ETV Bharat / state

ಶನಿವಾರ ರಾತ್ರಿ ಈ ಮಾರ್ಗದಲ್ಲಿ ನಮ್ಮ ಮೆಟ್ರೋ ವಾಣಿಜ್ಯ ಸೇವೆ ಸ್ಥಗಿತ - ಬೆಂಗಳೂರು ಮೆಟ್ರೋ ಕಾಮಗಾರಿ

ಕಾಮಗಾರಿ ನಿರ್ವಹಣೆ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯು ಶನಿವಾರ ರಾತ್ರಿ 09.30 ಗಂಟೆಯಿಂದ ಸ್ಥಗಿತಗೊಳ್ಳಲಿದೆ.

namma-metro-commercial-service-shutdown-on-this-route-tomorrow
ನಾಳೆ ಈ ಮಾರ್ಗದಲ್ಲಿ ನಮ್ಮ ಮೆಟ್ರೋ ವಾಣಿಜ್ಯ ಸೇವೆ ಸ್ಥಗಿತ
author img

By

Published : May 27, 2022, 9:17 PM IST

ಬೆಂಗಳೂರು: ಮೆಟ್ರೋ ರೈಲು ನಿಗಮವು ನಾಳೆ (ಶನಿವಾರ) ರಾತ್ರಿ 9.30 ಗಂಟೆಯಿಂದ ನಗರದ ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ನೇರಳ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿದೆ.‌ ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆ ಸ್ಥಗಿತಗೊಳ್ಳಲಿದೆ.

ನಾಳೆ ರಾತ್ರಿ 09.30 ಗಂಟೆಯಿಂದ ರೈಲು ಸೇವೆ ಸ್ಥಗಿತವಾಗಲಿದ್ದು, ಈ ಅವಧಿಯಲ್ಲಿ ಎಂ.ಜಿ. ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಸಂಚಾರ ಲಭ್ಯವಿರಲಿದೆ. ಹಾಗೆಯೇ ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 8.40 ಗಂಟೆಗೆ ಹೊರಡುತ್ತದೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಕಡೆಗೆ ರಾತ್ರಿ 9.10 ಗಂಟೆಗೆ ಹೊರಡಲಿದೆ.

ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿಗೆ ಕೊನೆಯ ರೈಲು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ರಾತ್ರಿ 9.10 ಗಂಟೆಗೆ ಹೊರಡಲಿದೆ. ಈ ಅವಧಿಯ ನಂತರ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲುಗಳು ಓಡಾಲಿವೆ.

ಹಸಿರು ಮಾರ್ಗದ ಮಟ್ರೋ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಮತ್ತು ವೇಳಾಪಟ್ಟಿಯ ಪ್ರಕಾರ ರೈಲು ಸೇವೆಯು ಈ ಮಾರ್ಗದಲ್ಲಿ ಲಭ್ಯವಿರಲಿದೆ. ಭಾನುವಾರದಂದು ಮೆಟ್ರೋ ಸೇವೆಯು ನೇರಳೆ ಮಾರ್ಗದಲ್ಲಿ ಪೂರ್ಣವಾಗಿ ಬೆಳಗ್ಗೆ 7 ಗಂಟೆಯಿಂದ ವೇಳಾಪಟ್ಟಿ ಪ್ರಕಾರ ಪುನರಾರಂಭವಾಗಲಿದೆ.

ಇದನ್ನೂ ಓದಿ: ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ ಶೀಘ್ರದಲ್ಲೇ ಪ್ರಾರಂಭ: ಪ್ರಯಾಣದ ಅವಧಿ 2 ಗಂಟೆ ಉಳಿತಾಯ ಸಾಧ್ಯತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.