ETV Bharat / state

ಗುಜರಾತ್ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜಯಭೇರಿ: ಕಟೀಲ್ ಅಭಿನಂದನೆ - ನಳಿನ್‍ ಕುಮಾರ್ ಕಟೀಲ್ ಅಭಿನಂದನೆ

ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

Nalin Kumar congratulates those who won the Gujarat elections
ಗುಜರಾತ್ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜಯಭೇರಿ
author img

By

Published : Feb 23, 2021, 9:53 PM IST

ಬೆಂಗಳೂರು: ಗುಜರಾತ್​​ನ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದು, ಜಯ ಗಳಿಸಿದ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ.

ಈ ಚುನಾವಣೆಯ ಮೂಲಕ ಗುಜರಾತ್ ರಾಜ್ಯವು ಬಿಜೆಪಿ ಭದ್ರಕೋಟೆ ಎಂಬುದು ಮತ್ತೆ ಸಾಬೀತಾಗಿದೆ. ಕೃಷಿ ಸುಧಾರಣಾ ಮಸೂದೆಗಳು, 370ನೇ ವಿಧಿ ರದ್ಧತಿ, ಶ್ರೀರಾಮ ಮಂದಿರದ ನಿರ್ಮಾಣ, ತ್ರಿವಳಿ ತಲಾಖ್ ರದ್ದು ಮಾಡಿದ ಕೇಂದ್ರದ ನಿರ್ಧಾರವನ್ನು ಜನರು ಬೆಂಬಲಿಸಿದ್ದಾರೆ. ಅಲ್ಲದೆ, ಒಂದೇ ಕುಟುಂಬ ನೇತೃತ್ವದ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಾರೆ ಎಂದು ಕಟೀಲ್ ಕುಟುಕಿದ್ದಾರೆ.

ಇದು ಗುಜರಾತ್ ರಾಜ್ಯದ ಜನತೆಗೆ ಸಂದ ಜಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರ ನೇತೃತ್ವ ಮತ್ತು ಕಾರ್ಯಕ್ರಮಗಳ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿರುವುದು ಇದರಿಂದ ಸ್ಪಷ್ಟವಾಗಿದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.