ETV Bharat / state

ಬೆಂಗಳೂರಿನಲ್ಲಿ ಸ್ವಂತ ಏರ್ ಕ್ರಾಪ್ಟ್ ತಯಾರಿಸುವ ಗುರಿಯನ್ನು ಹೊಂದಿದ್ದೇವೆ: ಸಿಎಂ ಬಸವರಾಜ ಬೊಮ್ಮಾಯಿ‌

ಸೋಮವಾರ ಏರ್ ಶೋ 2023 ಉದ್ಘಾಟನೆ- ಬೆಂಗಳೂರಿಗೆ ಬಂದಿಳಿದ ಪ್ರಧಾನಿ - ಸಿಲಿಕಾನ್​ ಸಿಟಿಯಲ್ಲಿ ಸ್ವಂತ ಏರ್​ಕ್ರಾಪ್ಟ್​ ತಯಾರಿಸುವ ಗುರಿ ಹೊಂದಿರುವುದಾಗಿ ಸಿಎಂ ಬೊಮ್ಮಾಯಿ ಹೇಳಿಕೆ

Narendra Modi arrives in Bangalore to inaugurate the Air Show tomorrow
ಏರ್ ಶೋ ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮನ
author img

By

Published : Feb 12, 2023, 9:10 PM IST

Updated : Feb 12, 2023, 9:41 PM IST

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನ ಯಲಹಂಕದ ಏರ್ ಫೋರ್ಸ್ ಸ್ಟೇಷನ್​ನಲ್ಲಿ ಆಯೋಜಿಸಲಾಗಿರುವ ಏರೋ ಇಂಡಿಯಾ-2023ರಲ್ಲಿ ಪಾಲ್ಗೊಳ್ಳಲು ಭಾರತೀಯ ವಾಯುಸೇನಾ ವಿಮಾನದ ಮೂಲಕ ಬೆಂಗಳೂರಿನ ಎಚ್.ಎ.ಎಲ್.ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಹಾಗೂ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಂಸದರಾದ ತೇಜಸ್ವಿ ಸೂರ್ಯ, ಸಚಿವ ಭೈರತಿ ಬಸವರಾಜ್, ಶಾಸಕರಾದ ಅರವಿಂದ ಲಿಂಬಾವಳಿ, ಎ.ಕೃಷ್ಣಪ್ಪ, ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ, ಡಿಜಿ ಮತ್ತು ಐಜಿಪಿ ಹಾಗೂ ಹಿರಿಯ ಅಧಿಕಾರಿಗಳು ಮತ್ತು ಹೆಚ್.ಎ.ಎಲ್ ನ ಹಿರಿಯ ಅಧಿಕಾರಿಗಳು ಹಾಗೂ ಇನ್ನಿತರರು ಇದ್ದರು.

ಏರೋ ಇಂಡಿಯಾ-2023 ಫೆ.13ರಿಂದ ಫೆ.17ರವರೆಗೆ ನಡೆಯಲಿದೆ. ಇಂದು ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿರುವ ಪ್ರಧಾನಿ ಮೋದಿ ನಾಳೆ ಬೆಳಗ್ಗೆ ಏರ್ ಶೋ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ತ್ರಿಪುರಕ್ಕೆ ತೆರಳಲಿದ್ದಾರೆ.

ಬೆಂಗಳೂರಿನಲ್ಲಿ ಸ್ವಂತ ಏರ್ ಕ್ರಾಪ್ಟ್ ತಯಾರಿಸುವ ಗುರಿ: ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ಹಮ್ಮಿಕೊಳ್ಳಲಾಗಿದ್ದ ಏರೋ ಇಂಡಿಯಾ 2023ರ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರೊಂದಿಗೆ ಪಾಲ್ಗೊಂಡು ಮಾತನಾಡಿದ ಸಿಎಂ, ಬೆಂಗಳೂರು ವಾಣಿಜ್ಯ ಮತ್ತು ರಕ್ಷಣಾ ಉತ್ಪಾದನೆ ಕೇಂದ್ರವಾಗಿದೆ. ಬೆಂಗಳೂರಿನಲ್ಲಿ ಸ್ವಂತ ಏರ್ ಕ್ರಾಪ್ಟ್ ತಯಾರಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಈ ಕಾರ್ಯಸಾಧನೆಗೆ ಜಾಗತಿಕವಾಗಿ ಸಾಕಷ್ಟು ಕ್ರಮ ವಹಿಸಿದ್ದು, ಈ ದೇಶದ ಭವಿಷ್ಯಕ್ಕೆ ನಾವು ಸೂಕ್ತ ಸ್ಥಳ ಮತ್ತು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಿದ್ದೇವೆ ಎಂದರು.

