ಬೆಂಗಳೂರು: ಪಕ್ಷ ನನಗೆ ಉಪಾಧ್ಯಕ್ಷ ಪಟ್ಟವನ್ನು ಕೊಟ್ಟಿದ್ದು, ಅದರಂತೆ ನಾನು ರಾಜ್ಯದಾದ್ಯಂತ ಸಂಚರಿಸಿ ಪಕ್ಷವನ್ನು ಮತ್ತಷ್ಟು ಕಟ್ಟುವ ಕೆಲಸ ಮಾಡುತ್ತೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, " ಪ್ರಸ್ತುತ ರಾಜ್ಯ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿದ್ದೇನೆ. ಇದನ್ನೇ ಮುಂದುವರಿಸುತ್ತೇನೆ ಹೇಳಿದರು.
ಬೊಮ್ಮಾಯಿ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೊಸ ಮಂತ್ರಿ ಮಂಡಲದಲ್ಲಿ ಯಾರು ಇರಬೇಕೆಂಬುದರ ಬಗ್ಗೆ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೈಕಮಾಂಡ್ ಜೊತೆ ಚರ್ಚೆ ನಡೆಸಿ ಅವರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಯುವಕರಿಗೆ ಆಧ್ಯತೆ ನಿರೀಕ್ಷೆ
ಹೊಸ ಸಂಪುಟದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ ಎಂಬ ವಿಶ್ವಾಸವಿದೆ. ನಾನು ಕೂಡ ಅದನ್ನೆ ಅಪೇಕ್ಷಿಸುತ್ತೇನೆ. ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದವರ ಬಗ್ಗೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರು ತೀರ್ಮಾನ ಮಾಡುತ್ತಾರೆ.
ಈಗ ಯಡಿಯೂರಪ್ಪನವರ ಸ್ಥಾನ ಏನೆಂಬ ಪ್ರಶ್ನೆ ಕೇಳಿದ್ದಕ್ಕೆ ನೀವು ಯಡಿಯೂರಪ್ಪ ಅವರನ್ನೇ ಕೇಳಿ ತಿಳಿದುಕೊಳ್ಳಿ ಎಂದು ವಿಜಯೇಂದ್ರ ಹೇಳಿದರು.
ಇದನ್ನು ಓದಿ: ಬೊಮ್ಮಾಯಿ ಸಂಪುಟದಲ್ಲಿ ನಾನು ಸಚಿವನಾಗಿರಲು ಇಷ್ಟಪಡುವುದಿಲ್ಲ: ಹೀಗಂದಿದ್ದೇಕೆ ಶೆಟ್ಟರ್!?