ETV Bharat / state

ರಾಜ್ಯ, ಕೇಂದ್ರ ಸರ್ಕಾರಗಳ ವಿರುದ್ಧ ಲೋಕಸಭೆಯಲ್ಲಿ ಧ್ವನಿ ಎತ್ತಿದ ಸಂಸದ ಡಿ. ಕೆ. ಸುರೇಶ್

ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಶೇ.3ಕ್ಕೆ ಕುಸಿದಿದೆ. ಬಿಜೆಪಿ ಹೊಗಳುವಂತಹ ಸಾಧನೆ ಏನು ಮಾಡಿಲ್ಲ. ಇಂತಹ ಪರಿಸ್ಥಿತಿ ನಡುವೆ ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆ ತರಲು ಮುಂದಾಗಿದೆ. ನಿನ್ನೆಯಷ್ಟೇ ಎರಡು ರೈತ ವಿರೋಧಿ ಮಸೂದೆ ಮಂಡಿಸಲಾಗಿದೆ..

MP DK Suresh's speech in Lok Sabha
ಲೋಕಸಭೆಯಲ್ಲಿ ಮಾತನಾಡಿದ ಸಂಸದ ಡಿ.ಕೆ ಸುರೇಶ್​
author img

By

Published : Sep 20, 2020, 3:46 PM IST

Updated : Sep 20, 2020, 5:28 PM IST

ನವದೆಹಲಿ/ಬೆಂಗಳೂರು : ರೈತ ವಿರೋಧಿ ಕಾಯ್ದೆಗಳು, ಕೊರೊನಾ ನಿರ್ವಹಣೆಯಲ್ಲಿ ವಿಫಲ, ರಾಜ್ಯದ ಆರ್ಥಿಕ ದುಸ್ಥಿತಿ, ಸಾಲದ ಹೊರೆ, ರಸಗೊಬ್ಬರ ಕೊರತೆ, ಜಿಡಿಪಿ ಕುಸಿತ, ನಿರುದ್ಯೋಗ, ಖಾಸಗೀಕರಣ ಸೇರಿ ಹಲವು ಸಮಸ್ಯೆಗಳು ಹಾಗೂ ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ಲೋಕಸಭೆಯಲ್ಲಿ ಧ್ವನಿ ಎತ್ತಿದ್ದಾರೆ.

2020-21ನೇ ಸಾಲಿನ ಬಜೆಟ್ ಅನುದಾನದ ಮೇಲಿನ ಚರ್ಚೆ ವೇಳೆ ಮಾತನಾಡಿದ ಸಂಸದ ಡಿ ಕೆ ಸುರೇಶ್, ಕೇಂದ್ರ ಸರ್ಕಾರ ದೇಶದ ಆರ್ಥಿಕತೆ ನಿರ್ವಹಣೆ ಮಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದ ಸಾಲದ ಹೊರೆ ಮತ್ತಷ್ಟು ಹೆಚ್ಚಿಸುವಂತಹ ನಿರ್ದೇಶನಗಳನ್ನು ನೀಡುತ್ತಿರುವುದನ್ನು ನಾವು ಗಮನಿಸಿದ್ದೇವೆ. ಅವೈಜಾನಿಕ ಆರ್ಥಿಕ ನೀತಿ ಜಾರಿಗೊಳಿಸಲಾಗಿದೆ, ಕೋವಿಡ್, ನೆರೆ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ. ಜಿಡಿಪಿ ಶೇ.-23ಕ್ಕೆ ಕುಸಿದಿದೆ ಎಂದು ಆರೋಪಿಸಿದರು.

ಲೋಕಸಭೆಯಲ್ಲಿ ಮಾತನಾಡಿದ ಸಂಸದ ಡಿ ಕೆ ಸುರೇಶ್​

ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಶೇ.3ಕ್ಕೆ ಕುಸಿದಿದೆ. ಬಿಜೆಪಿ ಹೊಗಳುವಂತಹ ಸಾಧನೆ ಏನು ಮಾಡಿಲ್ಲ. ಇಂತಹ ಪರಿಸ್ಥಿತಿ ನಡುವೆ ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆ ತರಲು ಮುಂದಾಗಿದೆ. ನಿನ್ನೆಯಷ್ಟೇ ಎರಡು ರೈತ ವಿರೋಧಿ ಮಸೂದೆ ಮಂಡಿಸಲಾಗಿದೆ. ಕೃಷಿ ಪ್ರಧಾನ ದೇಶದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸಾಲ ನೀಡಲು ಆತ್ಮನಿರ್ಭರ ಯೋಜನೆಯಡಿ ₹5 ಲಕ್ಷ ಕೋಟಿ ಕೃಷಿ ಕ್ಷೇತ್ರಕ್ಕೆ ತೊಡಗಿಸುವುದಾಗಿ ತಿಳಿಸಿದ್ದಾರೆ. ಈಗಾಗಲೇ ನೀಡುವ ಸಾಲವನ್ನು ಸೇರಿಸಿ ರೈತರಿಗೆ ₹5 ಲಕ್ಷ ಕೋಟಿ ಸಾಲ ನೀಡುವುದಾಗಿ ಹೇಳಿರುವ ಕೇಂದ್ರ ಸರ್ಕಾರ, ಜನರ ದಾರಿ ತಪ್ಪಿಸುತ್ತಿದೆ ಎಂದಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್​​ಗಳಲ್ಲಿ ಚಿನ್ನಾಭರಣ ಸಾಲದ ಮೇಲಿನ ಸಬ್ಸಿಡಿಯನ್ನು ನರೇಂದ್ರ ಮೋದಿ ಸರ್ಕಾರ ತೆಗೆದು ಹಾಕುವುದು ರೈತ ವಿರೋಧಿ ಕ್ರಮವಲ್ಲವೇ? ಇದಕ್ಕೆ ಪ್ರಧಾನ ಮಂತ್ರಿಗಳು ಹಾಗೂ ವಿತ್ತ ಸಚಿವರು ಉತ್ತರಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ಸಹಕಾರಿ ಬ್ಯಾಂಕ್​ಗಳ ವ್ಯವಸ್ಥೆ ಹಾಳು ಮಾಡಲು ಪ್ರಯತ್ನಿಸಿದೆ.

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಹೆಚ್ಚುತ್ತಿದೆ, ಇಂಧನ ಬೆಲೆ ಏರಿಕೆ ಮಾಡಿದೆ. ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕ ವಲಯದ ಕ್ಷೇತ್ರಗಳಾದ ವಿಮೆ, ವಿಮಾನಯಾನ, ರೈಲ್ವೆಯನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಇದು, ಉದ್ಯೋಗ ಸೃಷ್ಟಿಗೆ ಭಾರಿ ಹೊಡೆತ ನೀಡಲಿದೆ ಎಂದು ಹೇಳಿದ್ದಾರೆ.

Last Updated : Sep 20, 2020, 5:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.