ETV Bharat / state

ಕೇಂದ್ರ ಸಂಪುಟದಲ್ಲಿ ದಲಿತ ಸಮುದಾಯಕ್ಕೆ ಆದ್ಯತೆ ಕಂಡು ಕಾಂಗ್ರೆಸ್ ವಿಚಲಿತ: ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ - Chalavadi Narayanaswamy outrage against congress

ದಲಿತ ಸಮುದಾಯಕ್ಕೆ ಇದುವರೆಗೆ ಯಾವುದೇ ಕೇಂದ್ರ ಸರ್ಕಾರಗಳು ಕೊಡದಷ್ಟು ಪ್ರಾತಿನಿಧ್ಯವನ್ನು ಕೊಟ್ಟಿದ್ದಾರೆ. ಇದು ಸಾಮಾಜಿಕ ಸಾಮರಸ್ಯ ಕಾಪಾಡುವಂತಿದೆ ಎಂದು ಬಿಜೆಪಿ ವಕ್ತಾರ ಹಾಗು ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

Narayana swamy
ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ
author img

By

Published : Jul 9, 2021, 4:39 PM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಂಪುಟದಲ್ಲಿ ದಲಿತ ಸಮುದಾಯಕ್ಕೆ ನೀಡಿರುವ ಹೆಚ್ಚಿನ ಅವಕಾಶ ಕಂಡು ಕಾಂಗ್ರೆಸ್ ನಾಯಕರು ವಿಚಲಿತಗೊಂಡಿದ್ದಾರೆ. ದಲಿತರ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ ಎಂದು ಟೀಕಿಸಿ ಹೊಸ ನಾಟಕ ಶುರು ಮಾಡಿದ್ದಾರೆ ಎಂದು ಬಿಜೆಪಿ ವಕ್ತಾರ ಹಾಗು ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಕ್ಕೆ ಈ ಬಾರಿ 4 ಸಚಿವ ಸ್ಥಾನ ಲಭಿಸಿವೆ. ಅದರಲ್ಲಿ ನಾರಾಯಣಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯದ ಸಚಿವ ಸ್ಥಾನವನ್ನು ನೀಡುವ ಮೂಲಕ ಮೋದಿ ಇಡೀ ದೇಶಕ್ಕೆ ಸಾಮಾಜಿಕ ನ್ಯಾಯ ನೀಡಿದ್ದಾರೆ. 8 ಜನ ಎಸ್‍ಟಿ ಮತ್ತು 12 ಜನರನ್ನು ಎಸ್‍ಸಿ ಸಮುದಾಯದಿಂದ ಸಚಿವರನ್ನಾಗಿ ಆಯ್ಕೆ ಮಾಡಲಾಗಿದೆ. ದಲಿತ ಸಮುದಾಯಕ್ಕೆ ಇದುವರೆಗೆ ಯಾವುದೇ ಕೇಂದ್ರ ಸರ್ಕಾರಗಳು ಕೊಡದಷ್ಟು ಪ್ರಾತಿನಿಧ್ಯವನ್ನು ಕೊಟ್ಟಿದ್ದಾರೆ. ಇದು ಸಾಮಾಜಿಕ ಸಾಮರಸ್ಯ ಕಾಪಾಡುವಂತಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮತ್ತು ಸಬ್ ಕಾ ವಿಶ್ವಾಸ್ ಮಾತಿನಂತೆ ಅವರು ನಡೆದುಕೊಂಡಿದ್ದಾರೆ ಎಂದರು.

ಜನರ ದಾರಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್‍ನ ದೊಡ್ಡ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ದಲಿತರಿಗೆ ಇಷ್ಟೊಂದು ಸ್ಥಾನ ಕೊಟ್ಟಿರುವುದು ದಾರಿ ತಪ್ಪಿಸುವ ಕೆಲಸ ಎಂದು ಹೇಳಿಕೆ ನೀಡಿದ್ದಾರೆ. ಇದು ನಮಗ್ಯಾರಿಗೂ ಅರ್ಥವಾಗಿಲ್ಲ. ಕಾಂಗ್ರೆಸ್ಸಿಗರು ದಲಿತರನ್ನು ದಾರಿ ತಪ್ಪಿಸಿದ್ದು ನೆನಪಾಗಿ ಅವರು ಹೀಗೆ ಹೇಳಿರಬಹುದೆಂದು ನನಗನಿಸುತ್ತಿದೆ. ದಲಿತರಿಗೆ ಹೆಚ್ಚು ಸ್ಥಾನ ನೀಡಿದ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದರೆ ಅದು ಸಾಂದರ್ಭಿಕವಾಗಿ ಸರಿ ಇರುತ್ತಿತ್ತು. ಆದರೆ, ಅದರ ಬದಲು ಕಾಂಗ್ರೆಸ್‍ನವರು ಈಗ ವಿಚಲಿತರಾಗಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಟೀಕಿಸಿದರು.

ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ

ಒಟ್ಟು ಸಚಿವ ಸ್ಥಾನಗಳ ಪೈಕಿ 27 ಜನ ಒಬಿಸಿ, ಎಸ್‍ಸಿ 12, ಎಸ್ಟಿ 8, ಅಲ್ಪಸಂಖ್ಯಾತರ ಸಮುದಾಯಕ್ಕೆ 5 ಸೇರಿ 52 ಸ್ಥಾನಗಳನ್ನು ನೀಡಿ ಸಾಮಾಜಿಕ ನ್ಯಾಯ ಮೆರೆದಿದ್ದಾರೆ. ಆದರೂ, ಮೇಲ್ವರ್ಗಕ್ಕೆ ಅರ್ಧಕ್ಕಿಂತ ಹೆಚ್ಚು ಸ್ಥಾನ ಕೊಡಲಾಗಿದೆ ಎಂದು ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಜಾತಿಗೆ ಮಣೆ ಹಾಕುವುದು ಕಾಂಗ್ರೆಸ್‍ನ ಕಾರ್ಯ. ಜಾತಿ ನೋಡಿ ಮಣೆ ಹಾಕುವ ಕಾರ್ಯ ಬಿಜೆಪಿಯಲ್ಲಿ ಇಲ್ಲ. ಆದರೆ, ಸಾಮಾಜಿಕ ನ್ಯಾಯದ ನೆಲೆಯಲ್ಲಿ ಎಲ್ಲರನ್ನೂ ಗುರುತಿಸುವ ಕಾರ್ಯವನ್ನು ಪಕ್ಷ ಮಾಡಿದೆ ಎಂದರು.

ಪ್ರಧಾನಿ ಈಗ ದೊಡ್ಡ ಉಡುಗೊರೆಯನ್ನು ನೀಡಿದ್ದಾರೆ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತಿತರ ಕೆಲವು ರಾಜಕಾರಣಿಗಳು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳುತ್ತಿದ್ದರು. 25 ಬಿಜೆಪಿ ಸಂಸದರನ್ನು ಆಯ್ಕೆ ಮಾಡಿದ ರಾಜ್ಯಕ್ಕೆ ಪ್ರಧಾನಿ ಈಗ ದೊಡ್ಡ ಉಡುಗೊರೆಯನ್ನು ನೀಡಿದ್ದಾರೆ ಎಂದು ಹೆಮ್ಮೆಯಿಂದ ನಾವು ಹೇಳುತ್ತೇವೆ ಎಂದರು.

ರಾಜ್ಯದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದ ಕರಾವಳಿ ಭಾಗವನ್ನು ಪ್ರತಿನಿಧಿಸುವ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಚಿವ ಸ್ಥಾನ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಬೀದರ್​ನಿಂದ 2ನೇ ಬಾರಿ ಸಂಸದರಾಗಿ ಆಯ್ಕೆಯಾದ ಭಗವಂತ್ ಖೂಬಾ ಅವರಿಗೆ ಸಚಿವ ಸ್ಥಾನ ನೀಡಿದ್ದಾರೆ. ಅದೇ ರೀತಿಯಲ್ಲಿ ಬೆಂಗಳೂರು ನಗರಕ್ಕೆ ಮಾತ್ರವಲ್ಲದೆ, ವಿಜ್ಞಾನ, ತಂತ್ರಜ್ಞಾನ, ಕೌಶಲ್ಯ, ಇಂಜಿನಿಯರಿಂಗ್, ಮಾಧ್ಯಮ ಕ್ಷೇತ್ರಗಳಿಗೆ ದೊಡ್ಡ ಕೊಡುಗೆಯನ್ನು ಕೊಟ್ಟ ರಾಜೀವ್ ಚಂದ್ರಶೇಖರ್ ಅವರನ್ನು ಸಚಿವರನ್ನಾಗಿ ಮಾಡಿದ್ದಾರೆ. ದಲಿತ ಸಮುದಾಯದ ಎ ನಾರಾಯಣ ಸ್ವಾಮಿಗೂ ಅವಕಾಶ ನೀಡಿದ್ದಾರೆ. ಇದಕ್ಕಾಗಿ ಪ್ರಧಾನಿಯವರನ್ನು ಅಭಿನಂದಿಸುವುದಾಗಿ ತಿಳಿಸಿದರು.

