ETV Bharat / state

ಪರೀಕ್ಷೆ ಮುಂದೂಡುವಂತೆ ಕೆಪಿಎಸ್​ಸಿಗೆ ಪತ್ರ ಬರೆದ ಸಂಸದ ತೇಜಸ್ವಿ ಸೂರ್ಯ - MP Tejasvi Surya's letter to KPSC

ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರ ಹುದ್ದೆಯ ಮುಖ್ಯ ಪರೀಕ್ಷೆಗಳನ್ನು ಡಿಸೆಂಬರ್ ತಿಂಗಳ 21, 23, 24 ಹಾಗೂ 28ರಂದು ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ.

mp-tejasvi-suryas-letter-to-kpsc-postponing-examination
ಸಂಸದ ತೇಜಸ್ವಿ ಸೂರ್ಯ
author img

By

Published : Dec 17, 2020, 9:22 PM IST

Updated : Dec 17, 2020, 9:29 PM IST

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರ ಹುದ್ದೆಯ ಮುಖ್ಯ ಪರೀಕ್ಷೆ ಮುಂದೂಡುವಂತೆ ಸಂಸದ ತೇಜಸ್ವಿ ಸೂರ್ಯ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ

mp-tejasvi-suryas-letter-to-kpsc-postponing-examination
ಪರೀಕ್ಷೆ ಮುಂದೂಡುವಂತೆ ಕೆಪಿಎಸ್​ಸಿಗೆ ಸಂಸದ ತೇಜಸ್ವಿ ಸೂರ್ಯ ಪತ್ರ

ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರ ಹುದ್ದೆಯ ಮುಖ್ಯ ಪರೀಕ್ಷೆಗಳನ್ನು ಡಿಸೆಂಬರ್ ತಿಂಗಳ 21, 23, 24 ಹಾಗೂ 28ರಂದು ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ.

ಓದಿ: 54 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ ಭೂಪ: ಅವನಷ್ಟೇ ಉದ್ದದ ರಸೀದಿ ನೀಡಿದ ಪೊಲೀಸರು!

ಆದರೆ, ದಿನಾಂಕ 22 ಹಾಗೂ 27ರಂದು ಗ್ರಾಮ ಪಂಚಾಯಿತಿ ಚುನಾವಣೆ ಇರುವುದರಿಂದ ಪರೀಕ್ಷಾ ಕೇಂದ್ರಗಳು ಕೇವಲ ಧಾರವಾಡ, ಬೆಂಗಳೂರಿನಲ್ಲಿ ಇರುವುದರಿಂದ ಹಾಗೂ ಪರೀಕ್ಷೆ ಬರೆಯಲಿರುವ ಹಲವಾರು ಅಭ್ಯರ್ಥಿಗಳು ಸರ್ಕಾರಿ ನೌಕರರಾಗಿದ್ದು, ಚುನಾವಣಾ ಕೆಲಸಗಳಿಗೆ ನೇಮಿಸಲ್ಪಟ್ಟಿರುವ ಕಾರಣ 21 ಮತ್ತು 28ರಂದು ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳಿಗೆ ತೊಂದರೆಯಾಗಲಿದೆ. ಹಾಗಾಗಿ ಪರೀಕ್ಷೆಗಳನ್ನು ಮುಂದೂಡಲು ಕ್ರಮ ಕೈಗೊಳ್ಳುವಂತೆ ಪತ್ರದ ಮೂಲಕ ಕೆಪಿಎಸ್​ಸಿಗೆ ಮನವಿ ಮಾಡಿದ್ದಾರೆ‌.

Last Updated : Dec 17, 2020, 9:29 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.