  • ಇಂದು ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಏರೋ ಇಂಡಿಯಾ 2023ರ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ @rajnathsingh ಅವರೊಂದಿಗೆ ಪಾಲ್ಗೊಂಡು ಮಾತನಾಡಿದೆನು. pic.twitter.com/o6RjyStJ76

    — Basavaraj S Bommai (@BSBommai) February 12, 2023 " class="align-text-top noRightClick twitterSection" data=" ">

ರಾಜ್ಯವು ಏರೊಸ್ಪೇಸ್ ನೀತಿ ಹಾಗೂ ರಕ್ಷಣಾ ಪಾರ್ಕ್​ನ ಮೊದಲ ಹಂತ ಪೂರ್ಣಗೊಂಡಿದೆ. 2 ನೇ ಹಂತವೂ ಪ್ರಾರಂಭವಾಗುತ್ತಿದೆ. ಬೆಂಗಳೂರು ಏರೋಸ್ಪೇಸ್ ಕೇಂದ್ರವಾಗಿದೆ. ಇದು ಏರ್ ಶೋ ನಡೆಸಲು ಅತ್ಯಂತ ಸೂಕ್ತ ಸ್ಥಳ. ಭಾರತೀಯ ಏರೋಸ್ಪೇಸ್ ತಂತ್ರಜ್ಞಾನವನ್ನು ಇದರಿಂದ ಬಿಂಬಿಸಬಹುದಾಗಿದೆ. ಏರೋಸ್ಪೇಸ್ ಅಭಿವೃದ್ಧಿಯ ಶ್ರೇಯಸ್ಸು ಕರ್ನಾಟಕಕ್ಕೆ ಸಲ್ಲಬೇಕು ಎಂದು ತಿಳಿಸಿದರು.

ಗೌರವದ ಸಂಕೇತ: ಏರ್​ ಇಂಡಿಯಾ ಶೋ ಆತಿಥ್ಯ ವಹಿಸುವುದು ಗೌರವದ ಸಂಕೇತವಾಗಿದೆ. ಏರ್ ಶೋ ಆಯೋಜಿಸುವುದು ಕರ್ನಾಟಕ ಮತ್ತು ಬೆಂಗಳೂರಿಗೆ ಅಭ್ಯಾಸವಾಗಿದೆ. ಏರೊ ಸ್ಪೇಸ್ ಇಕೋ ಸಿಸ್ಟಮ್ ಅಭಿವೃದ್ಧಿಪಡಿಸಿದ ನಮ್ಮ ಹಿರಿಯರಿಗೆ ಅಭಿನಂದಿಸಬೇಕು, ಪ್ರತಿ ಬಾರಿ ಆತಿಥ್ಯ ವಹಿಸಿದಾಗಲೂ ಅತ್ಯಂತ ಯಶಸ್ವಿಯಾಗಿ ರಕ್ಷಣಾ ಹಾಗೂ ಏರೋಸ್ಪೇಸ್ ಉದ್ಯಮ ಹಾಗೂ ಸಾಮರ್ಥ್ಯದ ಪ್ರದರ್ಶನ ಮಾಡಿದ್ದೇವೆ. ಕೋವಿಡ್ ಸಮಯದಲ್ಲಿಯೂ ಕಾರ್ಯಕ್ರಮಗಳು ರದ್ದಾದರೂ ನಾವು ಎರಡು ವರ್ಷಗಳ ಹಿಂದೆ ಏರ್ ಶೊ ಯಶಸ್ವಿಯಾಗಿ ಜರುಗಿತು. ಅದು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಹೆಮ್ಮೆಯಿಂದ ಪ್ರಸ್ತಾಪಿಸಿದರು.

air show
ಏರೋ ಇಂಡಿಯಾ 2023ರ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಮತ್ತು ಸಿಎಂ ಬೊಮ್ಮಾಯಿ

ಇದು ಅತ್ಯಂತ ದೊಡ್ಡ ಏರ್‌ ಶೋ ಆಗಿದ್ದು, ಅತಿ ಹೆಚ್ಚು ವಿದೇಶಿ ರಕ್ಷಣಾ ಮಂತ್ರಿಗಳು, ಏರ್ ಪೋರ್ಸ್ ಸಿಇಒಗಳು, 35,000 ಚದರ ಅಡಿ ವಿಸ್ತೀರ್ಣದ ಪ್ರದರ್ಶನ, 67 ವಸ್ತುಪ್ರದರ್ಶನ, 600 ರಿಂದ 809ಗೆ ಪ್ರದರ್ಶನಗಳು, 98 ವಿದೇಶಿ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಒಪ್ಪಂದಗಳ ಸಂಖ್ಯೆಯೂ ಹೆಚ್ಚಾಗಲಿದೆ ಎಂದರು.

