ಬೆಂಗಳೂರು: ನಗರದ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ನಾಳೆ(ಶನಿವಾರ) ರಾತ್ರಿ ಕೆಲವು ಗಂಟೆಗಳ ಕಾಲ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಮೆಟ್ರೋ ನಿಲ್ದಾಣಗಳ ಕಾಮಗಾರಿ ಹಿನ್ನೆಲೆಯಲ್ಲಿ ಸೇವೆ ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಶನಿವಾರ ರಾತ್ರಿ 9.30 ಗಂಟೆಯಿಂದ ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ರಿಪೇರಿ ಕಾಮಗಾರಿ ಇರುವುದರಿಂದ ಮೆಟ್ರೋ ಸಂಚಾರ ಬಂದ್ ಆಗಲಿದೆ. ಈ ಅವಧಿಯಲ್ಲಿ ಮೆಟ್ರೋ ಸೇವೆಯು ಎಂ.ಜಿ. ರಸ್ತೆ ಮತ್ತು ಕೆಂಗೇರಿ ಮಟ್ರೋ ನಿಲ್ದಾಣಗಳ ನಡುವೆ ಮಾತ್ರ ಸೇವೆ ಲಭ್ಯವಿರಲಿದೆ.
ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 8.40 ಗಂಟೆಗೆ ಹೊರಡಲಿದೆ. ಬೈಯಪ್ಪನಹಳ್ಳಿಗೆ ಕೊನೆಯ ರೈಲು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ರಾತ್ರಿ 9.10 ಗಂಟೆಗೆ ಹೊರಡುತ್ತದೆ.
ಹಸಿರು ಮಾರ್ಗದಲ್ಲಿ ಬದಲಾವಣೆ ಇಲ್ಲ: ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಭಾನುವಾರದಂದು ನೇರಳೆ ಮಾರ್ಗದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮೆಟ್ರೋ ಸೇವೆ ಪುನರಾರಂಭಿಸಲಾಗುತ್ತದೆ ಎಂದು ಬಿ.ಎಂ.ಆರ್.ಸಿ.ಎಲ್ ಹೇಳಿದೆ.
ಇದನ್ನೂ ಓದಿ: ಆಗಸದಲ್ಲೇ ಭಾರತೀಯ ಯುದ್ಧ ವಿಮಾನಗಳಿಗೆ ಇಂಧನ ಪೂರೈಸಿದ ಯುಎಇ ವಾಯುಪಡೆ