ಬೆಂಗಳೂರು: ಸಭಾಪತಿ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ಕೊಡಲು ಕಾಂಗ್ರೆಸ್ ಬಿಡಲಿಲ್ಲ. ಸಭಾಪತಿ ಘಟನೆಯಲ್ಲಿ ಬಲಿಪಶು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ.
ಕೋಡಿಹಳ್ಳಿಗೂ ಸಾರಿಗೆ ನೌಕರರಿಗೂ ಏನು ಸಂಬಂಧ?, ನೀನು ಎಷ್ಟು ವರ್ಷ ಆಯ್ತು ಉಳುಮೆ ಮಾಡಿ?. ಹಳ್ಳಿ ಬಿಟ್ಟು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಾರೆ. ಐಷಾರಾಮಿ ಬಂಗಲೆ, ಐಷಾರಾಮಿ ಕಾರಿನಲ್ಲಿ ಓಡಾಡುತ್ತಾರೆ. ನನ್ನ ವೈಯಕ್ತಿಕ ವಿಚಾರ ಮಾತನಾಡಲು ನೀನ್ಯಾರು?, ಬಿಟ್ಟಿ ಹೋರಾಟ, ಬಿಟ್ಟಿ ಪ್ರಚಾರ ತೆಗೆದುಕೊಳ್ಳುತ್ತಾರೆ. ಕೋಡಿಹಳ್ಳಿ. ಎಷ್ಟು ಅಕ್ರಮ ಆಸ್ತಿ ಮಾಡಿದ್ದಿಯಾ? ಎಂದು ಪ್ರಶ್ನಿಸಿದರು.
'ಬಿಜೆಪಿಗೆ ಯಾರೂ ಅನಿವಾರ್ಯ ಅಲ್ಲ'
ಬಿಜೆಪಿಗೆ ಯಾರೂ ಅನಿವಾರ್ಯ ಅಲ್ಲ. ಸಂಖ್ಯಾಬಲದ ಆಧಾರದ ಮೇಲೆ ಬಿಜೆಪಿ ಸರ್ಕಾರ ಮಾಡಿದೆ. ಆದರೆ ಜೆಡಿಎಸ್ಗೆ ಯಾರು ಅನಿವಾರ್ಯ ಅನ್ನೋದು ನನಗೆ ಗೊತ್ತಿಲ್ಲ. ಮೈತ್ರಿ ಬಗ್ಗೆ ಎಲ್ಲಾ ಮಾತಾಡೋಕೆ ನಾನು ಚಿಕ್ಕವನು. ರಾಜಕೀಯದಲ್ಲಿ ನಾನಿನ್ನೂ ಅಂಬೆಗಾಲಿಡ್ತಾ ಇದ್ದೇನೆ ಎಂದರು.
ಸಭಾಪತಿ ಮೇಲೆ ಅವಿಶ್ವಾಸಕ್ಕೆ ನಾವು ಜೆಡಿಎಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ. ಅವರು ಬಹಿರಂಗವಾಗಿಯೇ ಬೆಂಬಲ ನೀಡಿದ್ದಾರೆ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದರು.