ETV Bharat / state

ಹಿಂಸಾ ಗ್ಯಾರಂಟಿ ಸ್ಕೀಮ್ ಸಹಿಸುವುದಿಲ್ಲ: ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ - ರಾಜ್ಯದ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ

ರಾಜ್ಯದ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾಗುತ್ತಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್ ಖಂಡಿಸಿದ್ದಾರೆ.

nalin-kumar-kateel-reaction-on-attack-on-bjp-workers
ಹಿಂಸಾ ಗ್ಯಾರಂಟಿ ಸ್ಕೀಮ್ ಸಹಿಸುವುದಿಲ್ಲ:ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ
author img

By

Published : May 15, 2023, 3:52 PM IST

Updated : May 15, 2023, 4:05 PM IST

ಬೆಂಗಳೂರು: ಕಾಂಗ್ರೆಸ್ ಪಕ್ಷವು ಬಹುಮತ ಗಳಿಸಿದ ತಕ್ಷಣ ರಾಜ್ಯದ ವಿವಿಧೆಡೆ ಹಿಂಸಾ ಗ್ಯಾರಂಟಿ ಸ್ಕೀಮ್ ಅನ್ನು ಜಾರಿಗೆ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಹೊಸಕೋಟೆಯಲ್ಲಿ ಒಬ್ಬ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದು, ಇತರ ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಇದು ಅತ್ಯಂತ ಖಂಡನೀಯ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರು ಇಂತಹ ಹಿಂಸಾಚಾರದ ಪ್ರವೃತ್ತಿಗೆ ಆಸ್ಪದ ಕೊಡಬಾರದು ಎಂದು ಅವರು ಎಚ್ಚರಿಸಿದ್ದಾರೆ. ರಾಜ್ಯದ ವಿವಿಧೆಡೆಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ, ಇದನ್ನು ತಡೆಯಬೇಕು. ಪಾಕಿಸ್ತಾನದ ಧ್ವಜ ಹಾರಿಸುವುದು ದೇಶದ್ರೋಹದ ಚಟುವಟಿಕೆಯಾಗಿದ್ದು ಇದನ್ನು ನಿಯಂತ್ರಿಸಬೇಕು ಯಾವುದೇ ಕಾರಣಕ್ಕೂ ಇಂತಹ ಹಿಂಸಾಚಾರದ ದೇಶದ್ರೋಹಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಮುಖಂಡರು ತಮ್ಮೊಳಗಿನ ಭಿನ್ನಮತವನ್ನು ಬದಿಗಿಟ್ಟು, ತಾವು ಈಗಾಗಲೇ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದಾಗಬೇಕು. ಹಿಂಸೆಯನ್ನು ಪ್ರಚೋದಿಸುವವರು ಮತ್ತು ದೇಶದ್ರೋಹಿ ಚಟುವಟಿಕೆಗಳಿಗೆ ಬೆಂಬಲ ನೀಡುವವರನ್ನು ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಹೊಸಕೋಟೆಯಲ್ಲಿ ನಿಲ್ಲದ ರಾಜಕೀಯ ವೈಷಮ್ಯ: ಕಿಡಿಗೇಡಿಗಳಿಂದ ಎಂಟಿಬಿ ವೃತ್ತದ ಬೋರ್ಡ್ ಧ್ವಂಸ

Last Updated : May 15, 2023, 4:05 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.