ETV Bharat / state

ಮಜಾವಾದಿಯಿಂದ ಮಜೋತ್ಸವ: ಸಿದ್ದರಾಮೋತ್ಸವ ಟೀಕಿಸಿದ ನಳಿನ್ ಕುಮಾರ್ ಕಟೀಲ್ - Siddaramaotsava in davanagere

ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುವುದರಲ್ಲಿ ಕಾಂಗ್ರೆಸ್ ಪಕ್ಷ ಎತ್ತಿದ ಕೈ. ಇದೆಲ್ಲವನ್ನೂ ಮರೆತ ಸಮಾಜವಾದಿ ಹಣೆಪಟ್ಟಿ ಕಟ್ಟಿಕೊಂಡ ಮಜಾವಾದಿ ಸಿದ್ದರಾಮಯ್ಯ ಸುಮಾರು 17 ಕೋಟಿ ರೂ.ಗಿಂತ ಅಧಿಕ ಖರ್ಚು ಮಾಡಿ ಸಿದ್ದರಾಮೋತ್ಸವ ಮಾಡಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಹೇಳಿದ್ದಾರೆ.

Kateel criticizes Siddaramaotsava
ಸಿದ್ದರಾಮೋತ್ಸವ ಟೀಕಿಸಿದ ಕಟೀಲ್
author img

By

Published : Aug 3, 2022, 10:05 PM IST

ಬೆಂಗಳೂರು: ಕಾಂಗ್ರೆಸ್ ಮುಖಂಡ, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ಜನರನ್ನು ಮರೆತು, ತಮ್ಮ ಜನ್ಮದಿನ ಆಚರಣೆ ಮೂಲಕ ಮಜಾವಾದದಲ್ಲಿ ತೊಡಗಿದ್ದಾರೆ. ಇಂದು ಆಚರಿಸಿದ್ದು, ಸಿದ್ದರಾಮೋತ್ಸವ ಅಲ್ಲ ಮಜೋತ್ಸವ ಎಂದು ನಳಿನ್​ ಕುಮಾರ್ ಕಟೀಲ್ ಟೀಕಿಸಿದ್ದಾರೆ.

ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪದಿಂದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುವುದರಲ್ಲಿ ಕಾಂಗ್ರೆಸ್ ಪಕ್ಷ ಎತ್ತಿದ ಕೈ. ಇದೆಲ್ಲವನ್ನೂ ಮರೆತ ಸಮಾಜವಾದಿ ಹಣೆಪಟ್ಟಿ ಕಟ್ಟಿಕೊಂಡ ಮಜಾವಾದಿ ಸಿದ್ದರಾಮಯ್ಯ ಸುಮಾರು 17 ಕೋಟಿಗಿಂತ ಅಧಿಕ ಖರ್ಚು ಮಾಡಿ, ತಮ್ಮ ಬೆಂಬಲಿಗರಿಂದ ಜನ್ಮದಿನೋತ್ಸವ ಆಚರಿಸಿಕೊಳ್ಳುತ್ತಿದ್ದಾರೆ. ಇದು ಎಷ್ಟು ಸರಿ? ಎಂದು ಪತ್ರಿಕಾ ಹೇಳಿಕೆ ಮೂಲಕ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್​ಗೆ ಜನಪರ ಕಾಳಜಿ ಇಲ್ಲ: ಬಿಜೆಪಿ ಸರ್ಕಾರವು ಕರ್ನಾಟಕದ ಜನರ ಸಂಕಷ್ಟ ಮತ್ತು ಕಾನೂನು- ಸುವ್ಯವಸ್ಥೆ ದೃಷ್ಟಿಯಿಂದ “ಜನೋತ್ಸವ” ಆಚರಣೆಯನ್ನೇ ರದ್ದು ಮಾಡಿತ್ತು. ಆದರೆ, ಕಾಂಗ್ರೆಸ್ಸಿಗರ ಒಂದು ಬಣವು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಎಂದು ಬಿಂಬಿಸಲು ಈ ಅದ್ಧೂರಿ ಹಾಗೂ ಸಂಭ್ರಮದ ಕಾರ್ಯಕ್ರಮಕ್ಕೆ ದುಂದುವೆಚ್ಚ ಮಾಡಿದೆ. ಕಾಂಗ್ರೆಸ್ ಪಕ್ಷಕ್ಕೆ ಜನಪರ ಕಾಳಜಿ ಇಲ್ಲ ಎಂಬುದನ್ನು ಇದರಿಂದ ಸ್ಪಷ್ಟಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ನನ್ನ ಮತ್ತು ಡಿಕೆಶಿ ನಡುವೆ ಬಿರುಕಿದೆ ಎಂಬ ತಪ್ಪು ಮಾಹಿತಿಯನ್ನು ಜನರಿಗೆ ನೀಡಲಾಗುತ್ತಿದೆ: ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.