ETV Bharat / state

ಸಿಲಿಕಾನ್ ಸಿಟಿಯಲ್ಲಿ ಹಾಡುಹಗಲೇ ಕೊಲೆ,ಚಾಕು ಇರಿದು ಹಂತಕರು ಪರಾರಿ

ಸ್ಕೂಟರ್‌ನಲ್ಲಿ ಕೆಲಸದ ನಿಮಿತ್ತ ತೆರಳುತ್ತಿದ್ದ, ಯುವಕನನ್ನು ಹಿಂಬಾಲಿಸಿಕೊಂಡು ಬಂದ ಹಂತಕರ ತಂಡ ಚಾಕುವಿನಿಂದ ಕುತ್ತಿಗೆ ಇರಿದು ಪರಾರಿಯಾಗಿದೆ.

ಹಾಡು ಹಗಲೇ ಯುವನೊರ್ವನ ಕತ್ತಿಗೆ ಚಾಕು ಹಾಕಿ ಹತ್ಯೆ
author img

By

Published : Jun 6, 2019, 8:59 PM IST

ಬೆಂಗಳೂರು: ದುಷ್ಕರ್ಮಿಗಳ ತಂಡ ಯುವಕನೊಬ್ಬನ ಕತ್ತಿಗೆ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಕಮಲಾನಗರದ ಶಂಕರ್ ನಾಗ ಬಸ್ ನಿಲ್ದಾಣದ ಬಳಿ ನಡೆದಿದೆ.

ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಹಿತೇಶ್ ಎಂಬ ಯುವಕ ಸ್ಕೂಟರ್‌ನಲ್ಲಿ ಕೆಲಸದ ನಿಮಿತ್ತ ತೆರಳುತ್ತಿದ್ದ ಎನ್ನಲಾಗಿದೆ. ಈ ವೇಳೆ ಯುವಕನನ್ನು ಹಿಂಬಾಲಿಸಿಕೊಂಡು ಬಂದ ಹಂತಕರ ತಂಡ, ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಕುತ್ತಿಗೆಗೆ ಇರಿದು ಪರಾರಿಯಾಗಿದೆ.

ಈ ಕುರಿತು ಸ್ಥಳ ಪರಿಶೀಲನೆ ನಡೆಸಿದ ಬಸವೇಶ್ವರ ನಗರ ಪೊಲೀಸರು ಪರಿಚಯಸ್ಥರೇ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ಸುತ್ತಮುತ್ತ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Intro:Body:ಸ್ಕೂಟರ್ ಅಡ್ಡಗಟ್ಟಿ ಕುತ್ತಿಗೆ ಚಾಕು ಹಾಕಿದ ದುಷ್ಕರ್ಮಿಗಳು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು‌ ಕೊಲೆ ನಡೆದು ಹೋಗಿದೆ. ಬಸವೇಶ್ವರ ನಗರ ಪೊಲೀಸ್ ಠಾಣೆಯ ಕಮಲಾನಗರದ ಶಂಕರ್ ನಾಗ್ ಬಸ್ ನಿಲ್ದಾಣದ ಯುವಕನೊಬ್ಬನನ್ನು ಇಂದು ಮಧ್ಯಾಹ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಹೆಗ್ಗನಹಳ್ಳಿಯ ನಿವಾಸಿಯಾಗಿದ್ದ ಹಿತೇಶ್ ಸಾವನ್ನಪ್ಪಿದ ಯುವಕ. ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಹಿತೇಶ್ ಕೆಲಸ ನಿಮಿತ್ತ ಡಿಯೊ ಸ್ಕೂಟರ್ ನಲ್ಲಿ ತೆರಳುತ್ತಿದ್ದರು. ಯುವಕನನ್ನೇ ಫಾಲೋ ಮಾಡಿಕೊಂಡಿದ್ದ ಹಂತಕರು ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಕುತ್ತಿಗೆಗೆ ಇರಿದು ಪರಾರಿಯಾಗಿದ್ದಾರೆ. ಬಳಿಕ ಸ್ವಲ್ಪ ದೂರದಲೇ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳ ಪರಿಶೀಲನೆ ನಡೆಸಿರುವ ಬಸವೇಶ್ವರ ನಗರ ಪೊಲೀಸರು ಪರಿಚಯಸ್ಥರೇ ಕೊಲೆ ಮಾಡಿರಬಹುದು ಎಂದು ಶಂಕಿಸಿದ್ದಾರೆ. ಕೊಲೆ ನಡೆದ ಸುತ್ತಮುತ್ತಲಿನ ಅಳವಡಿಸಿದ್ದ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ ತನಿಖೆ ಮುಂದುವರೆಸಿದ್ದಾರೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.