ETV Bharat / state

ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ : ನಳಿನ್‍ಕುಮಾರ್ ಕಟೀಲ್ - ಈಟಿವಿ ಭಾರತ್​ ಕನ್ನಡ

ಸೈಲೆಂಟ್ ಸುನೀಲ್​ ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಆತ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ.

ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ : ನಳಿನ್‍ಕುಮಾರ್ ಕಟೀಲ್
nalin-kumar-kateel-says-silent-sunil-is-not-allowed-to-join-bjp
author img

By

Published : Nov 29, 2022, 1:02 PM IST

ಬೆಂಗಳೂರು: ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆ ಕುರಿತ ಸುದ್ದಿ ಕೇವಲ ಊಹಾಪೋಹವಾಗಿದ್ದು, ಯಾವುದೇ ಕಾರಣಕ್ಕೂ ರೌಡಿ ಹಿನ್ನಲೆ ಹೊಂದಿರುವ ವ್ಯಕ್ತಿ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.

ಸೈಲೆಂಟ್ ಸುನೀಲ್​ ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಆತ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು. ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲಾ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದರು.

ಬಿಜೆಪಿ, ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ನಳಿನ್‍ಕುಮಾರ್ ಕಟೀಲ್ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: 'ಕೆಸಿ ವ್ಯಾಲಿ ಹೆಸರಲ್ಲಿ ಪೈಪ್‌ಲೈನ್ ಎಳೆದು ಜೇಬು ತುಂಬಿಸಿಕೊಳ್ಳುವ ಉದ್ದೇಶ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.