ETV Bharat / state

1 ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ ಆಕಾಶವಾಣಿ ನಲಿ-ಕಲಿ ಕಾರ್ಯಕ್ರಮ ಜ.11 ರಿಂದ

ಸೋಮವಾರದಿಂದ ಶುಕ್ರವಾರದವರೆಗೂ ಪ್ರತಿನಿತ್ಯ ಬೆಳಗ್ಗೆ 10 ಗಂಟೆಯಿಂದ 10.15 ರ ವರೆಗೆ ಒಂದು ಮತ್ತು ಎರಡನೇ ತರಗತಿಗಳಿಗಾಗಿ ಹಾಗೂ 10:15 ರಿಂದ 10.30 ರವರೆಗೂ 3 ಮತ್ತು 4ನೇ ತರಗತಿ ಗಳಿಗಾಗಿ ಹಾಡು, ಕಥೆ, ನಾಟಕ, ಸಂಭಾಷಣೆ, ಒಗಟು, ಮತ್ತು ವಿವಿಧ ಆಸಕ್ತಿಕರ ಕಾರ್ಯಕ್ರಮಗಳ ಮೂಲಕ ಆಯಾ ತರಗತಿಗಳ ಮಕ್ಕಳ ಕಲಿಕೆ ಮುಂದುವರಿಯುವಂತೆ ಮಾಡಲು ಶಿಕ್ಷಣ‌ ಇಲಾಖೆ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.

Nali-Kali program for 1st to 4th Clas students in radio : Minister Suresh Kumar
ಸಚಿವ ಸುರೇಶ್ ಕುಮಾರ್‌ ಮಾಹಿತಿ
author img

By

Published : Jan 9, 2021, 10:07 AM IST

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕಾರಣಕ್ಕೆ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಶಾಲೆಗಳನ್ನು ಆರಂಭಿಸಿಲ್ಲ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಆಕಾಶವಾಣಿ ಮೂಲಕ ಜನವರಿ 11 ರಿಂದ ಕಲಿಯುತ್ತಾ ನಲಿಯೋಣ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ‌ ಎಂದು ಸಚಿವ ಸುರೇಶ್ ಕುಮಾರ್‌ ಮಾಹಿತಿ ನೀಡಿದ್ದಾರೆ.

ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ಇರುವ (ಆದರೆ ಶಾಲೆಗೆ ಹೋಗಲಾರದ) ಮಕ್ಕಳಿಗಾಗಿ ಇರುವ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮಗಳನ್ನು ಜನವರಿ 11ರಿಂದ ಏಪ್ರಿಲ್ 5 ರ ವರೆಗೆ ಆಕಾಶವಾಣಿ ಪ್ರಸಾರ ಮಾಡಲಿದೆ. ಸೋಮವಾರದಿಂದ ಶುಕ್ರವಾರದವರೆಗೂ ಪ್ರತಿನಿತ್ಯ ಬೆಳಗ್ಗೆ 10 ಗಂಟೆಯಿಂದ 10.15 ರ ವರೆಗೆ ಒಂದು ಮತ್ತು ಎರಡನೇ ತರಗತಿಗಳಿಗಾಗಿ ಹಾಗೂ 10:15 ರಿಂದ 10.30 ರವರೆಗೂ 3 ಮತ್ತು 4ನೇ ತರಗತಿಗಳಿಗಾಗಿ ಹಾಡು, ಕಥೆ, ನಾಟಕ, ಸಂಭಾಷಣೆ, ಒಗಟು, ಮತ್ತು ವಿವಿಧ ಆಸಕ್ತಿಕರ ಕಾರ್ಯಕ್ರಮಗಳ ಮೂಲಕ ಆಯಾ ತರಗತಿಗಳ ಮಕ್ಕಳ ಕಲಿಕೆ ಮುಂದುವರಿಯುವಂತೆ ಮಾಡಲು ಶಿಕ್ಷಣ‌ ಇಲಾಖೆ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.

