ETV Bharat / state

ಅಕ್ಟೋಬರ್ 2 ರಂದು ಖಾದಿ ಉತ್ಪನ್ನ ಖರೀದಿಸಿ: ಶಾಸಕರಿಗೆ ಪತ್ರ ಬರೆದ ಸಚಿವ ಎಂಟಿಬಿ ನಾಗರಾಜ

ಅಕ್ಟೋಬರ್ 2ರ ಗಾಂಧಿ ಜಯಂತಿಯ ಸಂದರ್ಭದಲ್ಲಿ ಖಾದಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಅವುಗಳ ನೆರವಿಗೆ ಎಲ್ಲ ಜನಪ್ರತಿನಿಧಿಗಳು ಬರಬೇಕಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಅವರು ಮನವಿ ಮಾಡಿದ್ದಾರೆ.

ಸಚಿವ ಎಂಟಿಬಿ ನಾಗರಾಜ್
ಸಚಿವ ಎಂಟಿಬಿ ನಾಗರಾಜ್
author img

By

Published : Sep 28, 2022, 6:04 PM IST

ಬೆಂಗಳೂರು: ಖಾದಿ ಸಂಘ - ಸಂಸ್ಥೆಗಳನ್ನು ಪುನಶ್ಚೇತನಗೊಳಿಸಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸನ್ನು ಸಾಕಾರಗೊಳಿಸಲು ಅಕ್ಟೋಬರ್ ‌ 2 ರಂದು ತಮ್ಮ ವ್ಯಾಪ್ತಿಯಲ್ಲಿ ಬರುವ ಖಾದಿ ಭಂಡಾರಗಳಿಗೆ ಭೇಟಿ ನೀಡಿ ಖಾದಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ನಷ್ಟದಲ್ಲಿರುವ ಖಾದಿ ಸಂಘ - ಸಂಸ್ಥೆಗಳಿಗೆ ಉತ್ತೇಜನ ನೀಡುವಂತೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಅವರು ಮನವಿ ಮಾಡಿದ್ದಾರೆ.

ಈ ಸಂಬಂಧ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರುಗಳಿಗೆ ಸಚಿವ ಎಂಟಿಬಿ ನಾಗರಾಜ್ ಪತ್ರ ಬರೆದು ಕೋರಿದ್ದಾರೆ. ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯ ಮತ್ತು ಸ್ವಾವಲಂಬಿ ಗ್ರಾಮ ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಸ್ಥಾಪಿಸಲಾಗಿದೆಯಾದರೂ ಅದು ಲಾಭದಾಯಕವಾಗಿಲ್ಲ.

ರಾಜ್ಯದಲ್ಲಿ ಖಾದಿ ಉತ್ಪನ್ನಗಳನ್ನು ಉತ್ಪಾದಿಸುವ ಸುಮಾರು 200 ಸಂಸ್ಥೆಗಳಿದ್ದು, ಇವುಗಳಲ್ಲಿ ಸುಮಾರು 20 ಸಾವಿರ ನೂಲುವವರು ಮತ್ತು ನೇಕಾರರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಆದರೆ, ಕೋವಿಡ್​ನಿಂದಾಗಿ ಖಾದಿ ಸಂಘ-ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಹಾಗಾಗಿ, ಅಕ್ಟೋಬರ್ 2ರ ಗಾಂಧಿ ಜಯಂತಿಯ ಸಂದರ್ಭದಲ್ಲಿ ಖಾದಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಅವುಗಳ ನೆರವಿಗೆ ಎಲ್ಲ ಜನಪ್ರತಿನಿಧಿಗಳು ಬರಬೇಕಿದೆ ಎಂದು ಸಚಿವರು ಮನವಿ ಮಾಡಿದ್ದಾರೆ.

ಓದಿ: ಪಿಎಫ್​ಐ ಬ್ಯಾನ್​ ಸ್ವಾಗತಿಸಿದ ಕಾಂಗ್ರೆಸ್​ ನಾಯಕರು: ಆರ್​ಎಸ್​ಎಸ್ ವಿರುದ್ಧವೂ ಕ್ರಮಕ್ಕೆ ಒತ್ತಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.