ಬೆಂಗಳೂರು: ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದ್ದು, ಪಕ್ಷದ ಪರ ಮತ ಚಲಾಯಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಮೂಲಕ ಜನರ ತೀರ್ಪನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೋಲೊಪ್ಪಿಕೊಂಡಿದ್ದಾರೆ.
-
ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ.ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ.🙏
— Vijayendra Yeddyurappa (@BYVijayendra) May 2, 2021 " class="align-text-top noRightClick twitterSection" data="
">ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ.ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ.🙏
— Vijayendra Yeddyurappa (@BYVijayendra) May 2, 2021ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ.ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ.🙏
— Vijayendra Yeddyurappa (@BYVijayendra) May 2, 2021
ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮ ಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ. ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ. ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಕ್ಷೇತ್ರದ ಉಸ್ತುವಾರಿ ಹೊತ್ತಿದ್ದ ವಿಜಯೇಂದ್ರ ಮಸ್ಕಿಯಲ್ಲೇ ಬೀಡು ಬಿಟ್ಟು ಚುನಾವಣಾ ಪ್ರಚಾರದ ತಂತ್ರಗಾರಿಕೆ ರೂಪಿಸಿದ್ದರು. ಈ ಹಿಂದೆ ಕೆ.ಆರ್.ಪೇಟೆ, ಶಿರಾ ಕ್ಷೇತ್ರದಲ್ಲಿ ಉಸ್ತುವಾರಿ ಪಡೆದು ಪಕ್ಷಕ್ಕೆ ಮೊದಲ ಗೆಲುವು ತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ವಿಜಯೇಂದ್ರ, ಮಸ್ಕಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಲಿದ್ದಾರೆ ಎನ್ನುವ ನಿರೀಕ್ಷೆ ಪಕ್ಷದಲ್ಲಿ ಇತ್ತು ಆದರೆ ಫಲಿತಾಂಶ ಬೇರೆಯೇ ಆಗಿದ್ದು, ವಿಜಯೇಂದ್ರಗೆ ಕಾಂಗ್ರೆಸ್ ಶಾಕ್ ನೀಡಿದೆ.