ವಾಯುಪಡೆಯ ಬಲವರ್ಧನೆ: ವಾಯುಪಡೆಯ ತಂತ್ರಜ್ಞಾನ, ಸಾಮರ್ಥ್ಯ, ಮಾನವ ಸಂಪನ್ಮೂಲ ಬಲಪಡಿಸುವುದು ನಿರಂತರ ಪ್ರಕ್ರಿಯೆಯಾಗಿದೆ. ರಾಜ್ ನಾಥ್ ಸಿಂಗ್ ಅವರ ನಾಯಕತ್ವದಲ್ಲಿ ರಕ್ಷಣಾ ಉತ್ಪಾದನೆಯಲ್ಲಿ, ತಂತ್ರಜ್ಞಾನ ಮೇಲ್ದರ್ಜೆಗೆರುವಲ್ಲಿ ಭಾರತ ಆತ್ಮನಿರ್ಭರವಾಗುತ್ತಿದೆ. ನಮ್ಮ ರಕ್ಷಣಾ ಉಪಕರಣಗಳು ಶೇ 75% ರಷ್ಟು ಆಮದು ಮಾಡಿಕೊಳ್ಳುತ್ತಿದ್ದೆವು‌. ಈಗ ರಪ್ತು ಮಾಡುತ್ತಿದ್ದೇವೆ‌. ಏರೊ ಸ್ಪೇಸ್​ಗೆ ಸಂಬಂಧಿಸಿದಂತೆ ಕರ್ನಾಟಕ ಮಹತ್ವದ ಪಾತ್ರ ವಹಿಸುತ್ತದೆ. ಕರ್ನಾಟಕದಲ್ಲಿ 1940 ರಲ್ಲಿ ಹೆಚ್ಎಎಲ್ ಸ್ಥಾಪನೆಯಾಗಿದ್ದು, ಎನ್​​ಎಎಲ್​, ಬಿಎಚ್ಇಎಲ್, ಡಿಆರ್​ಡಿಒ ಎಲ್ಲವೂ ಆರ್ ಅಂಡ್ ಡಿ ಸಾಮರ್ಥ್ಯವನ್ನು ಹೆಚ್ಚಿಸಿವೆ ಎಂದು ಸಿಎಂ ಹೇಳಿದರು.

1960 ರಲ್ಲಿ ಬೆಂಗಳೂರಿನಲ್ಲಿ ಇಸ್ರೊ ಆರಂಭವಾಯಿತು. ಪ್ರತಿ ದಶಕದಲ್ಲಿ ಏರೊ ಸ್ಪೇಸ್ ಅಭಿವೃದ್ಧಿಯಾಗಿದೆ. ಸ್ಥಳ, ಸಾಮರ್ಥ್ಯ ವೃದ್ಧಿಯಾಯಿತು. 1960 ಆರ್ಯಭಟ ಉಪಗ್ರಹ ಬೆಂಗಳೂರಿನಿಂದ ಉಡಾವಣೆ ಮಾಡಲಾಯಿತು. ಶೇ 67 % ರಷ್ಟು ಏರೋಸ್ಪೇಸ್ ಉಪಕರಣಗಳು ಕರ್ನಾಟಕದಿಂದ ಉತ್ಪಾದನೆಯಾಗುತ್ತದೆ ಎಂದು ತಿಳಿಸಿದರು.

ಏರ್​ ಇಂಡಿಯಾ ಶೊ 2023 ನ್ನು ಜನರು ನೆನಪಿನಲ್ಲಿಡುತ್ತಾರೆ‌. ಅಲ್ಲದೇ ಇಲ್ಲಿಂದ ಒಳ್ಳೆಯ ನೆನಪುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಈ ಕಾರ್ಯಕ್ರಮ ಯಶಸ್ವಿಯಾಗುವ ವಿಶ್ವಾಸವಿದ್ದು, ಏರೋಸ್ಪೇಸ್ ಹಾಗೂ ರಕ್ಷಣಾ ಉದ್ಯಮದ ವಿಸ್ತರಣೆಗೆ ಇದು ಸಹಕಾರಿಯಾಗಲಿದೆ. ಅರ್ಧ ಜಗತ್ತು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಇಡೀ ವಿಶ್ವವೇ ನಮ್ಮ ಕಡೆ ನೋಡುವಂತಾಗಬೇಕು ಎಂದು ಸಿಎಂ ಆಶಿಸಿದರು.

ಹದಿನಾಲ್ಕನೇ ಬಾರಿ ಏರೋ ಇಂಡಿಯಾ ಶೋ ಆಯೋಜನೆ ಮಾಡಲು ನಮಗೆ ಈ ಅವಕಾಶ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ತಿಳಿಸಿದರು.

ಇದನ್ನೂ ಓದಿ: ನಾಳೆ ಏರ್ ಶೋ ಉದ್ಘಾಟನೆ: ಇಂದು ರಾತ್ರಿ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ

Last Updated : Feb 12, 2023, 9:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.