ETV Bharat / state

2023ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಬಿಎಸ್​ವೈ ಸಲಹೆ ಅತ್ಯಗತ್ಯ: ಮುರುಗೇಶ್ ನಿರಾಣಿ - Etv bharat kannada

2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಲಹೆ ಮತ್ತು ಮಾರ್ಗದರ್ಶನ ​ಪಕ್ಷಕ್ಕೆ ಬೇಕು ಎಂದು ಮುರುಗೇಶ್​ ಆರ್​.ನಿರಾಣಿ ಹೇಳಿದರು.

murugesh niran
ಮುರುಗೇಶ್ ನಿರಾಣಿ
author img

By

Published : Jul 22, 2022, 10:41 PM IST

ಬೆಂಗಳೂರು: ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಬೇರುಮಟ್ಟದಿಂದ ಸಂಘಟಸಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿರುವ ಮಾಜಿ ಮುಖ್ಯಮಂತ್ರಿ ‌ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನ ಅಗತ್ಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು ಎಂದರೆ ಯಡಿಯೂರಪ್ಪ ಅವರ ಸಲಹೆ ಹಾಗೂ ಮಾರ್ಗದರ್ಶನ ಅತ್ಯಗತ್ಯ ಎಂದು ಪ್ರತಿಪಾದಿಸಿದರು. ಯಡಿಯೂರಪ್ಪ ಅವರು ಮತ್ತೆ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುವುದು, ನಿವೃತ್ತಿ ಘೋಷಣೆ ಮಾಡುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಎಂದು ಯಾರಾದರೂ ಅಂದುಕೊಂಡರೆ ಅದು ತಪ್ಪು ಎಂದರು.

ಮುಂದಿನ ಚುನಾವಣೆಯಲ್ಲಿ ನಾನು ಶಿಕಾರಿಪುರದಿಂದ ಸ್ಪರ್ಧಿಸುವುದಿಲ್ಲ ಎಂಬ ಅವರ ಈ‌ ನಿರ್ಧಾರ ನಮಗೂ ಆಶ್ಚರ್ಯ ತಂದಿದೆ ಎಂದರು. ಸಕ್ರಿಯ ರಾಜಕಾರಣದಲ್ಲಿ ಅವರು ಇನ್ನು ಇರಬೇಕು ಎಂಬುದು ನನ್ನಂತಹ ಲಕ್ಷಾಂತರ ಕಾರ್ಯಕರ್ತರ ಒತ್ತಾಸೆಯಾಗಿದೆ. ಅವರು ಯಾವುದೇ ಒತ್ತಡಕ್ಕೆ ಮಣಿದು ಇಂತಹ ನಿರ್ಧಾರ ತೆಗೆದುಕೊಂಡಿಲ್ಲ. ನಮ್ಮ ಪಕ್ಷ ಯಾವುದೇ ಹಂತದಲೂ ಅವರನ್ನು ಕಡೆಗಣಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಶಿಕಾರಿಪುರ ಕ್ಷೇತ್ರದಿಂದ ಪುತ್ರ ವಿಜೇಯೇಂದ್ರ ಅವರಿಗೆ ಬಿಟ್ಡು ಕೊಡುವುದಾಗಿ ಹೇಳಿರುವುದು ‌ಸ್ವಾಗತರ್ಹ ಬೆಳವಣಿಗೆ. ಇಡೀ ರಾಜ್ಯದಲ್ಲೇ ಅದೊಂದು ಮಾದರಿ ಕ್ಷೇತ್ರ ಎಂದು ನಿರಾಣಿ ಅವರು ಬಣ್ಣಿಸಿದರು.

ಇದನ್ನೂ ಓದಿ:ಸಿಸೋಡಿಯಾ ಮೇಲಿನ ಆರೋಪ ನಿರಾಧಾರ, ಜೈಲಿಗೆ ಹೋಗಲು ಹೆದರಲ್ಲ: ಕೇಜ್ರಿವಾಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.