ಬೆಂಗಳೂರು: ಕೊರೊನಾ ಕಾರಣಕ್ಕೆ ಸ್ಥಗಿತವಾಗಿದ್ದ ನಮ್ಮ ಮೆಟ್ರೋ ಸೇವೆಯು ಕಳೆದ 7ರಂದು ನೇರಳೆ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಬಳಿಕ 9ರಂದು ಹಸಿರು ಮಾರ್ಗದಲ್ಲಿ ಸಂಚಾರ ಆರಂಭವಾಯಿತು. ಇದೀಗ ಇಂದಿನಿಂದ ಎರಡೂ ಮಾರ್ಗಗಳಲ್ಲಿ ಬೆಳಗ್ಗೆ 7ರಿಂದ ರಾತ್ರಿ 9ರವರೆಗೆ ರೈಲುಗಳು ಓಡಾಟ ನಡೆಸಲಿವೆ. ಜನದಟ್ಟಣೆಯ ಅವಧಿಯಲ್ಲಿ ಪ್ರತಿ 5 ನಿಮಿಷಕ್ಕೆ ಒಂದರಂತೆ ಹಾಗೂ ಬೇರೆ ಸಮಯದಲ್ಲಿ 10 ನಿಮಿಷಗಳ ಅಂತರದಲ್ಲಿ ನಮ್ಮ ಮೆಟ್ರೋ ಸಂಚಾರ ನಡೆಸಲಿದೆ.
ಇನ್ನು ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ 2 ಮೀಟರ್ ದೂರ ಅಂತರ ಕಾಯ್ದುಕೊಳ್ಳಬೇಕು. 50ಕ್ಕೂ ಹೆಚ್ಚು ಪ್ರಯಾಣಿಕರು ನಿಲ್ದಾಣದಲ್ಲಿ ನಿಲ್ಲುವಂತಿಲ್ಲ. ಆರು ಬೋಗಿ ರೈಲಿನಲ್ಲಿ 400 ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ರೈಲಿನಲ್ಲಿ ಗುರುತಿಸಿರುವ ಆಸನಗಳಲ್ಲಿ ಕೂರಲು ಮಾತ್ರ ಅವಕಾಶವಿದೆ. ಇನ್ನು ಈಗಲೂ ಟೋಕನ್ ಮಾರಾಟವನ್ನು ನಿಷೇಧಿಸಲಾಗಿದ್ದು, ಪ್ರಯಾಣಿಕರು ಸ್ಮಾರ್ಟ್ ಕಾರ್ಡ್ಗಳನ್ನು ಮಾತ್ರ ಬಳಸಬೇಕಾಗಿದೆ.