ETV Bharat / state

ಬಿಜೆಪಿಯವರಿಗೆ ಬೇಕಾಗಿರುವುದು ಕಮಿಷನ್ ಅಷ್ಟೇ: ಡಿ.ಕೆ ಸುರೇಶ್ ಆರೋಪ - DK Suresh on bjp

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮತ್ತು ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿಲ್ಲ ಎಂದು ಸಂಸದ ಡಿ.ಕೆ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

MP DK Suresh
ಸಂಸದ ಡಿ.ಕೆ ಸುರೇಶ್
author img

By

Published : Jul 15, 2022, 8:07 PM IST

ಬೆಂಗಳೂರು: ಬಿಜೆಪಿಯವರಿಗೆ ಬೇಕಾಗಿರೋದು ಕಮೀಷನ್, ಒಎಂಆರ್ ಶೀಟ್ ತಿದ್ದೋದಷ್ಟೇ ಎಂದು ಸಂಸದ ಡಿ.ಕೆ ಸುರೇಶ್ ಟೀಕಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತೀವ್ರ ಮಳೆಯಾಗುತ್ತಿದೆ. ಕಳೆದ ಬಾರಿ ಆಗಿರುವ ನಷ್ಟಕ್ಕೆ‌ ಇನ್ನೂ ಪರಿಹಾರ ಕೊಟ್ಟಿಲ್ಲ. ಇಲ್ಲಸಲ್ಲದ ಸಬೂಬುಗಳನ್ನು ಕೊಡುತ್ತಾರೆ. ರೈತರ ಪಂಪ್ ಸೆಟ್ ಮನೆಗಳು ಬಿದ್ದಿವೆ. ಅದಕ್ಕೆ ಪರಿಹಾರ ಇಲ್ಲ ಅಂತ ಅಧಿಕಾರಿಗಳು ಹೇಳ್ತಾರೆ. ಈಗ ಇವರು ಎಲ್ಲಿಂದ ಪರಿಹಾರ ನೀಡ್ತಾರೆ ಎಂದು ವಾಗ್ದಾಳಿ ನಡೆಸಿದರು.

ಸಂಸದ ಡಿ.ಕೆ ಸುರೇಶ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಶೇ 40ರಷ್ಟು ಕಮೀಷನ್ ಬಗ್ಗೆ ಧ್ವನಿ ಎತ್ತಿದ್ರು. ಅವರು ಆತ್ಮಹತ್ಯೆಯನ್ನು ಮಾಡಿಕೊಂಡ್ರು. ಈ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗುತ್ತಿಲ್ಲ. ಸರ್ಕಾರ ಪ್ರಕರಣ ಮುಚ್ಚಲು ಹೊರಟಿದೆ ಎಂದು ಸಂತೋಷ್ ಪಾಟೀಲ್ ಪತ್ನಿ‌ ರಾಜ್ಯಪಾಲರನ್ನು ಭೇಟಿ‌ ಮಾಡಿ ದೂರು‌ ಸಲ್ಲಿಸಿದ್ದಾರೆ.

ಹಾಗಾಗಿ ಹೈಕೋರ್ಟ್ ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ತನಿಖೆ ನಡೆಯಬೇಕೆಂದು ಒತ್ತಾಯಿಸಿದರು. ಸಂತೋಷ್ ಪಾಟೀಲ್ ಅಷ್ಟೇ ಅಲ್ಲ, ಕಂಟ್ರ್ಯಾಕ್ಟರ್ ಅಸೋಸಿಯೇಷನ್ ಕೂಡ ದೂರು ಕೊಟ್ಟಿತ್ತು. ಕೇಂದ್ರ ಸರ್ಕಾರ ತನಿಖೆ ಮಾಡಬೇಕಿತ್ತು. ಐಟಿ, ಇಡಿ, ಸಿಬಿಐ ಸಂಸ್ಥೆ ಮಧ್ಯಪ್ರವೇಶ ಮಾಡಬೇಕಿತ್ತು. ಆದರೆ ಬಿಜೆಪಿ ನಾಯಕರು ಪ್ರಕರಣ ಮುಚ್ಚಲು ಪ್ರಯತ್ನಿಸುತ್ತಿದ್ದಾರೆಂದು ಆರೋಪಿಸಿದರು.

ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲೂ ತನಿಖೆ ಆಗುತ್ತಿಲ್ಲ. ಯಾರ್ಯಾರು ಇದರಲ್ಲಿ‌ ಇದ್ದಾರೆ ಎಂಬ ಬಗ್ಗೆ ಸೂಕ್ತ ತನಿಖೆಯಾಗಬೇಕು. ಒತ್ತಡಕ್ಕೆ ಮಣಿಯಬಾರದು. ಯಾರೇ ಆಗಲಿ ಒತ್ತಡ ಹಾಕಿದ್ರೆ ಸುಮ್ಮನಿರಬೇಡಿ. ರಾಜ್ಯದ ಪೊಲೀಸ್ ಇಲಾಖೆ ಗೌರವ ಉಳಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಚುನಾವಣೆ ಯಾವಾಗ ಬಂದರೂ ಎದುರಿಸಲು ಕಾಂಗ್ರೆಸ್ ಸಿದ್ಧ: ಡಿಕೆಶಿ

ಮೊಟ್ಟೆ ವಿತರಣೆ ಬೇಡ ಎಂಬ ಕೇಂದ್ರದ ನಿಲುವು ವಿಚಾರವಾಗಿ ಪ್ರತಿಕ್ರಿಯಿಸಿ, ಸರ್ಕಾರ ಬಡ ಮಕ್ಕಳ ಆಹಾರಕ್ಕೆ ಕಣ್ಣು ಹಾಕಿದೆ. ಬಿಜೆಪಿ ತನ್ನ ಅಜೆಂಡಾವನ್ನು ಮುಂದೆ ತರುತ್ತಿದೆ. ಮಕ್ಕಳ ಪೌಷ್ಠಿಕಾಂಶ ವಿಚಾರದಲ್ಲೂ ರಾಜಕೀಯ ತರಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.