ETV Bharat / state

ಸಿಎಂ ಭೇಟಿಯಾದ ಮುತಾಲಿಕ್​: ಹರ್ಷ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡುವಂತೆ ಒತ್ತಾಯ

author img

By

Published : Feb 21, 2022, 5:24 PM IST

Updated : Feb 21, 2022, 5:47 PM IST

ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನನ್ನ ಕೊಲೆ ಮಾಡಿರುವುದು ಹೇಯ ಕೃತ್ಯವಾಗಿದೆ‌‌. ಬಿಜೆಪಿಯು ರಾಜ್ಯದಲ್ಲಿ ಎಸ್​ಡಿಪಿಐ ಹಾಗೂ ಪಿಎಫ್ಐ ಸಂಘಟನೆ ನಿಷೇಧಿಸಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

ಮುತಾಲಿಕ್
ಮುತಾಲಿಕ್

ಬೆಂಗಳೂರು: ಭಜರಂಗದಳ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಖಂಡಿಸಿರುವ ಶ್ರೀರಾಮ ಸೇನೆಯ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ನಾಲ್ಕು ಅಂಶಗಳ ಬಗ್ಗೆ‌ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರ ನೀಡಿದೆ.

ಶ್ರೀರಾಮ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್

ಈ ಬಗ್ಗೆ ಮಾತನಾಡಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನನ್ನ ಕೊಲೆ ಮಾಡಿರುವುದು ಹೇಯ ಕೃತ್ಯವಾಗಿದೆ‌‌. ಇನ್ನೊಂದು ತಿಂಗಳೊಳಗೆ ಎಲ್ಲಾ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಎಸ್​ಡಿಪಿಐ, ಪಿಎಫ್ಐ ಹಾಗೂ ಸಿಎಫ್​​ಐ ಸಂಘಟನೆಗಳಿಂದ ಎರಡು ವರ್ಷಗಳಿಂದ ಮೃತ ಹರ್ಷನಿಗೆ ಜೀವ ಬೆದರಿಕೆ ಇದ್ದರೂ ಸಹ ಸರ್ಕಾರ ರಕ್ಷಣೆ ನೀಡದಿರುವುದು ನಾಚಿಗೇಡಿನ ಸಂಗತಿಯಾಗಿದೆ‌ ಎಂದು ವಾಗ್ದಾಳಿ ನಡೆಸಿದರು.

ಶ್ರೀರಾಮ ಸೇನೆಯ ನಿಯೋಗದ ಮನವಿ ಪತ್ರ
ಶ್ರೀರಾಮ ಸೇನೆಯ ನಿಯೋಗದ ಮನವಿ ಪತ್ರ

ಇದನ್ನೂ ಓದಿ: ಶಿವಮೊಗ್ಗ ಹರ್ಷ ಕೊಲೆ ಪ್ರಕರಣ: ಎನ್ಐಎ ತನಿಖೆಗೆ ವಿಶ್ವ ಹಿಂದೂ ಪರಿಷತ್​ ಆಗ್ರಹ

ಈ ಹಿಂದೆ ಪ್ರತಿಪಕ್ಷದಲ್ಲಿದ್ದಾಗ ಬಿಜೆಪಿಯು ರಾಜ್ಯದಲ್ಲಿ ಎಸ್​ಡಿಪಿಐ ಹಾಗೂ ಪಿಎಫ್ಐ ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿತ್ತು.‌ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಇಂತಹ ಸಂಘಟನೆಗಳನ್ನ ನಿಷೇಧಿಸಬೇಕು. ಮೃತ ಹರ್ಷನ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಹಾಗೂ ಹಿಂದೂ‌ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

Last Updated : Feb 21, 2022, 5:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.