ETV Bharat / state

ಬೊಮ್ಮಾಯಿ ಸರ್ಕಾರದ ಮಹಾತ್ವಾಕಾಂಕ್ಷಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಲೋಕಾರ್ಪಣೆ

author img

By

Published : Sep 5, 2021, 1:02 PM IST

Updated : Sep 5, 2021, 2:41 PM IST

ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

mukyamanthri-raitha-vidhyanidhi-project-launched
ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಲೋಕಾರ್ಪಣೆ

ಬೆಂಗಳೂರು: ಬೊಮ್ಮಾಯಿ ಸರ್ಕಾರದ ಮಹತ್ವಾಕಾಂಕ್ಷೆಯ 'ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ'ಯನ್ನು ಇಂದು ವಿಧಾನಸೌಧದಲ್ಲಿ ಲೋಕಾರ್ಪಣೆ ಮಾಡಲಾಯಿತು.

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಘೋಷಿಸಿದ ಮಹತ್ವದ ಯೋಜನೆ ಇದಾಗಿದೆ. ರೈತರ ಮಕ್ಕಳಿಕೆ ಶಿಷ್ಯವೇತನ‌‌ ನೀಡುವ ಯೋಜನೆಗೆ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಚಾಲನೆ ನೀಡಲಾಯಿತು. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೃಷಿ ಸಚಿವ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭಾಗಿ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ಉಪಸ್ಥಿತಿಯೊಂದಿಗೆ ಈ ಯೋಜನೆಗೆ ಚಾಲನೆ‌‌ ನೀಡಿದರು.

ಸಿಎಂ ಬಸವರಾಜ ಬೊಮ್ಮಾಯಿ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ ನೀಡಿದರು. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದರು. ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವಿದ್ಯಾರ್ಥಿ ವೇತನ ವಿತರಿಸಿದರು.

ಈ ಯೋಜನೆ ಮೂಲಕ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯವೇತನವನ್ನು ನೀಡಲಾಗುವುದು. 10ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ, ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳವರೆಗೆ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್‌ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ 2021-22ನೇ ಆರ್ಥಿಕ ವರ್ಷದ ಸಾಲಿನಿಂದ ಈ ಯೋಜನೆ ಜಾರಿಗೆ ಬರಲಿದೆ. ಶಿಷ್ಯವೇತನದ ಹಣದ ಮೊತ್ತವನ್ನು ವಾರ್ಷಿಕ ಶಿಷ್ಯವೇತನ ರೂಪದಲ್ಲಿ ಒದಗಿಸಲು ಮತ್ತು ಪಾವತಿಸಲಾಗುತ್ತದೆ. ಸುಮಾರು 1,000 ಕೋಟಿ ರೂ. ಹೆಚ್ಚುವರಿ ವೆಚ್ಚದಲ್ಲಿ ಈ ಹೊಸ ಶಿಷ್ಯವೇತನ (Scholarship) ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಿಂದ ಸುಮಾರು 18 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗುವ ಬಗ್ಗೆ ಅಂದಾಜಿಸಲಾಗಿದೆ.

ಬೊಮ್ಮಾಯಿ ಸರ್ಕಾರದ ಮಹಾತ್ವಾಕಾಂಕ್ಷಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಲೋಕಾರ್ಪಣೆ

ಯಾರಿಗೆ ಎಷ್ಟು ಶಿಷ್ಯವೇತನ?:

ಪಿ.ಯು.ಸಿ/ಐ.ಟಿ.ಐ/ಡಿಪ್ಲೋಮಾ ಅರಸುವ ಹುಡುಗರಿಗೆ 2,500 ರೂ., ಹುಡುಗಿ/ಅನ್ಯ ಲಿಂಗದವರಿಗೆ 3,000 ರೂ. ಶಿಷ್ಯವೇತನ

ಬಿ.ಎ/ಬಿ.ಎಸ್.ಸಿ./ಬಿ.ಕಾಂ ಮಾಡುವ ಹುಡುಗರಿಗೆ 5,000 ರೂ., ಹುಡುಗಿಯರಿಗೆ 5,500 ರೂ.

ಎಲ್.ಎಲ್.ಬಿ/ಪ್ಯಾರಾ ಮೆಡಿಕಲ್, ಬಿ-ಫಾರ್ಮ್, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ ಮಾಡುವ ಹುಡುಗರಿಗೆ 7,500 ರೂ. ಮತ್ತು ಹುಡುಗಿಯರಿಗೆ 8,000 ರೂ.

ಎಂ.ಬಿ.ಬಿ.ಎಸ್, ಬಿ.ಇ/ಬಿ.ಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ ಮಾಡುವ ವಿದ್ಯಾರ್ಥಿಗಳಿಗೆ 10,000 ರೂ. ಮತ್ತು ವಿದ್ಯಾರ್ಥಿನಿಯರಿಗೆ 11,000 ರೂ. ಶಿಷ್ಯವೇತನ

ಈ ಶಿಷ್ಯವೇತನಕ್ಕೆ ಅರ್ಹತೆ ಏನು?:

ರೈತ ಎಂದರೆ ರಾಜ್ಯದ ಯಾವುದೇ ಭಾಗದಲ್ಲಿ ಉಳುಮೆ ಮಾಡುವಂತಹ/ಕೃಷಿ ಮಾಡುವಂತಹ ಜಮೀನನ್ನು ತನ್ನ ಹೆಸರಿನಲ್ಲಿ ಹೊಂದಿರುವಂತಹ ವ್ಯಕ್ತಿ.

ಮಕ್ಕಳು, ಎಂದರೆ ಕಾನೂನಿನ ಪ್ರಕಾರ ದತ್ತು ಪಡೆದಿರುವ ಮಕ್ಕಳು ಸೇರಿದಂತೆ ಪೋಷಕ/ಪೋಷಕರ ಜೈವಿಕ ಸಂತತಿ. ಒಂದು ಪಕ್ಷ ಯಾವುದೇ ಮಕ್ಕಳಿಗೆ ಪೋಷಕ/ಪೋಷಕರು ಇಲ್ಲದೆ ಇದ್ದ ಸಂದರ್ಭದಲ್ಲಿ ಉಳುಮೆ ಮಾಡುವಂತಹ/ಕೃಷಿ ಮಾಡುವಂತಹ ಜಮೀನನ್ನು ಅವರು ಹೊಂದಿರಬೇಕು.

ಇದನ್ನೂ ಓದಿ: ರಾಜ್ಯದ ರೈತರ ಮಕ್ಕಳ ಶಿಷ್ಯವೇತನ ಯೋಜನೆ ರೂಪುರೇಷೆ, ಷರತ್ತುಗಳು ಹೀಗಿವೆ

Last Updated : Sep 5, 2021, 2:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.