ETV Bharat / state

ಮುರುಘಾ ಶರಣರ ಪೋಕ್ಸೊ ಪ್ರಕರಣ: 2ನೇ ಆರೋಪಿ ಎಸ್.ರಶ್ಮಿಗೆ ಜಾಮೀನು ಮಂಜೂರು - ಹೈಕೋರ್ಟ್

ಚಿತ್ರದುರ್ಗ ಮುರುಘಾ ರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೊ ಪ್ರಕರಣದ 2ನೇ ಆರೋಪಿ ಎಸ್.ರಶ್ಮಿ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

high court
ಹೈಕೋರ್ಟ್
author img

By ETV Bharat Karnataka Team

Published : Dec 21, 2023, 10:22 PM IST

Updated : Dec 21, 2023, 10:31 PM IST

ಬೆಂಗಳೂರು: ಚಿತ್ರದುರ್ಗ ಮುರುಘಾ ರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ಎಸ್.ರಶ್ಮಿ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಕುಮ್ಮಕ್ಕು ನೀಡಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಎಸ್.ರಶ್ಮಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮದ್ ನವಾಜ್ ಅವರಿದ್ದ ಪೀಠ ಜಾಮೀನು ಮಂಜೂರು ಮಾಡಿ ಆದೇಶಿಸಿತು.

ಅಲ್ಲದೇ ಅರ್ಜಿದಾರರು ಎರಡು ಲಕ್ಷ ರೂ ಮೊತ್ತದ ವೈಯಕ್ತಿಕ ಬಾಂಡ್ ನೀಡಬೇಕು ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು. ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಹಾಗೂ ಸಹಕರಿಸಬೇಕು ಎಂದು ಕೋರ್ಟ್ ಷರತ್ತುಗಳನ್ನು ವಿಧಿಸಿದೆ.

ಪ್ರಕರಣದಲ್ಲಿ ಅಪರಾಧ ಕೃತ್ಯ ಎಸಗಲು ಮೊದಲನೆ ಆರೋಪಿ ಮುರುಘಾ ಮಠದ ಡಾ.ಶಿವಮೂರ್ತಿ ಶರಣರಿಗೆ ಕುಮ್ಮಕ್ಕು ಹಾಗೂ ಸಹಕಾರ ನೀಡಿದ ಆರೋಪ ಅರ್ಜಿದಾರೆಯ ಮೇಲಿದೆ. ಇದೇ ಆರೋಪವನ್ನು ಮೂರನೇ ಆರೋಪಿ ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಪರಮಶಿವಯ್ಯ ಎದುರಿಸುತ್ತಿದ್ದಾರೆ. ಅವರಿಗೆ ಈಗಾಗಲೇ ನ್ಯಾಯಾಲಯ ಜಾಮೀನು ನೀಡಿದೆ.

ಮತ್ತೊಂದೆಡೆ, ಮೊದಲನೇ ಆರೋಪಿ ಶಿವಮೂರ್ತಿ ಶರಣರಿಗೆ ಜಾಮೀನು ಸಿಕ್ಕಿದೆ. ಆದ್ದರಿಂದ ಅರ್ಜಿದಾರೆಯೂ ಜಾಮೀನು ಪಡೆಯಲು ಅರ್ಹರಾಗಿದ್ದಾರೆ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ. ಈ ಆದೇಶದಿಂದ ಪ್ರಕರಣದಲ್ಲಿ ಎಲ್ಲ ಆರೋಪಿಗಳಿಗೆ ಜಾಮೀನು ಸಿಕ್ಕಂತಾಗಿದೆ.

ಪ್ರಕರಣದ ಹಿನ್ನೆಲೆ: ಇಬ್ಬರು ಬಾಲಕಿಯರು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ 2022ರ ಆ.26ರಂದು ದೂರು ದಾಖಲಿಸಿ, ಮುರುಘಾ ಶರಣರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಈ ದೂರಿನಲ್ಲಿ ಎಸ್.ರಶ್ಮಿ ಅವರು ಬಾಲಕಿಯರನ್ನು ಸ್ವಾಮೀಜಿಯ ಖಾಸಗಿ ಕೊಠಡಿಗೆ ಕರೆದುಕೊಂಡು ಹೋಗಿ ಬಿಡುತ್ತಿದ್ದರು. ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಸ್ವಾಮೀಜಿಯ ಕುಕೃತ್ಯಕ್ಕೆ ಸಹಕರಿಸುತ್ತಿದ್ದರು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಶ್ಮಿ ಅವರನ್ನು ಪೊಲೀಸರು ಬಂಧಿಸಿದ್ದರು. ಚಿತ್ರದುರ್ಗದ ಸೆಷನ್ಸ್ ನ್ಯಾಯಾಲಯ ರಶ್ಮಿಗೆ ಜಾಮೀನು ನಿರಾಕರಿಸಿತ್ತು. ರಶ್ಮಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಅಧಿಕಾರಿಗಳ ವರ್ಗ, ಹುದ್ದೆಗಳಿಗೆ ನಿಯೋಜನೆ ಸರ್ಕಾರದ ವಿವೇಚನೆಗೆ ಬಿಟ್ಟದ್ದು: ಹೈಕೋರ್ಟ್

Last Updated : Dec 21, 2023, 10:31 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.