ETV Bharat / state

ಮಾಜಿ ಸಿಎಂ ಧರಂಸಿಂಗ್ ಸಂಬಂಧಿ ಕೊಲೆ.. ಅಪಹರಿಸಿ ಆಂಧ್ರದಲ್ಲಿ ಹತ್ಯೆಗೈದು ಹೂತು ಹಾಕಿದ ಕ್ರೂರಿಗಳು.. - murder of a former CM Dharmasinghe relative

ಕಳೆದ ಜನವರಿ 19 ರಂದು ಸ್ನೇಹಿತರನ್ನು ಭೇಟಿಯಾಗುವ ಸಲುವಾಗಿ ಸಿದ್ಧಾರ್ಥ್ ಅಮೆರಿಕಾ ಪ್ರಯಾಣಕ್ಕೆ ಮುಂದಾಗಿದ್ದ. ಈತ ತಂದೆಗೆ ವಾಟ್ಸ್​ಆ್ಯಪ್​ ಸಂದೇಶ ಕಳುಹಿಸಿ ನಂತರ ಫೋನ್​ ಸಂಪರ್ಕಕ್ಕೆ ಸಿಕ್ಕಿರಲಿಲ್ಲ..

dsd
ಮಾಜಿ ಸಿಎಂ ದಿ.ಧರ್ಮಸಿಂಗ್ ಸಂಬಂಧಿ ಕೊಲೆ
author img

By

Published : Jan 31, 2021, 3:36 PM IST

Updated : Jan 31, 2021, 5:05 PM IST

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿ. ಧರಂಸಿಂಗ್ ಸಂಬಂಧಿ ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಅಮೃತಹಳ್ಳಿ ಪೊಲೀಸರು ತನಿಖೆ ನಡೆಸಿದಾಗ ಅಪರಿಚಿತರು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ‌.

ಸಿದ್ಧಾರ್ಥ್ ದೇವೆಂದರ್(28) ಕೊಲೆಯಾದ ದುದೈರ್ವಿ‌‌‌. ‌ದಾಸರಹಳ್ಳಿಯ ನಿವಾಸಿಯಾಗಿರುವ ಸಿದ್ಧಾರ್ಥ್​​ ತಂದೆ ಸಿ.ಆರ್. ದೇವೇಂದರ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು‌‌.

ಕಳೆದ ಜನವರಿ 19 ರಂದು ಸ್ನೇಹಿತರನ್ನು ಭೇಟಿಯಾಗುವ ಸಲುವಾಗಿ ಸಿದ್ದಾರ್ಥ್ ಅಮೆರಿಕಾ ಪ್ರಯಾಣಕ್ಕೆ ಮುಂದಾಗಿದ್ದ. ಈತ ತಂದೆಗೆ ವಾಟ್ಸ್​ಆ್ಯಪ್​ ಸಂದೇಶ ಕಳುಹಿಸಿ ನಂತರ ಫೋನ್​ ಸಂಪರ್ಕಕ್ಕೆ ಸಿಕ್ಕಿರಲಿಲ್ಲ.

ಅಮೆರಿಕಾಗೆ ಸಿದ್ಧಾರ್ಥ್​ ಹೋಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡ ತಂದೆ ದೇವೇಂದರ್​​, ಮಗ ಕಾಣೆಯಾಗಿದ್ದಾನೆ ಎಂದು ಅಮೃತಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಆಂಧ್ರಪ್ರದೇಶದ ನೆಲ್ಲೂರು ಅರಣ್ಯ ಪ್ರದೇಶದಲ್ಲಿ ಅಪರಿಚಿತರು ಕೊಲೆ ಮಾಡಿ ಹೂತು ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ‌‌‌‌. ವ್ಯವಸ್ಥಿತವಾಗಿ ಸಿದ್ದಾರ್ಥ್​ನನ್ನು ಅಪಹರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ‌. ಈ ನಿಟ್ಟಿನಲ್ಲಿ ಅಮೃತಹಳ್ಳಿ ಪೊಲೀಸರ ತಂಡ ನೆಲ್ಲೂರಿಗೆ ಪ್ರಯಾಣ ಬೆಳೆಸಿದೆ.

Last Updated : Jan 31, 2021, 5:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.