ಬೆಂಗಳೂರು: ಕೊವೀಡ್-19 ಭೀತಿಯಲ್ಲಿ ಕಳೆದ ಎರಡು ತಿಂಗಳಿಂದ ದೇಶದಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. 4ನೇ ಹಂತದ ಲಾಕ್ಡೌನ್ನಲ್ಲಿ ಕೆಲವೊಂದು ಸಡಿಲಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ. ವಲಸೆ ಕಾರ್ಮಿಕರು ತಮ್ಮ ಊರಿಗಳಿಗೆ ತೆರಳಲು ಶ್ರಮಿಕ್ ರೈಲಿನ ವ್ಯವಸ್ಥೆ ಮಾಡಿದೆ.
ಸದ್ಯ ಪ್ರತಿನಿತ್ಯ ಸಾವಿರಾರು ವಲಸೆ ಕಾರ್ಮಿಕರು ಬೆಂಗಳೂರಿನಿಂದ ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ರಾಜಸ್ಥಾನಕ್ಕೆ ತೆರಳುತ್ತಿದ್ದಾರೆ. ಇಂದು ಸಂಜೆ ಬೆಂಗಳೂರಿನಿಂದ ಮಧ್ಯಪ್ರದೇಶಕ್ಕೆ ಶ್ರಮಿಕ್ ರೈಲು ತೆರಳುತ್ತಿದೆ. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ನೂರಾರು ವಲಸೆ ಕಾರ್ಮಿಕರು ಜನತಾ ಕರ್ಪ್ಯೂವನ್ನು ಲೆಕ್ಕಿಸಿದೆ, ಜಯನಗರ ಪೊಲೀಸ್ ಠಾಣೆಯಲ್ಲಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ.
ಇನ್ನು, ಕಾರ್ಮಿಕರ ನೆರವಿಗೆ ಬಂದಿರುವ ಪೊಲೀಸರು ಮಾನವೀಯತೆ ದೃಷ್ಟಿಯಿಂದ ಕಾರ್ಮಿಕರ ಬಗ್ಗೆ ಮಾಹಿತಿ ಸಂಗ್ರಹಿಸಿ ಅವರನ್ನು ಇಂದು ಸಂಜೆ ಚಿಕ್ಕಬಾಣವಾರ ರೈಲ್ವೆ ನಿಲ್ದಾಣಕ್ಕೆ ಬಿಡಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.