ಬೆಂಗಳೂರು: ಯುಬಿಸಿಟಿಯಲ್ಲಿ ವಿದ್ವತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿ ಜಾಮೀನಿನ ಮೇಲೆ ಹೊರಬಂದಿದ್ದ ಕಾಂಗ್ರೆಸ್ ನಾಯಕ ಹ್ಯಾರೀಸ್ ಪುತ್ರ ನಲಪಾಡ್ ಮೆಕ್ಕಾಗೆ ತೆರಳಲು ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.
ಈಗಾಗ್ಲೇ ಇದ್ದ ಜಾಮೀನು ಷರತ್ತು ಸಡಿಲಿಕೆ ಮಾಡಿ ರಂಜಾನ್ ಹಿನ್ನೆಲೆಯಲ್ಲಿ ಮೇ 15ರಿಂದ ಜೂ. 6ರ ವರೆಗೆ ಮೆಕ್ಕಾ ಯಾತ್ರೆ ಕೈಗೊಳ್ಳಲು ಮೊಹಮದ್ ನಲಪಾಡ್ಗೆ ಕೋರ್ಟ್ ಅನುಮತಿ ನೀಡಿದೆ.
ಈ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ನೀಡಿದ್ದ ಕೋರ್ಟ್, ವಿಚಾರಣಾ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳಬಾರದು, ತನಿಖೆಗೆ ಸಹಕಾರ ನೀಡಬೇಕೆಂದು ಷರತ್ತು ವಿಧಿಸಿತ್ತು. ಈ ಹಿನ್ನೆಲೆ ಷರತ್ತನ್ನು ಸಡಿಲಿಸಿ ಮೆಕ್ಕಾಗೆ ತೆರಳಲು ಅನುಮತಿ ನೀಡುವಂತೆ ಮನವಿ ಮಾಡಿದ್ದ ನಲಪಾಡ್ಗೆ ಇದೀಗ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.