ETV Bharat / state

ಕೃಷ್ಣ ಸೇರಿ ಹಲವು ನಾಯಕರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಮುನಿರತ್ನ - Munirathna reaction

ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು ಭಾರಿ ಅಂತರದಿಂದ ಆರಿಸಿ ತಂದ ಮುಖ್ಯಮಂತ್ರಿಗಳು, ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ. ಬಿಜೆಪಿ ಹಿರಿಯ ನಾಯಕ ಎಸ್.ಎಂ. ಕೃಷ್ಣ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

Munirathna visited party leaders
ಎಸ್.ಎಂ. ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ ನೂತನ ಶಾಸಕ ಮುನಿರತ್ನ
author img

By

Published : Nov 11, 2020, 4:16 PM IST

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆ ಗೆಲುವಿನ ಬೆನ್ನಲ್ಲೇ ನೂತನ ಶಾಸಕ ಮುನಿರತ್ನ ಪಕ್ಷದ ನಾಯಕರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಚುನಾವಣೆಯಲ್ಲಿ ಗೆಲುವಿನ ಸಹಕಾರ ನೀಡಿದ್ದನ್ನು ಸ್ಮರಿಸಿದ ಮುನಿರತ್ನ ಧನ್ಯವಾದ ಅರ್ಪಿಸಿದರು.

Munirathna visited party leaders
ಎಸ್.ಎಂ. ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ ನೂತನ ಶಾಸಕ ಮುನಿರತ್ನ

ಬೆಳಗ್ಗೆ ವೈಯಾಲಿಕಾವಲ್ ನಿವಾಸದಲ್ಲಿ ಅಭಿಮಾನಿಗಳಿಂದ ಅಭಿನಂದನೆ ಸ್ವೀಕಾರ ಮಾಡಿದ‌ ಮುನಿರತ್ನ, ನಂತರ ಸದಾ ಶಿವನಗರದಲ್ಲಿರುವ ಬಿಜೆಪಿ ಹಿರಿಯ ನಾಯಕ ಎಸ್.ಎಂ. ಕೃಷ್ಣ ನಿವಾಸಕ್ಕೆ ಭೇಟಿ ನೀಡಿದರು. ಎಸ್ಎಂಕೆ ಆಶೀರ್ವಾದ ಪಡೆದರು. ಕೆಲಕಾಲ ಅವರೊಂದಿಗೆ ಮಾತುಕತೆ ನಡೆಸಿದರು.

ನಂತರ ರಾಜರಾಜೇಶ್ವರಿ ನಗರ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದ ಕಂದಾಯ ಸಚಿವ ಆರ್.ಅಶೋಕ್ ನಿವಾಸಕ್ಕೆ ಭೇಟಿ ನೀಡಿದರು. ಚುನಾವಣೆಯಲ್ಲಿ ಗೆಲ್ಲಲು ಸಹಕಾರ ನೀಡಿದ್ದಕ್ಕಾಗಿ ಅವರಿಗೂ ಕೃತಜ್ಞತೆ ಸಲ್ಲಿಕೆ ಮಾಡಿದರು.

ಬಳಿಕ ಮಲ್ಲೇಶ್ವರಂನಲ್ಲಿರುವ ಬಿಜೆಪಿ ನಗರ ಕಚೇರಿಗೆ ಭೇಟಿ ನೀಡಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರನ್ನು ಭೇಟಿಯಾಗಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಅಲ್ಲಿದ್ದ ಪಕ್ಷದ ಹಲವು ಮುಖಂಡರಿಗೂ ಕೃತಜ್ಞತೆ ಸಲ್ಲಿಕೆ ಮಾಡಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡುತ್ತಾ 57 ಸಾವಿರಕ್ಕೂ ಹೆಚ್ಚು ಮತಗಳ ಅಂತದಿಂದ ಕ್ಷೇತ್ರದ ಜನ ಆರಿಸಿ ತಂದಿದ್ದಾರೆ. ಮುಖ್ಯಮಂತ್ರಿಗಳು, ಬಿಜೆಪಿ ಪಕ್ಷದ ಮುಖಂಡರು, ನನ್ನ ಗೆಲುವಿಗೆ ಶ್ರಮಿಸಿದ ಎಲ್ಲ ಸಚಿವರು, ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿರುವುದಾಗಿ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.