ETV Bharat / state

2 ದಿನದಲ್ಲಿ ಉಪ ಚುನಾವಣೆ ಅಭ್ಯರ್ಥಿಗಳ ಹೆಸರು ಪ್ರಕಟ: ನಳಿನ್ ಕುಮಾರ್ ಕಟೀಲ್

ರಾಜರಾಜೇಶ್ವರಿ ನಗರ ಕ್ಷೇತ್ರ ಹಾಗೂ  ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸುವ  ಅಭ್ಯರ್ಥಿಗಳ ಹೆಸರು ಇನ್ನೆರಡು ದಿನಗಳಲ್ಲಿ ತಿಳಿಯಲಿದೆ.

Nalin Kumar katil
Nalin Kumar katil
author img

By

Published : Oct 2, 2020, 3:00 PM IST

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಯಾರು ಎನ್ನುವ ಕುತೂಹಲಕ್ಕೆ ಇನ್ನೆರಡು ದಿನದಲ್ಲಿ ತೆರೆ ಬೀಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಈಗಾಗಲೇ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ಘಟಕದ ತೀರ್ಮಾನ ಮಾಡಿದ್ದೇವೆ. ಕೇಂದ್ರಕ್ಕೆ ಹೆಸರುಗಳನ್ನು ಕಳುಹಿಸಿದ್ದೇವೆ. ಕೇಂದ್ರದ ನಾಯಕರು ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಅಭ್ಯರ್ಥಿಗಳು ಯಾರು ಎನ್ನುವ ಪ್ರಶ್ನೆಗೆ ಪರಿಪೂರ್ಣ ಉತ್ತರ ಬರಲಿದೆ ಎಂದರು.

ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡುವಾಗ ಎಲ್ಲ ರೀತಿಯಲ್ಲಿಯೂ ಯೋಚಿಸಲಾಗಿದೆ. ಯಾರೇ ಅಭ್ಯರ್ಥಿಯಾದರೂ ಅವರ ಪರವಾಗಿ ಕೆಲಸ ಮಾಡಲು ಈಗಾಗಲೇ ಕ್ಷೇತ್ರದ ಕಾರ್ಯಕರ್ತರಿಗೆ‌ ಸೂಚನೆ ನೀಡಲಾಗಿದ್ದು, ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಅಭ್ಯರ್ಥಿಗಳ ಹೆಸರು ಪ್ರಕಟಣೆ ಮಾತ್ರ ಬಾಕಿ ಇದೆ. ಉಳಿದಂತೆ ಚುನಾವಣಾ ಸಿದ್ದತೆ ಆರಂಭಿಸಲಾಗಿದೆ ಎಂದರು.

ಅಭ್ಯರ್ಥಿಗಳ ಹೆಸರುಗಳುಳ್ಳ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸುವ ಜವಾಬ್ದಾರಿ ನಿರ್ವಹಿದ್ದೇವೆ. ಆದರೆ, ನಾವು ನಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಚುನಾವಣಾ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡುವ ಕೆಲಸ ಮಾಡಿದ್ದೇವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.