ETV Bharat / state

'ಅಶ್ವತ್ಥ ನಾರಾಯಣರಿಗೆ ಚುನಾವಣೆ ಘೋಷಣೆ ಬಗ್ಗೆ ಕನಿಷ್ಠ ಜ್ಞಾನವಿಲ್ಲವೇ?' - Nanjappa Kalegowda President of Aam Aadmi Party's legal unit

ಗ್ರಾಮಗಳ ಉದ್ದಾರಕ್ಕೆ ಈ ಮೊದಲು ಕರ್ನಾಟಕದಲ್ಲಿ 5 ವರ್ಷ ಸರ್ಕಾರ ನಡೆಸಿದ ನಿಮ್ಮ ಕೊಡುಗೆ ಏನಿದೆ ಎಂಬುದನ್ನು ತಿಳಿಸಿ. ಕಳೆದ ಒಂದು ವರ್ಷದಿಂದ ಒಂದೇ ಒಂದು ಹಳ್ಳಿಯನ್ನು ಉದ್ದಾರ ಮಾಡಿದ್ದೀರಾ? ಎಂಬುದನ್ನು ತೋರಿಸಿ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ್​ ಅವರಿಗೆ ಆಮ್ ಆದ್ಮಿ ಪಕ್ಷದ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಸವಾಲು ಹಾಕಿದ್ದಾರೆ.

Nanjappa kalegauda
ನಂಜಪ್ಪ ಕಾಳೇಗೌಡ
author img

By

Published : Dec 3, 2020, 5:21 PM IST

Updated : Dec 3, 2020, 5:34 PM IST

ಬೆಂಗಳೂರು : ಪ್ರತಿ ಗ್ರಾಮ ಪಂಚಾಯಿತಿಗೆ 1.50 ಕೋಟಿ ರೂ ಅನುದಾನವನ್ನು ಹಾಗೂ ನರೇಗಾ ಯೋಜನೆಯನ್ನು ನೇರವಾಗಿ ನೀಡಲಾಗುವುದು ಎಂದು ಆಮಿಷ ಒಡ್ಡಿರುವ ಉಪ ಮುಖ್ಯಮಂತ್ರಿ ಅಶ್ವತ್ಥ​ ನಾರಾಯಣ್​ ಅವರಿಗೆ ಚುನಾವಣೆ ಘೋಷಣೆಯಾಗಿರುವ ಬಗ್ಗೆ ಕನಿಷ್ಠ ಜ್ಞಾನವಿಲ್ಲವೇ?, ಈ ಕೂಡಲೇ ಈ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಆಮ್ ಆದ್ಮಿ ಪಕ್ಷದ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಆಗ್ರಹಿಸಿದ್ದಾರೆ.

ನಂಜಪ್ಪ ಕಾಳೇಗೌಡ

ನಗರದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ, ಇಷ್ಟು ದಿನ ಗ್ರಾಮಗಳ ಬಗ್ಗೆ ಮಾತನ್ನೇ ಆಡದ ನೀವು ಈಗ "ಗ್ರಾಮ ಸ್ವರಾಜ್ಯ" ಎನ್ನುವ ಮೂಲಕ ಮಹಾತ್ಮ ಗಾಂಧೀಜಿಯವರ ಆಶಯಗಳಿಗೆ ಮಸಿ ಬಳಿಯುತ್ತಿದ್ದೀರಿ. ಚುನಾವಣೆ ಹೊತ್ತಿನಲ್ಲೇ ನಿಮಗೆ ಗ್ರಾಮಗಳ ನೆನಪಾದವೇ?, ಇಷ್ಟು ದಿನ ನಾಪತ್ತೆಯಾಗಿದ್ದ ನೀವು ದಿಢೀರ್​​ ಎಂದು ಪ್ರತ್ಯಕ್ಷವಾಗಿ ಸುಮ್ಮನೆ ಬಡಬಡಾಯಿಸುವುದನ್ನು ನಿಲ್ಲಿಸಿ ಎಂದರು.

ಓದಿ: ಬಿಬಿಎಂಪಿ ಚುನಾವಣೆ: ನಾಳೆ ತೀರ್ಪು ಪ್ರಕಟಿಸಲಿರುವ ಹೈಕೋರ್ಟ್

ಚುನಾವಣೆ ಹೊತ್ತಿನಲ್ಲಿ ಯೋಜನೆಗಳನ್ನು ಘೋಷಿಸಬಾರದು ಎನ್ನುವ ಕನಿಷ್ಠ ತಿಳುವಳಿಕೆ, ತಲೆಯಲ್ಲಿ ಬುದ್ದಿ ಇಲ್ಲದ ನೀವು ನಿಮ್ಮ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ಶುಕ್ರವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

Last Updated : Dec 3, 2020, 5:34 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.