಬಂಧವೇನು? ಅಲ್ಲಿ ನಡೆದಿದ್ದು ಷಡ್ಯಂತ್ರ, ಇಲ್ಲಿ ನಡೆದದ್ದು ಕ್ರೌರ್ಯ. ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್‌ ದುರಂತದಿಂದ 36 ಜನರ ಸಾವಿಗೆ ಕಾರಣರಾಗಿದ್ದು ಯಾರು? ನಿಮ್ಮ ವೈಫಲ್ಯವಲ್ಲವೇ? ರಾಜ್ಯದ ಉದ್ದಗಲಕ್ಕೂ ನಡೆದ ಸಾವುಗಳ ರಣಕೇಕೆ ನಿಮ್ಮ ಕಿವಿಗೆ ಇಂಪಾಗಿತ್ತಾ? ಕೋವಿಡ್‌ ಹೆಸರಿನಲ್ಲಿ ನಡೆದ ಕೊಳ್ಳೆ ಬಗ್ಗೆ ನನಗಿಂತ ನಿಮ್ಮ ಪಕ್ಷದವರಿಗೇ ಚೆನ್ನಾಗಿ ಗೊತ್ತು ಎಂದು ತಮ್ಮ ಟ್ವೀಟ್ ನಲ್ಲಿ ಹರಿಹಾಯ್ದಿದ್ದಾರೆ.

ಕಾಸಿಗಾಗಿ ಹುದ್ದೆ: ಇದು ನಿಮ್ಮ ಸುಲಿಗೆ ನೀತಿ. ವೈದ್ಯರು, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಬಿಕರಿಗಿಟ್ಟಿದ್ದೀರಿ. ಅವರ ಒಂದು ವರ್ಷದ ವೇತನ ನೀವು ನಿಗದಿ ಮಾಡಿರುವ ದರ. ಬೆಕ್ಕು ಕಣ್ಮುಚ್ಚಿ ಹಾಲು ಕುಡಿಯುತ್ತಿದೆ ಎಂದರೆ ಲೋಕಕ್ಕೆ ಕಾಣುವುದಿಲ್ಲವೇ? ಕಳ್ಳಬೆಕ್ಕಿನ ಆಟ ಕಾಲದುದ್ದಕ್ಕೂ ನಡೆಯುವುದಿಲ್ಲ, ನೆನಪಿರಲಿ ಸಚಿವರೇ! ಎಂದು ಎಚ್ಡಿಕೆ ತಿರುಗೇಟು ನೀಡಿದ್ದಾರೆ.

ನಿಮ್ಮ ಪರ್ಸಂಟೇಜ್‌ಗೆ ಹೈಡ್ರಾಮ ನಡೆಸಿದಿರಿ: ನಿಮ್ಮ ಪರ್ಸಂಟೇಜ್‌ ವ್ಯವಹಾರದ ಬಗ್ಗೆ ಮಾತನಾಡಿದ ಗುತ್ತಿಗೆದಾರರಾದ ಕೆಂಪಣ್ಣ ಅವರು ಚಿಕ್ಕಬಳ್ಳಾಪುರದ ಕಾರ್ಯಕ್ರಮವೊಂದಕ್ಕೆ ಬರಬೇಕಿತ್ತು. ಅವರನ್ನು ಬರದಂತೆ ತಡೆಯಲು ಏನೆಲ್ಲಾ ಹೈಡ್ರಾಮಾ ನಡೆಸಿದಿರಿ, ಯಾರ ಕಾಲು ಹಿಡಿದಿರಿ ಎನ್ನುವ ಮಾಹಿತಿ ನನಗೂ ಇದೆ. ʼಗಾಜಿನ ಮನೆಯಲ್ಲಿ ಕೂತು ಗೋಲಿಯಾಟ ಆಡುವುದು ಕ್ಷೇಮವಲ್ಲʼ ಸಚಿವರೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:'ತುರ್ತು ಚಿಕಿತ್ಸೆಗೆ ಯಾವ ದಾಖಲೆಗಳೂ ಮುಖ್ಯವಲ್ಲ, ಅಮಾನವೀಯತೆ ತೋರಿದರೆ ವಜಾಗೊಳಿಸಲು ಕಾನೂನು ತಿದ್ದುಪಡಿ'

ETV Bharat Logo

Copyright © 2025 Ushodaya Enterprises Pvt. Ltd., All Rights Reserved.