ಬೆಂಗಳೂರು: ನಗರದಲ್ಲಿ ರಾಬರಿ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ನಗರ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ಇನ್ಮುಂದೆ ಪೊಲೀಸ್ ಠಾಣೆಗೆ ಮೊಬೈಲ್ ಕದ್ದಿರುವ ಬಗ್ಗೆ ದೂರು ಕೊಡಲು ಬಂದರೆ ಕಡ್ಡಾಯವಾಗಿ ಎಫ್ಐಆರ್ ಮಾಡಬೇಕು ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಖಡಕ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ವಾರ್ಷಿಕ ಸಭೆಯಲ್ಲಿ ಚರ್ಚಿಸಲಾಗಿದ್ದು, ಮೊಬೈಲ್ ಕಳೆದು ಹೋದರೆ ಇ-ಲಾಸ್ ಸಾಫ್ಟ್ವೇರ್ನಲ್ಲಿ ದೂರು ನೀಡಬಹುದು. ಆದರೆ, ಮೊಬೈಲ್ ರಾಬರಿ ಮಾಡಿದರೆ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ದೂರು ನೀಡಬಹುದು. ಪೊಲೀಸರು ಇಂತಹ ಪ್ರಕರಣಗಳಲ್ಲಿ ಶೀಘ್ರವೇ ಎಫ್ಐಆರ್ ದಾಖಲಿಸಲೇಬೇಕು ಎಂದು ತಾಕೀತು ಮಾಡಿದರು.
ಇತ್ತೀಚೆಗೆ ನಗರದಲ್ಲಿ ಮೊಬೈಲ್ ರಾಬರಿ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಅನೇಕರು ಇ-ಲಾಸ್ ಮುಖಾಂತರ ದೂರುಗಳು ಬರುತ್ತಿವೆ. ಆದರೆ, ಈ ರೀತಿಯ ಪ್ರಕರಣಗಳಲ್ಲಿ ಪೊಲೀಸ್ ಠಾಣೆಗೆ ಸಾರ್ವಜನಿಕರು ನೇರವಾಗಿ ಬಂದ ದೂರು ನೀಡಬೇಕು. ಅಲ್ಲದೇ, ಇಂತಹ ದೂರುಗಳ ಬಗ್ಗೆ ಪೊಲೀಸ್ ಸಿಬ್ಬಂದಿ ನಿರ್ಲಕ್ಷ್ಯ ತೋರಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
ಇದನ್ನೂ ಓದಿ: ಅಫ್ಘಾನಿಸ್ತಾನಿಕ್ಕೆ ತೆರಳಿ ಉಗ್ರ ಸಂಘಟನೆ ಸೇರಲು ಮುಂದಾಗಿದ್ದ ಬೆಂಗಳೂರಲ್ಲಿ ಸೆರೆಸಿಕ್ಕ ಶಂಕಿತ!