ಈ ಕಾರ್ಯಕ್ರಮಗಳ ಮೂಲಕ ನಲಿ - ಕಲಿಯ ಆಶಯಗಳಾದ ಆಲಿಸುವಿಕೆ, ವಸ್ತು ಗುರುತಿಸುವಿಕೆ, ಸ್ವ-ಕಲಿಕೆ, ಸಂತಸದಾಯಕ ಕಲಿಕೆ, ಶಬ್ದ ಪರಿಚಯ, ಹೀಗೆ ಶಬ್ದಗಳ ಏರಿಳಿತದ ಮೂಲಕ ವಿಷಯಗಳನ್ನು ವಿನೂತನ ಮಾದರಿಯಲ್ಲಿ ತಿಳಿಸಲಾಗುತ್ತದೆ. ಒಂದರಿಂದ ನಾಲ್ಕನೇ ತರಗತಿಯವರೆಗೆ ಓದುತ್ತಿರುವ ಮಕ್ಕಳ ಎಲ್ಲಾ ಪೋಷಕರಿಗೆ ಈ ಕಾರ್ಯಕ್ರಮವನ್ನು ಮಕ್ಕಳೊಂದಿಗೆ ಆಲಿಸಬೇಕೆಂದು ಸಚಿವರು ಮನವಿ ಮಾಡಿದ್ದಾರೆ.

ಓದಿ : ದಂತ ಚಿಕಿತ್ಸೆಗಾಗಿ ಹೊಸ ಲೇಸರ್ ಸಾಧನ‌ ಆವಿಷ್ಕರಿಸಿದ ಹುಬ್ಬಳ್ಳಿ ವೈದ್ಯ.. ದೇಶದಲ್ಲೇ ಮೊದಲು

ಅಲ್ಲಿ ಪ್ರಸಾರಗೊಳ್ಳುವ ಹಾಡು, ಕಥೆ ಇತ್ಯಾದಿಗಳನ್ನು ನಿಮ್ಮ ಮಕ್ಕಳಿಗೆ ಮತ್ತೊಮ್ಮೆ ಹೇಳುವುದರ ಮೂಲಕ ಹೇಳಿಸುವ ಮೂಲಕ ಮಕ್ಕಳಿಗೆ ನಲಿಯುವುದರ ಜೊತೆಗೆ ಕಲಿಯುವುದನ್ನು ಅಭ್ಯಾಸ ಮಾಡಿಸಿ ಅಂತ ಪೋಷಕರಿಗೆ ಕೋರಿದ್ದಾರೆ‌‌.

ಮಕ್ಕಳೇ ಹೇಳಿದ ಕತೆಗಳೂ ಪ್ರಸಾರ : ತಮ್ಮ ಮಕ್ಕಳಿಂದ ಯಾವುದಾದರೂ ಕತೆ ಹಾಡು ಒಗಟು ಹೇಳಬಹುದಾದರೆ ವ್ಯಾಟ್ಸ್ ಆ್ಯಪ್ ನಂಬರ್ 9449417612 ಗೆ ಕಳಿಸಿದರೆ ಅದನ್ನು ಪ್ರಸಾರ ಮಾಡಲಾಗುವುದು. ಈ ಕಾರ್ಯಕ್ರಮ ರಾಜ್ಯದ 13 ಆಕಾಶವಾಣಿ ಕೇಂದ್ರಗಳಿಂದ ಪ್ರಸಾರವಾಗುತ್ತದೆ. ಮತ್ತು ನಂತರ ಈ ಕಾರ್ಯಕ್ರಮಗಳು ಯೂಟ್ಯೂಬ್ ನಲ್ಲಿ ಸಹ ಲಭ್ಯವಿರುತ್ತವೆ. ಎಳೆ ಕಂದಗಳ ಮನಸ್ಸುಗಳನ್ನು ವಿಕಸನಗೊಳಿಸುವ ಉದ್ದೇಶದಿಂದ ಪ್ರಾರಂಭಿಸಲಾಗುತ್ತಿರುವ ಈ ಕಾರ್ಯಕ್ರಮಕ್ಕೆ ತಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಸಚಿವರು ಪೋಷಕರಲ್ಲಿ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.