ETV Bharat / state

ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ : ಮೃತ್ಯುಂಜಯ ಸ್ವಾಮೀಜಿಗೆ ಜಾಮೀನು

ರಾಮನಗರ ಜಿಲ್ಲೆಯ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧ ಬಂಧಿತರಾಗಿರುವ ಮೃತ್ಯುಂಜಯ ಸ್ವಾಮೀಜಿಗೆ ಹೈಕೋರ್ಟ್​ನಿಂದ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

mrityunjaya-swamiji-gets-bail-in-bandemath-swamiji-suicide-case
ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ : ಮೃತ್ಯುಂಜಯ ಸ್ವಾಮೀಜಿಗೆ ಜಾಮೀನು
author img

By

Published : Jan 13, 2023, 9:53 PM IST

ಬೆಂಗಳೂರು : ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೇಲೂರು ಹೋಬಳಿಯ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಮೃತ್ಯುಂಜಯ ಸ್ವಾಮೀಜಿ ಅಲಿಯಾಸ್ ರೇಣುಕಾರಾಧ್ಯ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಮೊದಲನೇ ಆರೋಪಿಯಾದ ಮೃತ್ಯುಂಜಯ ಸ್ವಾಮೀಜಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಮನಗರದ ವಿಚಾರಣಾ ನ್ಯಾಯಾಲಯದ ವಜಾಗೊಳಿಸಿತ್ತು.

ಇದನ್ನು ಪ್ರಶ್ನಿಸಿ ಮೃತ್ಯುಂಜಯ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ನ್ಯಾಯಪೀಠ ಈ ಆದೇಶ ಮಾಡಿದೆ. ವಿಚಾರಣೆ ವೇಳೆ ಮೃತ್ಯುಂಜಯ ಸ್ವಾಮೀಜಿ ಪರ ವಕೀಲರು ವಾದ ಮಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಮೃತ ಸ್ವಾಮೀಜಿ ಬರೆದ ಮರಣಪತ್ರದಲ್ಲಿ ಅರ್ಜಿದಾರರ ಹೆಸರು ಉಲ್ಲೇಖವಾಗಿಲ್ಲ. ಪ್ರಕರಣಕ್ಕೂ ಅರ್ಜಿದಾರರಿಗೂ ಯಾವುದೇ ರೀತಿಯ ನೇರ ಸಂಬಂಧವಿಲ್ಲ. ಆದ್ದರಿಂದ ಅವರಿಗೆ ಜಾಮೀನು ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ ಸರ್ಕಾರದ ಪರ ವಕೀಲರು, ಅರ್ಜಿದಾರರ ವಿರುದ್ದ ಸ್ವಾಮೀಜಿಗೆ ಆತ್ಮ ಹತ್ಯೆಗೆ ಪ್ರಚೋದನೆ ನೀಡಿದ ಆರೋಪವಿದೆ. ಇದೇ ಕಾರಣಕ್ಕೆ ವಿಚಾರಣಾ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದೆ. ಹೀಗಾಗಿ ಅರ್ಜಿ ವಜಾ ಮಾಡಬೇಕು ಎಂದು ನ್ಯಾಯಪೀಠಕ್ಕೆ ವಿವರಿಸಿದರು. ವಾದ - ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರಿಗೆ ಜಾಮೀನು ನೀಡಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ ಏನು?: ಬಸವಲಿಂಗ ಸ್ವಾಮೀಜಿ ಬಂಡೆಮಠದ ತಮ್ಮ ಕೊಠಡಿಯಲ್ಲಿ 2022ರ ಅಕ್ಟೋಬರ್​ 23ರಂದು ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದರು. ಅದರ ಮರು ದಿನ ಅ.24ರ ಬೆಳಗ್ಗೆ 7 ಗಂಟೆಗೆ ಘಟನೆ ಬೆಳಕಿಗೆ ಬಂದಿತ್ತು. ಈ ಬಗ್ಗೆ ಕುದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕುದೂರು ಠಾಣಾ ಪೊಲೀಸರು ಮೃತ ಸ್ವಾಮೀಜಿಯ ಮರಣ ಪತ್ರ ಆಧರಿಸಿ ರೇಣುಕಾರಾಧ್ಯ (ಮೃತ್ಯುಂಜಯ ಸ್ವಾಮಿ), ಜೆ.ಚಂದು ಅಲಿಯಾಸ್ ನೀಲಾಂಬಿಕೆ, ನಿವೃತ್ತ ಶಿಕ್ಷ ಎಂ.ಮಹದೇವಯ್ಯ ಮತ್ತು ಸಹಾಯಕ ಪ್ರಾಧ್ಯಾಪಕ ಬಿ.ಸಿ. ಸುರೇಶ್ ಅವರನ್ನು ಬಂಧಿಸಿದ್ದರು. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಮತ್ತು ಅಪರಾಧಿಕ ಒಳಸಂಚು ರೂಪಿಸಿದ ಆರೋಪವನ್ನು ಬಂಧಿತರ ಮೇಲೆ ಹೊರಿಸಲಾಗಿತ್ತು. 2022ರ ಅಕ್ಟೋಬರ್​ 30ರಿಂದ ನ್ಯಾಯಾಂಗ ಬಂಧನದಲ್ಲಿರುವ ಮೃತ್ಯುಂಜಯ ಸ್ವಾಮೀಜಿ ಜಾಮೀನು ಕೋರಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ಮೂರನೇ ಆರೋಪಿಗೆ ಜಾಮೀನು ನೀಡಿದ್ದ ಕೋರ್ಟ್​: ಪ್ರಕರಣದಲ್ಲಿ ಮೂರನೇ ಆರೋಪಿಯಾದ ಶಿಕ್ಷಕ ಎಂ. ಮಹದೇವಯ್ಯಗೆ ಇತ್ತೀಚೆಗೆ ಜಾಮೀನು ಸಿಕ್ಕಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ರಜಾಕಾಲದ ನ್ಯಾಯಪೀಠ ಕೆಲ ದಿನಗಳ ಆದೇಶ ಮಾಡಿತ್ತು. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಚಂದ್ರಮೌಳಿ ವಾದ ಮಂಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಮೃತ ಸ್ವಾಮೀಜಿ ಬರೆದ ಮರಣ ಪತ್ರದಲ್ಲಿ ಅರ್ಜಿದಾರರ ಹೆಸರು ಉಲ್ಲೇಖಿಸಿಲ್ಲ.

