ಬೆಂಗಳೂರು: ಇಡೀ ರಾಜ್ಯದ ಜನತೆ ಹಾಗೂ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಬಿಜೆಪಿ ಕಚೇರಿಯಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ಗೆ ಅಭಿನಂದನೆ ಸಲ್ಲಿಸುತ್ತೇನೆ. ಜನತಾ ಆಶೀರ್ವಾದವನ್ನು ಸ್ವಾಗತಿಸುತ್ತೇನೆ ಎಂದರು.
ನಮ್ಮ ಕಾರ್ಯಕರ್ತರು ಹಗಲು, ರಾತ್ರಿ ಕೆಲಸ ಮಾಡಿದ್ದಾರೆ. ನಮ್ಮ ಸರ್ಕಾರ ಉತ್ತಮವಾಗಿ ಕೆಲಸ ಮಾಡಿದೆ. ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅವರು ಅಭಿವೃದ್ದಿ ಕೆಲಸ ಮಾಡಿದ್ದಾರೆ. ಬಿಜೆಪಿ ಸೋಲಿಗೆ ರಾಜ್ಯಾಧ್ಯಕ್ಷನಾಗಿ ನಾನು ಹೊಣೆ ಹೊರುತ್ತೇನೆ ಎಂದು ಹೇಳಿದರು.
ಇಂದು ಬಂದಿರುವ ಫಲಿತಾಂಶವನ್ನು ನಾನು ಸ್ವಾಗತಿಸುತ್ತೇನೆ. ಕೆಲವೆಡೆ ಜನರು ಖುಷಿ ಆಗಿದ್ದಾರೆ. ಅನೇಕ ಕಡೆಗಳಲ್ಲಿ ಗೆದ್ದಿದ್ದೇವೆ. ಸೋತಿರುವ ಕಡೆಗಳಲ್ಲಿ ಪರಾಮರ್ಶೆ ಮಾಡ್ತೇವೆ. ಮುಂದಿನ ಲೋಕಸಭಾ ಚುನಾವಣೆಗೆ ಒಟ್ಟಾಗಿ ಕೆಲಸ ಮಾಡ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ:ಪಕ್ಷದ ಹಿನ್ನಡೆ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ: ಬಿ ಎಸ್ ಯಡಿಯೂರಪ್ಪ