ಬೆಂಗಳೂರು: ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಕೇಂದ್ರ ಅರಣ್ಯ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಕೇರಳದಲ್ಲಿ ಸಂಭವಿಸಿದ ಆನೆಯ ಹತ್ಯೆ ಖಂಡಿಸಿ ಪತ್ರವನ್ನು ಬರೆದಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾನೂನು ಅಡಿಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ರಾಜ್ಯಸಭಾ ಸಂಸದನಾಗಿ 2016ರಿಂದ ಈ ವಿಷಯವಾಗಿ ಮೇಲ್ಮನೆಯಲ್ಲಿ ಮಾತನಾಡುತ್ತಿದ್ದೇನೆ. ಕೂಡಲೇ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
1960ರ ವನ್ಯಜೀವಿ ಸಂರಕ್ಷಣಾ ಕಾನೂನಿನ 11 (1) (ಎ) ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು. ವನ್ಯಜೀವಿಗಳಿಗೂ ಬದುಕುವ ಹಕ್ಕು ಇದೆ. ಈ ಪ್ರಕರಣದ ಆಧಾರದ ಮೇಲೆ ಸೂಕ್ತ ತಿದ್ದುಪಡಿಗಳನ್ನು ಮಾಡಬೇಕು ಎಂದು ರಾಜೀವ್ ಚಂದ್ರಶೇಖರ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.