ETV Bharat / state

ಎಕ್ಸ್​ಎಲ್​ ವಾಹನಕ್ಕೆ ಟಿಪ್ಪರ್ ಡಿಕ್ಕಿ : ಓರ್ವ ಸವಾರ ಸಾವು, ಮತ್ತೋರ್ವನಿಗೆ ಗಂಭೀರ ಗಾಯ - ಅಲ್ಟೋ ಇನ್ನೋವಾ ಕಾರು ಡಿಕ್ಕಿ

ಟಿವಿಎಸ್ ಎಕ್ಸ್​ಎಲ್ ದ್ವಿಚಕ್ರ ವಾಹನಕ್ಕೆ ಟಿಪ್ಪರ್​ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಎಕ್ಸ್​ಎಲ್​ ವಾಹನಕ್ಕೆ ಟಿಪ್ಪರ್ ಡಿಕ್ಕಿ
ಎಕ್ಸ್​ಎಲ್​ ವಾಹನಕ್ಕೆ ಟಿಪ್ಪರ್ ಡಿಕ್ಕಿ
author img

By

Published : Apr 25, 2023, 12:11 PM IST

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡದೆ ಪರಿಣಾಮ ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಾಯಂಡಹಳ್ಳಿ ಜಂಕ್ಷನ್​ನಲ್ಲಿ ನಡೆದಿದೆ. ಟಿವಿಎಸ್ ಎಕ್ಸ್​ಎಲ್ ಸ್ಕೂಟರಿನಲ್ಲಿ ಬರುತ್ತಿದ್ದ ಇಬ್ಬರು ಯುವಕರಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಕೆಳಗೆ ಸಿಲುಕಿ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯ‌ಗಳಾಗಿವೆ. ಮೃತನ ವಿವರ ಇನ್ನೂ ಲಭ್ಯವಾಗಿಲ್ಲ. ಅಪಘಾತ ಬೆನ್ನಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದು, ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಅಲ್ಟೋ ಇನ್ನೋವಾ ಕಾರು ಡಿಕ್ಕಿ: ಏ.22 ರಂದು ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಇರುವ ಬೆಂಗಳೂರು ಮೈಸೂರು ಹೆದ್ದಾರಿ ಬೈಪಾಸ್ ರಸ್ತೆಯಲ್ಲಿ ಅಲ್ಟೋ ಮತ್ತು ಇನ್ನೋವಾ ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದರು. ಸಂಬಂಧಿಕರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು. ಭೀಕರ ಅಪಘಾತದ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಮೃತಪಟ್ಟಿದ್ದರು. ರವಿ ಪೂಜಾರ್​ ಬಿನ್ ಭೀಮಪ್ಪ ಪೂಜಾರಿ ಹಾಗೂ ಅವರ ಮಕ್ಕಳಾದ ಸಿರಿ ಪೂಜಾರಿ ಮತ್ತು ಇಂಚರ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದರು. ಲಕ್ಷ್ಮಿ ಪೂಜಾರಿ ಮತ್ತು ಶಾಂತಲಾ ಪೂಜಾರಿ ಎಂಬುವವರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದರು.

ಮೃತ ರವಿ ಪೂಜಾರಿ ಎಂಬುವವರು ​ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನವರಾಗಿದ್ದರು. ಇವರು ಬೆಂಗಳೂರಿನ ರಾಜೀವ್ ಗಾಂಧಿ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ ಆಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿನ್ನೆಲೆ ಕೆಂಗೇರಿಯಲ್ಲಿ ವಾಸವಾಗಿದ್ದರು. ಪತ್ನಿಯ ತವರೂರಲ್ಲಿ ಕುಟುಂಬ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿತ್ತು.

ಇದನ್ನೂ ಓದಿ: ಮಳವಳ್ಳಿ ಬಳಿ ಭೀಕರ ರಸ್ತೆ ಅಪಘಾತ.. ಇಬ್ಬರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಇದನ್ನೂ ಓದಿ: ಮುಂಬೈ- ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು, 22 ಮಂದಿಗೆ ಗಾಯ

ಸಾರಿಗೆ ಬಸ್ ಕಾರು ಡಿಕ್ಕಿ: ಏ.14 ರಂದು ಕೊಡಗು ಜಿಲ್ಲೆಯಲ್ಲಿ ನಡೆದಿದ್ದ ಕಾರು ಹಾಗೂ ರಾಜ್ಯ ಸಾರಿಗೆ ಬಸ್ ನಡುವಿನ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮಂಗಳೂರಿನಿಂದ ಮಡಿಕೇರಿಯತ್ತ ಬರುತ್ತಿದ್ದ ಸರ್ಕಾರಿ ಬಸ್ ಹಾಗೂ ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿತ್ತು.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು. ಕಾರಿನಲ್ಲಿದ್ದ ಪ್ರಯಾಣಿಕರು ಶೀಲಾ, ಪ್ರಿಯಾಂಕ, ಮನಸ್ವಿ, ಯಶಸ್ ಗೌಡ, ಮಿಷಿಕಾ ಮೃತಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ ಎಂಬುವವರನ್ನು ಮಂಗಳೂರು ಆಸ್ಪತ್ರೆ ಹಾಗೂ ಬಿಯಾನ್ ಗೌಡ ಎಂಬುವರನ್ನು ಚಿಕಿತ್ಸೆಗೆ ಕೆವಿಜಿ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಮಡಿಕೇರಿಯಲ್ಲಿ ಕಾರು-ಕೆಎಸ್​ಆರ್​ಟಿಸಿ ಬಸ್​ ನಡುವೆ ಅಪಘಾತ: 6 ಜನ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.