ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ರೈತ ಸಂಘಟನೆಗಳು ಹೋರಾಟಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಾಥ್ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಬಂಡವಾಳಶಾಹಿಗಳ ಹಿಡಿತಕ್ಕೆ ಸಿಕ್ಕ ಸರ್ಕಾರ ಅವರ ಪರ ನಿಂತಿದೆ. ಇದು ಪೂರಕವಾಗಿಲ್ಲ, ಮಾರಕವಾಗಲಿದೆ. ಚರ್ಚೆ ಮಾಡದೇ ಕೃಷಿ ಕಾಯ್ದೆಗಳ ಬಗ್ಗೆ ಪ್ರಧಾನಿ ಸುಗ್ರೀವಾಜ್ಞೆ ತಂದಿದ್ದಾರೆ. ಹೀಗಾಗಿ ಸದನದಲ್ಲಿ ಚರ್ಚೆ ಮಾಡಿ, ರೈತರಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಅವರು ಒತ್ತಾಯಿಸಿದರು.
ಸದನ ಬಹಿಷ್ಕಾರ ಮಾಡಿ ವಿರೋಧ ಪಕ್ಷಗಳು ಈ ಕಾಯ್ದೆ ಬಗ್ಗೆ ಧ್ವನಿ ಎತ್ತಬೇಕು. ನಿಗಮ ಮಂಡಳಿಗೆ ಮಾಡಿ ಹಣ ನೀಡೋಕೆ ಆಗುತ್ತೆ, ರೈತರಿಗೆ ಆರ್ಥಿಕ ಸಹಾಯ ಮಾಡಲು ಆಗೋದಿಲ್ವಾ? ಎಂದು ಮುಖ್ಯಮಂತ್ರಿ ಚಂದ್ರು ಸರ್ಕಾರವನ್ನು ಪ್ರಶ್ನಿಸಿದರು.
ಓದಿ: ಬೆಂಗಳೂರು: ಭಾರತ್ ಬಂದ್ ಹಿನ್ನೆಲೆ ವಾಹನಗಳ ಸಂಚಾರ ಮಾರ್ಗ ಬದಲಾವಣೆ