ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುವುದಾಗಿ ವಿವಾದಾತ್ಮಕ ಹೇಳಿಕೆಯ ಎಫ್‌ಐಆರ್ ಹಾಗೂ ತನಿಖೆಯ ಚಾರ್ಜ್‌ಶೀಟ್ ರದ್ದು ಕೋರಿ ಸಂಸದ ನಳೀನ್ ಕುಮಾರ್ ಕಟೀಲ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಬಿಜೆಪಿ ಕಾರ್ಯಕರ್ತ ಕಾರ್ತಿಕ್ ರಾಜ್‌ನನ್ನು 2017ರಲ್ಲಿ ದುಷ್ಕರ್ಮಿಗಳು ಮಂಗಳೂರಿನಲ್ಲಿ ಕೊಲೆ ಮಾಡಿದ್ರು. ಹೀಗಾಗಿ ನಳಿನ್ ಕುಮಾರ್ ಕಟೀಲ್ ಅವರು ಕಾರ್ಯಕ್ರಮ ಒಂದರಲ್ಲಿ ಮಾತಾನಾಡುತ್ತ ಕಾರ್ತಿಕ್ ರಾಜ್ರನ್ನ ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸದಿದ್ದರೆ ಇಡೀ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನಳೀನ್ ಕುಮಾರ್ ಕಟೀಲ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಂತ್ರ ಕೊಣಾಜೆ ಪೊಲೀಸರು ತನಿಖೆ ನಡೆಸಿ ಮಂಗಳೂರು ಜೆಎಂಎಫ್‌ಸಿ ಕೋರ್ಟ್‌ಗೆ ಜಾರ್ಜ್‌ಶೀಟ್ ಸಲ್ಲಿಸಿದ್ದರು. ಇದೀಗ ಪ್ರಕರಣ ರದ್ದು ಕೋರಿ ದಕ್ಷಿಣ ಕನ್ನಡ ಸಂಸದ ನಳಿನ್‌ಕುಮಾರ್ ಕಟೀಲ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಅರ್ಜಿ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ.