ETV Bharat / state

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಕರ್ನಾಟಕಕ್ಕೆ 941 ಕೋಟಿ ಮಂಜೂರು: ಮೋದಿಗೆ ಸಿಎಂ ಧನ್ಯವಾದ - ಕೇಂದ್ರ ಗೃಹ ಸಚಿವ ಅಮಿತ್ ಶಾ

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ರಾಜ್ಯಕ್ಕೆ ಹೆಚ್ಚುವರಿಯಾಗಿ ಕೇಂದ್ರ ಸರ್ಕಾರ 941 ಕೋಟಿ ರೂ ಮಂಜೂರು ಮಾಡಿದೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿ, ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

modi
mOdi
author img

By

Published : Mar 13, 2023, 11:05 PM IST

ಬೆಂಗಳೂರು: ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಹೆಚ್ಚುವರಿಯಾಗಿ 1816.162 ಕೋಟಿಯನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಹೆಚ್ಚುವರಿ ಹಣ ಬಿಡುಗಡೆಗೆ ಒಪ್ಪಿಗೆ ಸಿಕ್ಕಿದೆ. ಕರ್ನಾಟಕಕ್ಕೆ 941.04 ಕೋಟಿ, ಅಸ್ಸೋಂಗೆ 520.466, ಹಿಮಾಚಲ ಪ್ರದೇಶಕ್ಕೆ 239.31 ಕೋಟಿ, ಮೇಘಾಲಯಕ್ಕೆ 47.326 ಕೋಟಿ ಮತ್ತು ನಾಗಾಲ್ಯಾಂಡ್​ಗೆ 68.02 ಕೋಟಿ ಹೆಚ್ಚುವರಿ ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದೆ.

  • 2022ರ ಅವಧಿಯಲ್ಲಿ ಉಂಟಾದ ಪ್ರವಾಹ, ಭೂ ಕುಸಿತ, ಅತಿವೃಷ್ಟಿಯಿಂದ ಹಾನಿಗೊಳಗಾಗಿದ್ದ ರಾಜ್ಯಕ್ಕೆ, ಪ್ರಧಾನಮಂತ್ರಿ ಶ್ರೀ @narendramodi ನೇತೃತ್ವದ ಕೇಂದ್ರ ಸರ್ಕಾರವು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಹೆಚ್ಚುವರಿಯಾಗಿ ₹941.04 ಕೋಟಿಯನ್ನು ಮಂಜೂರು ಮಾಡಿದ್ದು, ಸಹಜವಾಗಿಯೇ ಹರ್ಷ ತಂದಿದೆ.
    1/2

    — Basavaraj S Bommai (@BSBommai) March 13, 2023 " class="align-text-top noRightClick twitterSection" data=" ">

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ರಾಜ್ಯಕ್ಕೆ ಹೆಚ್ಚುವರಿಯಾಗಿ 941 ಕೋಟಿ ರೂ ಮಂಜೂರು ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಧನ್ಯವಾದ ತಿಳಿಸಿದ್ದಾರೆ. 2022ರ ಅವಧಿಯಲ್ಲಿ ಉಂಟಾದ ಪ್ರವಾಹ, ಭೂ ಕುಸಿತ, ಅತಿವೃಷ್ಟಿಯಿಂದ ಹಾನಿಗೊಳಗಾಗಿದ್ದ ರಾಜ್ಯಕ್ಕೆ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಹೆಚ್ಚುವರಿಯಾಗಿ ₹941.04 ಕೋಟಿಯನ್ನು ಮಂಜೂರು ಮಾಡಿದ್ದು, ಸಹಜವಾಗಿಯೇ ಹರ್ಷ ತಂದಿದೆ. ಕರ್ನಾಟಕದ ಬಗೆಗಿನ ವಿಶೇಷ ಕಾಳಜಿಗಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ 2022-23ರಲ್ಲಿ ಕೇಂದ್ರ ಸರ್ಕಾರವು 25 ರಾಜ್ಯಗಳಿಗೆ 15,770.40 ಕೋಟಿ ಮತ್ತು ನಾಲ್ಕು ರಾಜ್ಯಗಳಿಗೆ 502.744 ಕೋಟಿ ರೂ ಬಿಡುಗಡೆ ಮಾಡಿತ್ತು.

ಇದನ್ನೂ ಓದಿ: ಕಾಂಗ್ರೆಸ್​ ನನ್ನ ಸಮಾಧಿ ತೋಡುವ ಕನಸು ಕಾಣುತ್ತಿದೆ : ಮಂಡ್ಯದಲ್ಲಿ ಮೋದಿ ವಾಗ್ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.