ಬೆಂಗಳೂರು: ಮಂಡ್ಯ ಅಕ್ರಮ ಗಣಿಗಾರಿಕೆ ವಿರುದ್ಧದ ಹೋರಾಟಕ್ಕೆ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ಬೆಂಬಲ ಕೋರಿದ್ದಾರೆ.
ಇಂದು ರಾಜಭವನದಲ್ಲಿ ನಡೆದ ರಾಜ್ಯಪಾಲರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖಾಮುಖಿಯಾದ ವೇಳೆ ಸಂಸದೆ ಸುಮಲತಾ ಈ ವಿಚಾರ ಪ್ರಸ್ತಾಪಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸುಮಲತಾ ನಡುವೆ ಗಣಿಗಾರಿಕೆ ಕದನ ವಿಚಾರವಾಗಿ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಏನಮ್ಮಾ ನಿಮ್ಮಿಬ್ಬರ ಮಧ್ಯೆ ಜಟಾಪಟಿ ಜೋರಾಗಿದೆ ಎಂದು ಕೇಳಿದ್ದಾರೆ. ಇದಕ್ಕೆ ಏನಿಲ್ಲ ಸರ್, ಹಾಗೇ ಸ್ವಲ್ಪ ನಡೀತಿದೆ ಎಂದು ಸುಮಲತಾ ಉತ್ತರಿಸಿದ್ದಾರೆ.
ಇದನ್ನೂ ಓದಿ: ಅಂಬರೀಶ್ ಸಮಾಧಿಗೆ ಭೇಟಿ ನೀಡಿದ ಸುಮಲತಾ: ಹೆಚ್ಡಿಕೆ ವಿರುದ್ಧ ಧಿಕ್ಕಾರ ಕೂಗಿದ ಅಭಿಮಾನಿಗಳು
ಬಳಿಕ ಸುಮಲತಾ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮಂಡ್ಯಕ್ಕೆ ಬರುವಂತೆ ಆಹ್ವಾನಿಸಿದರು. ಸುಮಲತಾ ಮಾತಿಗೆ ಪ್ರತಿಕ್ರಿಯಿಸಿ ಬರುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.