ETV Bharat / state

ಮಂಡ್ಯದಲ್ಲಿ ಒಂದೇ ದಿನ ಗರಿಷ್ಠ ಸೋಂಕು: ಅನಗತ್ಯ ಭಯಬೇಡ ಎಂದ  ಸಚಿವರು

ಈಗಾಗಲೇ ಕ್ವಾರಂಟೈನಲ್ಲಿ ಇರುವವರ ಪೈಕಿ 500ಕ್ಕೂ ಹೆಚ್ಚು ಜನರ ಟೆಸ್ಟ್ ರಿಪೋರ್ಟ್ ಬರಬೇಕಿದೆ. ಇವರಲ್ಲಿ ಪಾಸಿಟಿವ್​​ ಬಂದವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಅದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಯಿತು ಎಂಬ ಕಾರಣಕ್ಕೆ ಜನ ಭಯಪಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ.

Narayana gowda
ಜಿಲ್ಲೆಯ ಜನ ಭಯಬೀಳುವ ಅಗತ್ಯ ಇಲ್ಲವೆಂದು ಧೈರ್ಯ ತುಂಬಿದ ಸಚಿವ ಡಾ. ನಾರಾಯಣಗೌಡ
author img

By

Published : May 19, 2020, 9:28 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮಂಡ್ಯದಲ್ಲಿಯೂ ಒಂದೇ ಅಧಿಕ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯ ಜನತೆ ಆತಂಕ ಪಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ.

Narayana gowda
ವಿಡಿಯೋ ಸಂವಾದ ನಡೆಸಿದ ಸಚಿವ ಡಾ. ನಾರಾಯಣಗೌಡ

ಸಂಜೆ ವಿಕಾಸಸೌಧದಲ್ಲಿ ಜಿಲ್ಲೆಯ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಚಿವರು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಇರುವುದು ನಿಜ. ಬಹುತೇಕರು ಹೊರ ರಾಜ್ಯಗಳಿಂದ ಬಂದು ಕ್ವಾರಂಟೈನ್ ಆಗಿರುವವರೇ ಇದ್ದಾರೆ. ಅವರಿಂದ ಜಿಲ್ಲೆಯ ಜನರಿಗೆ ಹರಡುವ ಸಾಧ್ಯತೆ ಇಲ್ಲ. ಹೊರ ರಾಜ್ಯಗಳಿಂದ ಜಿಲ್ಲೆಗೆ ಬರಲು 2,000ಕ್ಕೂ ಹೆಚ್ಚು ಜನ ಆನ್​ಲೈನ್​ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೆ ಸುಮಾರು 1,400 ಜನ ಬಂದಿದ್ದಾರೆ. ಕಡ್ಡಾಯವಾಗಿ ಅವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕ್ವಾರಂಟೈನ್ ಆಗಿರುವವರಿಗೆ ಚೆನ್ನಾಗಿ ನೋಡಿಕೊಳ್ಳಬೇಕು. ಗುಣಮಟ್ಟದ ಊಟ ಮತ್ತು ತಿಂಡಿ ನೀಡಬೇಕು. ಕ್ವಾರಂಟೈನ್ ಕೇಂದ್ರಗಳಿಂದ ದೂರು ಬರಬಾರದು. ಅಗತ್ಯ ಸೌಲಭ್ಯಗಳು ಕಡ್ಡಾಯವಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲೆಗೆ ಬಂದು ಕ್ವಾರಂಟೈನ್ ಅವಧಿ ಮುಗಿಸಿದವರಿಗೆ ಮತ್ತೊಮ್ಮೆ ಟೆಸ್ಟ್ ಮಾಡಿ, ನೆಗೆಟಿವ್ ಬಂದವರನ್ನು ಮನೆಗೆ ಕಳುಹಿಸಿಕೊಡಲಾಗಿದೆ. ಜಿಲ್ಲೆಯ ಎಲ್ಲ ಗಡಿ ಮಾರ್ಗಗಳನ್ನು ಬಂದ್ ಮಾಡಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಜಿಲ್ಲೆಗೆ ತಮಿಳುನಾಡು, ಆಂಧ್ರಪ್ರದೇಶ, ಉತ್ತರಾಖಂಡ್, ಪಶ್ಚಿಮ ಬಂಗಾಳ, ಕೇರಳ, ರಾಜಸ್ಥಾನ, ಮಹಾರಾಷ್ಟ್ರ ಹಾಗೂ ಗುಜರಾತ್​ನಿಂದ ಬಂದಿದ್ದಾರೆ. ಸೋಂಕು ಪತ್ತೆಗೆ ನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ನಡೆಸಬೇಕು. ಸಾಧನಗಳ ಕೊರತೆ ಇದ್ದರೆ ತಕ್ಷಣ ತಿಳಿಸಬೇಕು. ಕ್ವಾರಂಟೈನ್​ಗೆ ಸ್ಥಳಾವಕಾಶದ ಕೊರತೆ, ಅನುದಾನದ ಅಗತ್ಯತೆ ಇತರ ಯಾವುದೇ ಅಭಾವ ಕಂಡಬಂದರೂ ತಕ್ಷಣವೇ ನನ್ನ ಗಮನಕ್ಕೆ ತರಬೇಕು. ಸಾರ್ವಜನಿಕರಿಗೆ ಆರೋಗ್ಯ ಸೇತು ಆ್ಯಪ್​ ಅಳವಡಿಸಿಕೊಳ್ಳುವಂತೆ ಮಾಹಿತಿ ನೀಡಿ ಎಂದರು.

ಈಗಾಗಲೇ ಕ್ವಾರಂಟೈನಲ್ಲಿ ಇರುವವರ ಪೈಕಿ 500ಕ್ಕೂ ಹೆಚ್ಚು ಜನರ ಟೆಸ್ಟ್ ರಿಪೋರ್ಟ್ ಬರಬೇಕಿದೆ. ಇವರಲ್ಲಿ ಪಾಸಿಟಿವ್​ ಬಂದವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಯಿತು ಎಂಬ ಕಾರಣಕ್ಕೆ ಜನ ಭಯಪಡಬಾರದು. ಸೋಂಕಿತರು ಜಿಲ್ಲಾಡಳಿತ ಸೂಚಿಸಿದಂತೆ ಸ್ವಯಂ ಪ್ರೇರಿತರಾಗಿ ಕ್ವಾರಂಟೈನ್ ಆಗಿದ್ದಾರೆ ಎಂದು ಹೇಳಿದ್ದಾರೆ.

ಉಸ್ತುವಾರಿ ಸಚಿವರು ನಾಳೆ ಜಿಲ್ಲೆಯ ಶಾಸಕರು, ಸಂಸದರ ಜೊತೆ ಸಭೆ ನಡೆಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.