ಮೂಲಭೂತ ಸೌಕರ್ಯ ಹೆಚ್ಚಳಕ್ಕೆ ಇದು ಬಳಕೆಯಾಗಲಿದೆ: ಕೋವಿಡ್ 3ನೇ ಅಲೆ ತಡೆಯಲು ದೇಶಕ್ಕೆ 23,123 ಕೋಟಿ ರೂಪಾಯಿಯನ್ನು ನೀಡಿದ್ದನ್ನು ಬಿಜೆಪಿ ಸ್ವಾಗತಿಸುತ್ತದೆ. ರೈತರು, ಕೃಷಿ ಕ್ಷೇತ್ರಕ್ಕೆ ಅನ್ಯಾಯವಾಗಿದೆ ಎಂದು ಸಿದ್ದರಾಮಯ್ಯ ಅವರು ಪದೇ ಪದೆ ಹೇಳುತ್ತಿದ್ದರು. ಈಗ ಮತ್ತೆ ಒಂದು ಲಕ್ಷ ಕೋಟಿ ರೂಪಾಯಿಯನ್ನು ಕೃಷಿ ಮತ್ತಿತರ ಪೂರಕ ಕ್ಷೇತ್ರಕ್ಕೆ ಪ್ರಧಾನಿಯವರು ಘೋಷಿಸಿದ್ದಾರೆ. ಕೋಲ್ಡ್ ಸ್ಟೋರೇಜ್, ಮಾರುಕಟ್ಟೆ ಅಭಿವೃದ್ಧಿ ಮತ್ತಿತರ ಮೂಲಭೂತ ಸೌಕರ್ಯ ಹೆಚ್ಚಳಕ್ಕೆ ಇದು ಬಳಕೆಯಾಗಲಿದೆ ಎಂದು ವಿವರಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್​ ನಾರಾಯಣ ಮಾತನಾಡಿ, ದೇಶದಲ್ಲಿ ಶೌಚಮುಕ್ತ ಮನೆಗಳು- ಗ್ರಾಮಗಳನ್ನು ಹೊಂದುವ ಪ್ರಧಾನಿಯವರ ಪ್ರಯತ್ನ ಶ್ಲಾಘನೀಯ. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಜಲ ಜೀವನ್ ಮಿಷನ್ ಯೋಜನೆ ಜಾರಿಯಾಗಿದೆ. ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಇರುವ ಜಿಲ್ಲೆ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿನಿಧಿಸುವ ಜಿಲ್ಲೆಯಾದ ರಾಮನಗರದಲ್ಲಿ 1,23,175 ಮನೆಗಳಿಗೆ ಕುಡಿಯುವ ನೀರು ನೀಡುವ ಯೋಜನೆ ಚಾಲನೆಯಾಗಿದೆ. 43 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಕೊಳಾಯಿ ನೀರಿನ ಸಂಪರ್ಕ ಕೊಡಲಾಗಿದೆ. ಇದರಡಿ 658 ಕಾಮಗಾರಿಗಳಿಗೆ ಚಾಲನೆ ಕೊಡಲಾಗಿದೆ ಎಂದರು.

ಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿರುವುದು ನೀರಾವರಿ ಕ್ಷೇತ್ರಕ್ಕೆ ನೀಡಿದ ದೊಡ್ಡ ಕೊಡುಗೆ. 4 ಹೊಸ ಸಚಿವರು ಬರುವ ಮೂಲಕ ಹೆಚ್ಚು ಯೋಜನೆಗಳು ರಾಜ್ಯಕ್ಕೆ ಬರಲಿವೆ ಮತ್ತು ಕೇಂದ್ರ ಸರ್ಕಾರವು ಇದಕ್ಕೆ ಸಮರ್ಪಕವಾಗಿ ಸ್ಪಂದಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪರೀಕ್ಷೆ ನಡೆಸೋದು ಪ್ರತಿಷ್ಠೆಯಲ್ಲ, ಹಟವೂ ಇಲ್ಲ, ಮಕ್ಕಳ ಭವಿಷ್ಯವಷ್ಟೇ ಮುಖ್ಯ: ಸಚಿವ ಸುರೇಶ್ ಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.