ETV Bharat / state

'ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ‌ ನಿಭಾಯಿಸುತ್ತೇವೆ' - ಪ್ರಮಾಣ ವಚನ

ರಾಜಭವನದಲ್ಲಿ ಏಳು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇವೆ ಎಂದು ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ‌.

mtb nagaraj and r. shankar
ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್
author img

By

Published : Jan 13, 2021, 6:24 PM IST

ಬೆಂಗಳೂರು: ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇವೆ ಎಂದು ನೂತನ ಸಚಿವರಾದ ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ‌.

ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಹೊರಬರುತ್ತಿದ್ದಂತೆ ಸಚಿವರ ಬೆಂಬಲಿಗರು, ಅಭಿಮಾನಿಗಳು ಶುಭಾಶಯ ಕೋರಿ ಜೈಕಾರ‌ ಹಾಕಿದರು. ಎಂಟಿಬಿ ನಾಗರಾಜ್ ಬೆಂಬಲಿಗರು, ಅವರನ್ನು ಹೆಗಲ ಮೇಲೆ ಕೂರಿಸಿಕೊಂಡು ತಮ್ಮ ಅಭಿಮಾನ ಪ್ರದರ್ಶಿಸಿದರು‌.

ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್

ಈ ವೇಳೆ‌ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುವೆ. ‌ಇಂತಹದ್ದೇ ಖಾತೆ ಕೊಡುವುದಕ್ಕೆ ಬೇಡಿಕೆ ಇಡುವುದಿಲ್ಲ ಎಂದರು.

ಬಳಿಕ ಆರ್.ಶಂಕರ್ ಮಾತನಾಡಿ, ಎರಡು ಬಾರಿ ಸಚಿವನಾದ ಅನುಭವವಿದೆ‌. ಲಭ್ಯವಿರುವ ಯಾವುದೇ ಖಾತೆ ಕೊಟ್ಟರೂ ಕೆಲಸ ಮಾಡುವೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.