ETV Bharat / state

ಎಂ.ವಿ ರಾಜಶೇಖರನ್ ಅಂತಿಮ ದರ್ಶನ ಪಡೆದ ಡಿಕೆಶಿ - ಡಿಕೆಶಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಹಿರಿಯ ಮುಖಂಡ ಎಂ.ವಿ. ರಾಜಶೇಖರನ್ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಎಂ.ವಿ ರಾಜಶೇಖರನ್ ಅಂತಿಮ ದರ್ಶನ
MV Rajasekharan
author img

By

Published : Apr 13, 2020, 11:01 AM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಸಾಗರ್ ಆಸ್ಪತ್ರೆಗೆ ಸೋಮವಾರ ಬೆಳಗ್ಗೆ ತೆರಳಿ ಕಾಂಗ್ರೆಸ್ ಹಿರಿಯ ಮುಖಂಡ ಎಂ.ವಿ. ರಾಜಶೇಖರನ್ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಇದಾದ ಬಳಿಕ ಪಾರ್ಥೀವ ಶರೀರದ ಅಂತಿಮ ವಿಧಿವಿಧಾನಗಳ ಬಗ್ಗೆ ಅವರ ಕುಟುಂಬ ಸದಸ್ಯರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರ ಜತೆ ಸಮಾಲೋಚನೆ ನಡೆಸಿದರು.

ಎಂ.ವಿ ರಾಜಶೇಖರನ್ ಅಂತಿಮ ದರ್ಶನ ಪಡೆದ ಡಿಕೆಶಿ

ಡಿಕೆ ಶಿವಕುಮಾರ್ ಸಂತಾಪ : ಎಂ.ವಿ. ರಾಜಶೇಖರನ್ ಅವರು ಕಾಂಗ್ರೆಸ್ ಪಕ್ಷವನ್ನು ಕಟ್ಟಿದ ನಾಯಕರಲ್ಲಿ ಒಬ್ಬರು. ಪಕ್ಷಕ್ಕೆ ಅವರ ಕೊಡುಗೆ ಅಪಾರ. ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ ಹಾಗೂ ರಾಜ್ಯ ಸಭೆಯ ಸದಸ್ಯರಾಗಿದ್ದ ಅವರ ಪಕ್ಷನಿಷ್ಠೆ ಆದರ್ಶನೀಯ. ಅವರು ಪಕ್ಷದ ಶಿಸ್ತಿನ ಸಿಪಾಯಿ. ಜೀವನದಲ್ಲೂ ಬಹಳ ಶಿಸ್ತು ಬದ್ಧರಾಗಿದ್ದರು. ಪ್ರತಿಯೊಬ್ಬರ ಜತೆಗೂ ಸ್ನೇಹದಿಂದ ಬೆರೆಯುತ್ತಿದ್ದರು. ಅಜಾತಶತ್ರುವಾಗಿ ಬದುಕಿದರು ಎಂದು ಡಿಕೆಶಿ ಅವರು ಸ್ಮರಿಸಿದ್ದಾರೆ.

ಅವರ ಬದುಕು ನಮಗೆ ಆದರ್ಶ. ಅವರು ಮಾರ್ಗದರ್ಶಕರಾಗಿ ನಮ್ಮನ್ನು ಮುನ್ನಡೆಸಿದ್ದರು. ಇಂದು ಅವರನ್ನು ಕಳೆದುಕೊಂಡಿದ್ದೇವೆ. ಇದು ನಮಗೆ ತುಂಬಲಾರದ ನಷ್ಟ. ಕೆಲ ದಿನಗಳ ಹಿಂದಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದೆ. ಅವರು ಇಂದು ನಮ್ಮನ್ನು ಅಗಲಿದ್ದಾರೆ ಎಂಬ ಸುದ್ದಿ ಕೇಳಿ ಮನಸಿಗೆ ಬಹಳ ಬೇಸರವಾಗಿದೆ. ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಬೆಂಬಲಿಗರಿಗೆ ಆ ಭಗವಂತ ನೀಡಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.