ETV Bharat / state

ಬೆಂಗಳೂರಿನಿಂದ ಹೊಸೂರಿನವರೆಗೆ 'ನಮ್ಮ ಮೆಟ್ರೋ'.. ಕನ್ನಡಪರ ಸಂಘಟನೆಗಳಿಂದ ವಿರೋಧ - ಹೊಸೂರುವರೆಗೆ ಮೆಟ್ರೋ ವಿಸ್ತರಣೆ

ಹೊಸೂರುವರೆಗೆ ಮೆಟ್ರೋ ವಿಸ್ತರಣೆಗೆ ಒಪ್ಪಿಗೆ ನೀಡದಂತೆ ಒತ್ತಾಯಿಸಿರುವ ಜನತೆ ಟ್ವಿಟರ್​ನಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Namma Metro
ನಮ್ಮ ಮೆಟ್ರೋ
author img

By

Published : Feb 28, 2023, 1:37 PM IST

ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ ತಮಿಳುನಾಡಿನ ಹೊಸೂರಿನವರೆಗೆ 'ನಮ್ಮ ಮೆಟ್ರೋ' ಮಾರ್ಗ ವಿಸ್ತರಿಸುವ ಕಾರ್ಯಸಾಧ್ಯತಾ ವರದಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಇದಕ್ಕೆ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಕೇಂದ್ರದ ನಿಲುವನ್ನು ಖಂಡಿಸಿರುವ ಸಂಘಟನೆಗಳು ಹೋರಾಟದ ಎಚ್ಚರಿಕೆಯನ್ನೂ ನೀಡಿವೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಕನ್ನಡಿಗರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರಿನ ಹೊರವಲಯಗಳಿಗೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಮೆಟ್ರೋ ಮಾರ್ಗ ಸಂಪರ್ಕ ಕಲ್ಪಿಸುವುದನ್ನು ಕಡೆಗಣಿಸಿ ತಮಿಳುನಾಡಿನ ಹೊಸೂರುವರೆಗೆ ಮೆಟ್ರೋ ವಿಸ್ತರಿಸಿದರೆ ಸರ್ಕಾರದ ವಿರುದ್ಧ ಎಲ್ಲ ಜಿಲ್ಲೆಗಳಲ್ಲಿ ಹೋರಾಟ ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರ ಮೆಟ್ರೋ ವಿಸ್ತರಣೆಯ ಅಧ್ಯಯನಕ್ಕೆ ನೀಡಿರುವ ಅನುಮತಿ ವಾಪಸ್​ ಪಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಒಪ್ಪಿಗೆ ನೀಡದಂತೆ ಕರವೇ ಆಗ್ರಹ: ಈ ಯೋಜನೆಗೆ ಸಂಬಂಧಿಸಿದಂತೆ ಕನ್ನಡಿಗರ ವಿರೋಧ ನಿರ್ಲಕ್ಷಿಸಿ ಕಾರ್ಯಸಾಧ್ಯತಾ ವರದಿ ಅಧ್ಯಯನಕ್ಕೆ ಕೇಂದ್ರ ಒಪ್ಪಿಗೆ ನೀಡಿರುವುದು ಸರಿಯಲ್ಲ. ಹಿಂದೆಯೇ ನಾವೆಲ್ಲರೂ ಇದನ್ನು ಖಂಡಿಸಿದ್ದೇವೆ. ಬೆಂಗಳೂರಿನಿಂದ ಹೊಸೂರಿಗೆ ಮೆಟ್ರೋ ಸಂಪರ್ಕ ಕಲ್ಪಿಸಿದರೆ ಕನ್ನಡಿಗರಿಗೆ ತೊಂದರೆಯಾಗಲಿದೆ. ತಮಿಳಿಗರ ಸಂಖ್ಯೆ ಹೆಚ್ಚಾಗುತ್ತದೆ. ಮೆಟ್ರೋ ಸಂಪರ್ಕ ಕಲ್ಪಿಸಿದರೆ ಇನ್ನೂ ಸುಲಭವಾಗಿ ಬೆಂಗಳೂರಿಗೆ ಬರುತ್ತಾರೆ. ತಮ್ಮ ಬದುಕು ಕಟ್ಟಿಕೊಳ್ಳುವುದು ಮಾತ್ರವಲ್ಲ, ಕನ್ನಡಿಗರ ಉದ್ಯೋಗ ಕಸಿದುಕೊಳ್ಳುತ್ತಾರೆ. ಯಾವುದೇ ಕಾರಣಕ್ಕೂ ಇದಕ್ಕೆ ಒಪ್ಪಿಗೆ ನೀಡಬಾರದು ಎಂದು ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಆಗ್ರಹಿಸಿದ್ದಾರೆ.

ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಜನತೆ: ಇನ್ನು, ಟ್ವಿಟರ್‌ನಲ್ಲಿ ಜನತೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಮೊದಲು ಬೆಂಗಳೂರು ಹಾಗೂ ಅದರ ಸುತ್ತಮುತ್ತ ಜಿಲ್ಲೆಗಳಿಗೆ ಸಂಪರ್ಕ ಸಾಧ್ಯವಾಗುವಂತೆ ಮೆಟ್ರೋ ವಿಸ್ತರಿಸಿ. ರಾಮನಗರ, ತುಮಕೂರು, ಹೊಸಕೋಟೆ, ಕುಣಿಗಲ್‌, ದೇವನಹಳ್ಳಿ, ನರಸಾಪುರದಲ್ಲಿ ಮೆಟ್ರೋ ಲೈನ್‌ ರೂಪಿಸಿ. ಚುನಾವಣೆಯಲ್ಲಿ ತಮಿಳರ ವೋಲೈಕೆಗಾಗಿ ಈ ಮಾರ್ಗ ಘೋಷಿಸಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡು ಸಚಿವಾಲಯ ಒಪ್ಪಿಗೆ: ಬಿಎಂಆರ್‌ಸಿಎಲ್‌ನಿಂದ ನಡೆಯುತ್ತಿರುವ ಮೆಟ್ರೋ ಹಳದಿ ಮಾರ್ಗ 2ನೇ ಹಂತದ ಆರ್‌.ವಿ.ರಸ್ತೆ-ಬೊಮ್ಮಸಂದ್ರ(ರೀಚ್‌- 5) ಮುಕ್ತಾಯ ಹಂತದಲ್ಲಿದೆ. ಈ ಮಾರ್ಗವನ್ನು ಹೊಸೂರುವರೆಗೆ ವಿಸ್ತರಿಸುವ ಯೋಜನೆಗೆ ಒಪ್ಪಿಗೆ ಕೇಳಿ ಚೆನ್ನೈ ಮೆಟ್ರೋ ರೈಲ್‌ ಲಿ. (ಸಿಎಂಆರ್‌ಎಲ್‌) ತಮಿಳುನಾಡು ಸರ್ಕಾರದ ಮೂಲಕ ಕಳೆದ ವರ್ಷ ಕೋರಿತ್ತು. ಇದಕ್ಕೆ ಕಳೆದ ಜೂನ್‌ನಲ್ಲಿ ಕರ್ನಾಟಕ ಸರ್ಕಾರ ಒಪ್ಪಿಗೆ ಸೂಚಿಸಿತ್ತು. ನಂತರ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಅಲ್ಲಿನ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ವಾರದ ಹಿಂದೆ ಇದಕ್ಕೆ ಸಚಿವಾಲಯ ಒಪ್ಪಿಗೆ ನೀಡಿದೆ ಎಂದು ತಮಿಳುನಾಡಿನ ಕೃಷ್ಣಗಿರಿ ಸಂಸದ ಡಾ ಎ. ಚೆಲ್ಲಕುಮಾರ್‌ ತಿಳಿಸಿದ್ದಾರೆ.

ಈ ಯೋಜನೆ ಪ್ರಕಾರ, ಬೊಮ್ಮಸಂದ್ರದಿಂದ ಹೊಸೂರಿಗೆ 20.5 ಕಿ.ಮೀ. ಮೆಟ್ರೋ ಮಾರ್ಗ ನಿರ್ಮಾಣವಾಗಬೇಕಿದೆ. ರಾಜ್ಯದಲ್ಲಿ 11.7 ಕಿ.ಮೀ. ಹಾಗೂ 8.8 ಕಿ.ಮೀ ರಾಜ್ಯದ ಹೊರಭಾಗದಲ್ಲಿ ನಿರ್ಮಾಣವಾಗಲಿದೆ.

ಇದನ್ನೂ ಓದಿ: ಭದ್ರಾ ಜಲಾಶಯದಿಂದ ತುಂಗಭದ್ರಾ ಡ್ಯಾಂಗೆ ನೀರು ಬಿಟ್ಟರೇ ಜೋಕೆ: ಸರ್ಕಾರಕ್ಕೆ ಎಚ್ಚರಿಸಲು ಹೋರಾಟಕ್ಕಿಳಿದ ದಾವಣಗೆರೆ ರೈತರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.