ETV Bharat / state

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಅವರ ನಿವಾಸದಲ್ಲೇ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ - ನಾಲ್ವಡಿ ಕೃಷ್ಣರಾಜ ಒಡೆಯರ ಪ್ರಶಸ್ತಿ

ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಉನ್ನತ ಪ್ರಶಸ್ತಿಯಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.​

ಹೆಚ್.ಡಿ.ದೇವೇಗೌಡರಿಗೆ  ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

author img

By ETV Bharat Karnataka Team

Published : Nov 6, 2023, 9:48 PM IST

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಇಂದು ಸಂಜೆ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್. ವೆಂಕಟಾಚಲಯ್ಯ ಅವರು ಹಾಗೂ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಹೆಚ್.ಡಿ.ದೇವೇಗೌಡರಿಗೆ  ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ
ಹೆಚ್.ಡಿ.ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

ಪ್ರಶಸ್ತಿ ಪ್ರದಾನ ಮಾಡಿ ಮಾಜಿ ಪ್ರಧಾನಿಗಳಿಗೆ ಶುಭ ಕೋರಿದ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್.ವೆಂಕಟಾಚಲಯ್ಯ ಅವರು, ನಾಡಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ದೇಶದ ಮೊದಲ ಕನ್ನಡಿಗ ಪ್ರಧಾನಮಂತ್ರಿ, ರಾಜಕೀಯ ಮುತ್ಸದ್ಧಿ ಮತ್ತು ದೂರದೃಷ್ಟಿಯ ಆಡಳಿತಗಾರ ದೇವೇಗೌಡರಿಗೆ ಸಂದಿರುವುದು ನನಗೆ ಬಹಳ ಸಂತಸ ಉಂಟು ಮಾಡಿದೆ. ಅತ್ಯುನ್ನತ ಸಾಧಕರಿಗೆ ಪ್ರಶಸ್ತಿ ಸಂದಿದೆ ಎಂದು ನುಡಿದರು.

ಮಾಜಿ ಪ್ರಧಾನಿಗಳ ಸಂತಸ: ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಅನಾರೋಗ್ಯದ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ನಾನು ಆ ಕಾರ್ಯಕ್ರಮಕ್ಕೆ ಹಾಜರಾಗುವುದು ಕಷ್ಟ ಸಾಧ್ಯವಿತ್ತು. ಹೀಗಾಗಿ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅವರು, ನಾಡೋಜ ಮಹೇಶ್ ಜೋಶಿ ಅವರು ನನ್ನ ಮನೆಗೇ ಬಂದು ಪ್ರಶಸ್ತಿ ನೀಡಿದ್ದಾರೆ. ಇವರಿಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಮಾತನಾಡಿ, ನಾಡಿಗೆ, ದೇಶಕ್ಕೆ ಮಹಾನ್ ಕೊಡುಗೆ ನೀಡಿದ ದೇವೇಗೌಡರಿಗೆ ನಾಲ್ವಡಿ ಪ್ರಶಸ್ತಿ ನೀಡುತ್ತಿರುವುದು ಆ ಪ್ರಶಸ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಅಭಿವೃದ್ಧಿಯ ಹರಿಕಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಜರಾಮರರಾದರೆ, ದೇವೇಗೌಡರು ಸ್ವಾತಂತ್ರೋತ್ತರ ಭಾರತದಲ್ಲಿ ಆರು ದಶಕಗಳ ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ನಾಡು, ದೇಶದ ಅಭಿವೃದ್ಧಿಗೆ ಆವಿಸ್ಮರಣೀಯ ಕೊಡುಗೆ ನೀಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಜನತಾ ದರ್ಶನದಲ್ಲಿ 197 ಅರ್ಜಿ ಸ್ವೀಕಾರ: ಭೂ, ಡ್ರಗ್ಸ್ ಮಾಫಿಯಾ ತಡೆಗಟ್ಟಲು ಕ್ರಮ ಎಂದ ಸಚಿವರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.