ETV Bharat / state

2ನೇ ಬಾರಿಗೆ ಮಂತ್ರಿಯಾದ ಎಂಟಿಬಿ ನಾಗರಾಜ್.. ಹೊಸಕೋಟೆ ಸಾಹುಕಾರ್‌ನ ರಾಜಕೀಯ ಹಾದಿ ಹೀಗಿದೆ..

ಬಿಜೆಪಿ ವಿಧಾನ ಪರಿಷತ್‌ ಸದಸ್ಯರಾಗಿರುವ ಎಂಟಿಬಿ ನಾಗರಾಜ್ ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಎಂಟಿಬಿ ಅವರ ರಾಜಕೀಯ ಜೀವನ ರಂಗು ರಂಗಾಗಿದೆ..

MTB Nagaraj profile
ಎಂಟಿಬಿ ನಾಗರಾಜ್ ರಾಜಕೀಯ ಜೀವನ
author img

By

Published : Jan 13, 2021, 5:56 PM IST

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದವರಲ್ಲೊಬ್ಬರಾದ ಶ್ರೀಮಂತ ರಾಜಕಾರಣಿ ಎಂಟಿಬಿ ನಾಗರಾಜ್ ಸಚಿವ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್​-ಜೆಡಿಎಸ್​​​ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಕಮಲ ಮುಡಿದಿದ್ದರು. ಬಿಜೆಪಿಗೆ ಬಂದು ಉಪ ಚುನಾವಣೆಯಲ್ಲಿ ಸೋತು ಅತಂತ್ರ ಸ್ಥಿತಿಯಲ್ಲಿದ್ದ ಅವರು, ನಂತರದಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಇದೀಗ ಮಂತ್ರಿ ಮಂಡಲ ಸೇರಿದ್ದಾರೆ.

ಎಂಟಿಬಿ ನಾಗರಾಜ್ ಅವರು 1952ರಂದು ಜನಿಸಿದ್ದು, ಕುರುಬ ಜನಾಂಗಕ್ಕೆ ಸೇರಿದ್ದಾರೆ. ಸಾವಿರಾರು ಕೋಟಿ ಒಡೆಯರಾಗಿರುವ ಇವರು, ಅತ್ಯಂತ ಶ್ರೀಮಂತ ರಾಜಕಾರಣಿಯಾಗಿದ್ದಾರೆ..

ಎಂಟಿಬಿ ರಾಜಕೀಯ ಜೀವನ

  • 2013 - ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆ
  • 2018 - 2019ರವರೆಗೆ ವಸತಿ ಸಚಿವರಾಗಿ ಕಾರ್ಯ ನಿರ್ವಹಣೆ
  • 2019 - ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ
  • 2019 - ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ
  • 2019 - ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ವಿರುದ್ಧ ಸೋಲು
  • 2020 - ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ
  • 2021 - ನೂತನ ಸಚಿವರಾಗಿ ಪ್ರಮಾಣವಚನ ಸ್ಪೀಕಾರ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.