ETV Bharat / state

₹705 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ: ಸಚಿವ ಎಂಟಿಬಿ - ಎಂ.ಟಿ.ಬಿ.ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಬಗ್ಗೆ ಸಭೆ

ರಾಜ್ಯದ 302 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-4ನೇ ಹಂತದ ಯೋಜನೆಯಡಿ 3885 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯ ಸಚಿವ ಸಂಪುಟ ಕಳೆದ ಜನವರಿಯಲ್ಲಿ ಅನುಮೋದನೆ ನೀಡಿತ್ತು. ಅಲ್ಲದೆ, 3ನೇ ಹಂತದ ಯೋಜನೆಯಲ್ಲಿ ಉಳಿಕೆಯಾಗಿದ್ದ ಹಣದಲ್ಲಿ ಬೆಳಗಾವಿ,ರಾಮನಗರ,ಬಳ್ಳಾರಿ,ಚಿಕ್ಕಮಗಳೂರು,ಬಾಗಲಕೋಟೆ, ಉತ್ತರ ಕನ್ನಡ ಮತ್ತು ವಿಜಯನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಲ್ಲಿ ಬದಲಿ ಕಾಮಗಾರಿ ಕೈಗೊಳ್ಳಲು ಸಹ ಸಭೆ ಅನುಮೋದನೆ ನೀಡಿದೆ.

705 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ಮಾಡಲಾಗಿದೆ ಎಂದ ಎಂಟಿಬಿ

author img

By

Published : Apr 6, 2022, 4:19 PM IST

ಬೆಂಗಳೂರು: ಮೈಸೂರು,ಉಡುಪಿ, ರಾಮನಗರ, ಕೊಡಗು, ಬಳ್ಳಾರಿ, ದಾವಣಗೆರೆ ಮತ್ತು ಬೆಳಗಾವಿ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ 2022-23ನೇ ಸಾಲಿನಿಂದ 2024-25ನೇ ಸಾಲಿನವರೆಗಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-4ನೇ ಹಂತದ ಯೋಜನೆಗೆ 705 ಕೋಟಿ ರೂ. ಕ್ರಿಯಾ ಯೋಜನೆಗಳಿಗೆ ರಾಜ್ಯಮಟ್ಟದ ಸಮಿತಿ ಅನುಮೋದನೆ ನೀಡಿದೆ. ಪೌರಾಡಳಿತ, ಸಣ್ಣಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ.ನಾಗರಾಜ್ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ-4ನೇ ಹಂತದ 3 ನೇ ಸಮಿತಿ ಮತ್ತು ನಗರೋತ್ಥಾನ-3ನೇ ಹಂತದ ಯೋಜನೆಗಳ 18 ನೇ ರಾಜ್ಯಮಟ್ಟದ ಸಮಿತಿಯ ಸಭೆ ವಿಧಾನಸೌಧದಲ್ಲಿ ಇಂದು ನಡೆಯಿತು.

2022-23ನೇ ಸಾಲಿನಿಂದ 2024-25 ನೇ ಸಾಲಿನವರೆಗಿನ 4ನೇ ಹಂತದ ಯೋಜನೆಯ ಈ ಕ್ರಿಯಾ ಯೋಜನೆಗಳಿಂದ ಮೈಸೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 75 ಕೋಟಿ ರೂಪಾಯಿ,ಕೊಡಗು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ 55 ಕೋಟಿ ರೂಪಾಯಿ, ಬಳ್ಳಾರಿ -80 ಕೋಟಿ ರೂಪಾಯಿ, ರಾಮನಗರ-125 ಕೋಟಿ ರೂ., ದಾವಣಗೆರೆ-70 ಕೋಟಿ ರೂಪಾಯಿ, ಬೆಳಗಾವಿ-260 ಕೋಟಿ ರೂ. ಹಾಗೂ ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 40 ಕೋಟಿ ರೂ. ಗಳ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ ಎಂದು ಸಚಿವರು ಹೇಳಿದ್ದಾರೆ.

ರಾಜ್ಯದ 302 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-4ನೇ ಹಂತದ ಯೋಜನೆಯಡಿ 3885 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯ ಸಚಿವ ಸಂಪುಟ ಕಳೆದ ಜನವರಿಯಲ್ಲಿ ಅನುಮೋದನೆ ನೀಡಿತ್ತು. ಅಲ್ಲದೆ, 3ನೇ ಹಂತದ ಯೋಜನೆಯಲ್ಲಿ ಉಳಿಕೆಯಾಗಿದ್ದ ಹಣದಲ್ಲಿ ಬೆಳಗಾವಿ,ರಾಮನಗರ,ಬಳ್ಳಾರಿ,ಚಿಕ್ಕಮಗಳೂರು,ಬಾಗಲಕೋಟೆ, ಉತ್ತರ ಕನ್ನಡ ಮತ್ತು ವಿಜಯನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಲ್ಲಿ ಬದಲೀ ಕಾಮಗಾರಿ ಕೈಗೊಳ್ಳಲು ಸಹ ಸಭೆ ಅನುಮೋದನೆ ನೀಡಿತು. ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಪೌರಾಡಳಿತ ಇಲಾಖೆ ನಿರ್ದೇಶಕಿ ಅರ್ಚನಾ, ಮುಖ್ಯ ಎಂಜಿನಿಯರ್ ಸತ್ಯನಾರಾಯಣ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.