ETV Bharat / state

₹50.22 ಲಕ್ಷ ಎಲ್ಲಿ ಸಿಕ್ಕಿತೋ ನಮ್ಗೆ ಗೊತ್ತಿಲ್ಲ.. ಸಿಬಿಐ ದಾಳಿ ಬಗ್ಗೆ  ಡಿ ಕೆ ಸುರೇಶ್‌ ಸ್ಪಷ್ಟನೆ - ಡಿ.ಕೆ ಸುರೇಶ್​ ನಿವಾಸದ ಮೇಲೆ ಸಿಬಿಐ ದಾಳಿ

ನನ್ನ ಮತ್ತು ಅಣ್ಣ ಡಿ ಕೆ ಶಿವಕುಮಾರ್​ ಮನೆಗಳಲ್ಲಿ ₹6.78 ಲಕ್ಷ ಮಾತ್ರ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಉಳಿದ ₹50.22 ಲಕ್ಷ ಹಣ ಎಲ್ಲಿ ಸಿಕ್ಕಿದೆ, ಅದರ ಹಿನ್ನೆಲೆ ಏನು ಎಂಬುದನ್ನು ಅಧಿಕಾರಿಗಳೇ ಸ್ಪಷ್ಟಪಡಿಸಬೇಕು..

MP DK Suresh Reaction about CBI Ride on His residence
ಸಿಬಿಐ ದಾಳಿ ಬಗ್ಗೆ ಡಿ.ಕೆ ಸುರೇಶ್ ಸ್ಪಷ್ಟೀಕರಣ
author img

By

Published : Oct 6, 2020, 4:34 PM IST

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ತಮ್ಮ ನಿವಾಸದ ಮೇಲೆ ನಡೆದಿರುವ ಸಿಬಿಐ ದಾಳಿಯ ಸಂಬಂಧ ಸಂಸದ ಡಿ ಕೆ ಸುರೇಶ್ ಸ್ಪಷ್ಟಣೆ ನೀಡಿದ್ದಾರೆ.

ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, ಪ್ರಮುಖವಾಗಿ ಕನಕಪುರ, ಬೆಂಗಳೂರು ಮತ್ತು ದೆಹಲಿಯ ನಮ್ಮ ಮನೆ ಮತ್ತು ಕಚೇರಿಗಳಿಗೆ ಬಂದು ಯಾವುದೇ ಕಿರುಕುಳ ನೀಡದೆ ವೃತ್ತಿಪರವಾಗಿ ನಡೆದುಕೊಂಡ ಸಿಬಿಐ ಅಧಿಕಾರಿಗಳಿಗೆ ಧನ್ಯವಾದ ಹೇಳಲು ಇಚ್ಛಿಸುತ್ತೇನೆ. ದಾಖಲೆ ಪರಿಶೀಲನೆ ವೇಳೆ ನನ್ನ ಮತ್ತು ಅಣ್ಣನ ಮನೆಯಲ್ಲಿ ಒಟ್ಟು 6.78 ಲಕ್ಷ ರೂ. ಸಿಕ್ಕಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅದರಲ್ಲಿ ನನ್ನ ದೆಹಲಿ ನಿವಾಸದಲ್ಲಿ ₹1.57 ಲಕ್ಷ, ಬೆಂಗಳೂರಿನ ಅಣ್ಣನ ಮನೆಯಲ್ಲಿ ₹1.71 ಲಕ್ಷ, ಅವರ ಬೆಂಗಳೂರಿನ ಕಚೇರಿಯಲ್ಲಿ ₹3.5 ಲಕ್ಷ ಸಿಕ್ಕಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ನನ್ನ ಅಣ್ಣನ ದೆಹಲಿ ಮತ್ತು ಬೆಂಗಳೂರಿನ ಮನೆಗಳಲ್ಲಿ ಯಾವುದೇ ಹಣ ಸಿಕ್ಕಿರುವುದಿಲ್ಲ. ನಮ್ಮ ಎರಡೂ ಮನೆಗಳಲ್ಲಿ ಅಧಿಕಾರಿಗಳು ಈವರೆಗೂ ಯಾವುದೇ ಆಭರಣಗಳನ್ನು ವಶಪಡಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಭರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಐಟಿ ಮತ್ತು ಇಡಿಗೆ ಕೊಟ್ಟ ದಾಖಲೆಗಳನ್ನೇ ಮತ್ತೊಮ್ಮೆ ಸಿಬಿಐ ಸ್ಪಷ್ಟನೆಗೆ ತೆಗೆದುಕೊಂಡಿದೆ. ಸಿಬಿಐ ಅಧಿಕಾರಿಗಳು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ದಾಖಲೆಗಳಲ್ಲಿ, ಒಟ್ಟು ₹57 ಲಕ್ಷ ಸಿಕ್ಕಿರುವ ಮಾಹಿತಿ ಕೊಟ್ಟಿದ್ದಾರೆ. ಇದರಲ್ಲಿ ಬಾಕಿ ₹50.22 ಲಕ್ಷ ಹಣ ಎಲ್ಲಿ ಸಿಕ್ಕಿದೆ, ಅದರ ಹಿನ್ನೆಲೆ ಏನು ಎಂಬುದನ್ನು ಅಧಿಕಾರಿಗಳೇ ಸ್ಪಷ್ಟಪಡಿಸಬೇಕು ಎಂದಿದ್ದಾರೆ.

ಈ ಹಿಂದೆ ಐಟಿ ಮತ್ತು ಇಡಿ ಅಧಿಕಾರಿಗಳು ಪರಿಶೀಲಿಸಿದ ದಾಖಲೆಗಳ ನಕಲು ಪ್ರತಿಗಳನ್ನು ಸಿಬಿಐಗೆ ಕೊಟ್ಟಿರುತ್ತೇವೆ. ಇನ್ನು ಮುಂದೆಯೂ ಬೇಕಾದ ಎಲ್ಲಾ ದಾಖಲೆಗಳನ್ನು ಒಪ್ಪಿಸಲು ತಯಾರಿದ್ದೇವೆ. ಈ ಎಲ್ಲಾ ಪರೀಕ್ಷೆಗಳನ್ನು ಎದುರಿಸಿ ಹೊರಬರುವ ವಿಶ್ವಾಸ ನಮಗಿದೆ. ಅಭಿಮಾನಿಗಳು ಮತ್ತು ಹಿತೈಷಿಗಳಾದ ನಿಮ್ಮೆಲ್ಲರ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.