ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ನಕಲಿ ಸಿಡಿ ಬಿಡುಗಡೆ ಮಾಡುವ ಮೂಲಕ ರಾಜಕೀಯ ಷಡ್ಯಂತ್ರ ನಡೆಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಆದೇಶಿಸುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಮನವಿ ಮಾಡುವುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ನಿವಾಸಕ್ಕೆ ಶಾಸಕ ರಾಜು ಗೌಡ ಜೊತೆ ಆಗಮಿಸಿ ನೈತಿಕ ಬೆಂಬಲ ನೀಡಿದ ಬಳಿಕ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ತೇಜೋವಧೆ ಮಾಡಲಾಗುತ್ತಿದೆ. ಇಂತಹ ಬ್ಲಾಕ್ ಮೇಲ್ ಮಾಡುವವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಇದನ್ನು ಓದಿ: 4 ತಿಂಗಳ ಮೊದಲೇ ಸಿಡಿ ಬಗ್ಗೆ ಗೊತ್ತಿತ್ತು, ಮಹಾನ್ ನಾಯಕನಿಂದ ಇದೆಲ್ಲಾ ನಡೆದಿದೆ: ರಮೇಶ್ ಜಾರಕಿಹೊಳಿ - VIDEO
ಆರೋಪ ಬರುತ್ತಿದ್ದಂತೆ ನೈತಿಕ ಹೊಣೆ ಹೊತ್ತು, ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರವಾಗಬಾರದು ಎಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ನೋಡಿದರೆ ದೂರದಾರರೇ ದೂರು ವಾಪಸ್ ಪಡೆದಿದ್ದಾರೆ. ಹಾಗಾಗಿ ರಾಜಕೀಯಕ್ಕೆ ಮತ್ತೆ ರಮೇಶ್ ಜಾರಕಿಹೊಳಿ ವಾಪಸ್ ಬರಬೇಕು ಎಂದರು.