ಬೆಂಗಳೂರು: ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ನೇಮಕವಾಗಿದ್ದಾರೆ. ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷರಾಗಿದ್ದ ಹೈಕೋರ್ಟ್ ನ್ಯಾಯಮೂರ್ತಿ ಜಿ.ನರೇಂದರ್ ಅವರು ಆಂಧ್ರ ಪ್ರದೇಶ ಹೈಕೋರ್ಟ್‌ಗೆ ಇತ್ತೀಚೆಗೆ ವರ್ಗಾವಣೆಯಾಗಿದ್ದರು.
ಇದರಿಂದ ತೆರವಾದ ಸ್ಥಾನಕ್ಕೆ ಹೈಕೋರ್ಟ್‌ನ ಎರಡನೇ ಹಿರಿಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ನಾಮನಿರ್ದೇಶನ ಮಾಡಿದ್ದಾರೆ. ರಾಜ್ಯ ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಸಂಗ್ರೇಶಿ ನ.21ರಂದು ಅಧಿಸೂಚನೆ ಹೊರಡಿಸಿದ್ದಾರೆ. ಈ ಆದೇಶವು ನ.27ರಿಂದ ಜಾರಿಗೆ ಬರಲಿದೆ. ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಪ್ರಾಧಿಕಾರದ 15ನೇ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ.
ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ(ಸಿಎಸ್) ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿತ್ತು. ಸದ್ಯಕ್ಕೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಗೋಯಲ್, ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸುವರು.
ಪ್ರಸ್ತುತ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅಧಿಕಾರಾವಧಿ ನವೆಂಬರ್ 30ರಂದು ಕೊನೆಗೊಳ್ಳಲಿದೆ. ಹಿರಿತನದ ಆಧಾರದಡಿ ರಜನೀಶ್ ಗೋಯಲ್‌ರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ. ಗೋಯಲ್ 1986ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದು, 2024ರ ಜುಲೈನಲ್ಲಿ ನಿವೃತ್ತರಾಗಲಿದ್ದಾರೆ. ಹಾಲಿ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಇವರು ಕಾರ್ಯ ನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ನೇಮಕ