ಬೆಂಗಳೂರು: ಕಬ್ಬನ್ ಪಾರ್ಕ್ನ ಬಾಲ ಭವನದಲ್ಲಿ ಮಗಳನ್ನ ಉಳಿಸಿ, ಮಗಳನ್ನ ಓದಿಸಿ. ಉತ್ತಮ ನಾಳೆಗಾಗಿ ಹೆಣ್ಣು ಮಗುವನ್ನ ಉಳಿಸಿ ಎಂಬ ಶೀರ್ಷಿಕೆ ಅಡಿಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾಜೊಲ್ಲೆ ಕಾರ್ಯಕ್ರಮ ಉದ್ಘಾಟನೆ ಮಾಡಿದರು.
ಕಾರ್ಯಕ್ರಮದಲ್ಲಿ ಮಾತಾನಾಡಿದ ಅವರು, ಹೆಣ್ಣು ಮತ್ತು ಗಂಡು ಮಕ್ಕಳು ಎರಡೂ ಸಮಾಜದ ಎರಡು ಕಣ್ಣುಗಳಿದ್ದಂತೆ. ಆದರೂ ಕೂಡಾ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಹೆಚ್ಚು ನಡೆಯುತ್ತಿದೆ. ಹೆಣ್ಣು ಗಂಡು ಎಂಬ ಬೇಧ ಭಾವವನ್ನ ಹೋಗಲಾಡಿಸಬೇಕು. ಆಗಲೇ ಸಮಾಜ ಅಭಿವೃದ್ಧಿಯಾಗಲು ಸಾಧ್ಯ. ಇದರಿಂದಲೇ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಹೆಣ್ಣು ಮಗುವನ್ನ ಉಳಿಸಿ ಹೆಣ್ಣು ಮಗುವನ್ನ ಓದಿಸಿ ಅನ್ನೋ ಕಾರ್ಯಕ್ರಮ ನಡೆಸುತ್ತಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರೂ ಕೂಡಾ ಭೇಟಿ ಪಡಾವೋ ಭೇಟಿ ಬಚಾವೋ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ಇದರಿಂದ ಪ್ರತಿ ಜಿಲ್ಲೆಯಲ್ಲೂ ಕೂಡಾ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಇನ್ನು ಇದೇ ವೇಳೆ ಹಲವು ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.