ಸ್ವಾಮೀಜಿ ಅವರ ಜೊತೆಗಿನ ಮಾತುಕತೆ ಕುರಿತಾದ ದೃಶ್ಯಗಳನ್ನು ಒಳಗೊಂಡ ಪೆನ್‌ಡ್ರೈವ್ ಅನ್ನು ಎರಡನೇ ಆರೋಪಿಯಿಂದ ಪಡೆದು ನಾಲ್ಕನೇ ಆರೋಪಿಗೆ ನೀಡಿದ ಆರೋಪ ಮಹದೇವಯ್ಯ ಮೇಲಿದೆ. ಹೀಗೆಂದ ಮಾತ್ರಕ್ಕೆ ಸ್ವಾಮೀಜಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧ ಕೃತ್ಯ ಎಸಗಿದಂತೆ ಆಗುವುದಿಲ್ಲ. ಹೀಗಾಗಿ ಅರ್ಜಿದಾರರಿಗೆ ಜಾಮೀನು ನೀಡಬೇಕು ಎಂದು ವಕೀಲ ಚಂದ್ರಮೌಳಿ ಅವರು ಕೋರಿದ್ದರು. ಇದನ್ನು ಪರಿಗಣಿಸಿದ್ದ ನ್ಯಾಯಪೀಠವು, ಮಹದೇವಯ್ಯಗೆ ಜಾಮೀನು ನೀಡಿತ್ತು.

ಷರತ್ತು ವಿಧಿಸಿದ್ದ ಕೋರ್ಟ್​: ಒಂದು ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಭದ್ರತಾ ಖಾತರಿ ನೀಡಬೇಕು. ಪೂರ್ವಾನುಮತಿ ಇಲ್ಲದೆ ವಿಚಾರಣಾ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೋಗುವಂತಿಲ್ಲ. ಸಾಕ್ಷ್ಯ ನಾಶ ಮಾಡಲು ಸಹ ಯತ್ನಿಸಬಾರದು. ಸಾಕ್ಷಿಗಳ ಮೇಲೆ ಪ್ರಭಾವವನ್ನೂ ಬೀರಬಾರದು ಎಂದು ಜಾಮೀನು ಮಂಜೂರಾತಿಗೆ ನ್ಯಾಯಾಲಯ ಷರತ್ತು ವಿಧಿಸಿತ್ತು.

ಇದನ್ನೂ ಓದಿ: ರಾಮನಗರ: ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.